Rohan Bopanna: ಟೆನಿಸ್ ಅಂಗಳದಲ್ಲಿ ಹೊಸ ಇತಿಹಾಸ ರಚಿಸಿದ ರೋಹನ್ ಬೋಪಣ್ಣ

Rohan Bopanna: ಆಸ್ಟ್ರೇಲಿಯಾ ಓಪನ್​ ಡಬಲ್ಸ್​ನಲ್ಲಿ ಅದ್ಭುತ ಪ್ರದರ್ಶನ ಮುಂದುವರೆಸಿರುವ ಕರ್ನಾಟಕದ ರೋಹನ್ ಬೋಪಣ್ಣ ಇದೀಗ ಸೆಮಿಫೈನಲ್​ಗೆ ಪ್ರವೇಶಿಸಿದ್ದಾರೆ. ಅಲ್ಲದೆ ವಿಶ್ವ ಟೆನಿಸ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ವಿಶೇಷ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ.

Rohan Bopanna: ಟೆನಿಸ್ ಅಂಗಳದಲ್ಲಿ ಹೊಸ ಇತಿಹಾಸ ರಚಿಸಿದ ರೋಹನ್ ಬೋಪಣ್ಣ
Rohan Bopanna
Follow us
| Updated By: ಝಾಹಿರ್ ಯೂಸುಫ್

Updated on: Jan 24, 2024 | 10:27 AM

ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್​ನ ಪುರುಷರ ಡಬಲ್ಸ್​ನಲ್ಲಿ ಭಾರತದ ರೋಹನ್ ಬೋಪಣ್ಣ (Rohan Bopanna) ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಸೆಮಿಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಗೆಲುವಿನೊಂದಿಗೆ ATP ಡಬಲ್ಸ್​ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಬೋಪಣ್ಣ ಪಾಲಾಗಿದೆ.

ಮೂಲತಃ ಕೊಡಗಿನವರಾದ ರೋಹನ್ ಬೋಪಣ್ಣ ತಮ್ಮ 43ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ. ಇದಕ್ಕೂ ಮುನ್ನ ಎಟಿಪಿ ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಯುಎಸ್​ಎ ಆಟಗಾರ ಆಸ್ಟಿನ್ ಕ್ರಾಜಿಸೆಕ್ ಅಗ್ರಸ್ಥಾನದಲ್ಲಿದ್ದರು. ಆದರೆ ಆಸ್ಟ್ರೇಲಿಯನ್ ಓಪನ್​ ಡಬಲ್ಸ್​ನಲ್ಲಿ ಕ್ರಾಜಿಸೆಕ್ ಮತ್ತು ಅವರ ಕ್ರೊಯೇಷಿಯಾದ ಜೊತೆಗಾರ ಇವಾನ್ ಡೋಡಿಗ್ ಎರಡನೇ ಸುತ್ತಿನಲ್ಲಿ ನಿರ್ಗಮಿಸಿದ್ದಾರೆ. ಇತ್ತ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಸೆಮಿಫೈನಲ್​ಗೇರುವ ಮೂಲಕ ರೋಹನ್ ಬೋಪಣ್ಣ ಟೆನಿಸ್ (ಡಬಲ್ಸ್​) ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಭಾರತದ 4ನೇ ಟೆನಿಸ್ ತಾರೆ:

ವಿಶ್ವ ಟೆನಿಸ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ ನಾಲ್ಕನೇ ಟೆನಿಸ್ ತಾರೆ ಎಂಬ ಹೆಗ್ಗಳಿಕೆಗೂ ರೋಹನ್ ಬೋಪಣ್ಣ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಹೇಶ್ ಭೂಪತಿ, ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಝಾ ಡಬಲ್ಸ್‌ನಲ್ಲಿ ನಂ.1 ಸ್ಥಾನ ಅಲಂಕರಿಸಿದ್ದರು.

ಇದೀಗ ತಮ್ಮ ಹಿರಿಯ ವಯಸ್ಸಿನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ರೋಹನ್ ಬೋಪಣ್ಣ ಡಬಲ್ಸ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ರೋಹನ್ ಬೋಪಣ್ಣ ಸಾಧನೆ:

2017 ರಲ್ಲಿ ರೋಹನ್ ಬೋಪಣ್ಣ ಮಿಶ್ರ ಡಬಲ್ಸ್‌ನಲ್ಲಿ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದಿದ್ದರು. ಕೆನಡಾದ ಗೇಬ್ರಿಯೆಲಾ ದಬ್ರೊವ್ಸ್ಕಿ ಅವರೊಂದಿಗೆ ಫ್ರೆಂಚ್ ಓಪನ್‌ನಲ್ಲಿ ಈ ಸಾಧನೆ ಮಾಡಿದ್ದರು. ಹಾಗೆಯೇ US ಓಪನ್‌ನ ಪುರುಷರ ಡಬಲ್ಸ್‌ನಲ್ಲಿ ಎರಡು ಬಾರಿ ರನ್ನರ್ ಅಪ್ ಆಗಿದ್ದಾರೆ.

2010 ರಲ್ಲಿ ಪಾಕಿಸ್ತಾನದ ಐಸಾಮ್-ಉಲ್-ಹಕ್ ಖುರೇಷಿ ಮತ್ತು 2023 ರಲ್ಲಿ ಎಬ್ಡೆನ್ ಅವರೊಂದಿಗೆ ಗ್ರ್ಯಾಂಡ್ ಸ್ಲಾಮ್ ಫೈನಲ್​ ಆಡಿದ್ದರು. ಇದಾಗ್ಯೂ ಪ್ರಶಸ್ತಿ ಸುತ್ತಿನಲ್ಲಿ ಸೋಲುವ ಮೂಲಕ ರೋಹನ್ ಬೋಪಣ್ಣ ನಿರಾಸೆ ಅನುಭವಿಸಿದರು.

ಇದನ್ನೂ ಓದಿ: Virat Kohli: ಮೈದಾನಕ್ಕಿಳಿಯದೇ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದೀಗ 2024ರ ಆಸ್ಟ್ರೇಲಿಯನ್ ಓಪನ್​ನ ಪುರುಷರ ಡಬಲ್ಸ್​ನಲ್ಲಿ ಅರ್ಜೆಂಟೀನಾದ ಮ್ಯಾಕ್ಸಿಮೊ ಗೊನ್ಜಾಲೆಜ್ ಮತ್ತು ಆಂಡ್ರೆಸ್ ಮೊಲ್ಟೆನಿ ಅವರನ್ನು 6-4, 7-6 (5) ಅಂಕಗಳಿಂದ ಸೋಲಿಸಿ ಮ್ಯಾಥ್ಯೂ ಎಬ್ಡೆನ್ – ರೋಹನ್ ಬೋಪಣ್ಣ ಜೋಡಿ ಸೆಮಿಫೈನಲ್​ಗೆ ಪ್ರವೇಶಿಸಿದ್ದಾರೆ. ಅಲ್ಲದೆ ಸೆಮಿಫೈನಲ್​ನಲ್ಲಿ ಇಂಡೊ-ಆಸೀಸ್ ಜೋಡಿ ಜೆಕ್-ಚೀನೀ ಜೋಡಿ ತೋಮಸ್ ಮಚಾಕ್ ಮತ್ತು ಝಿಜೆನ್ ಜಾಂಗ್​ರನ್ನು ಎದುರಿಸಲಿದ್ದಾರೆ.

ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು