ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್‌ನ ಪುರುಷರ ಡಬಲ್ಸ್‌ನಲ್ಲಿ ಭಾರತದ ರೋಹನ್ ಬೋಪಣ್ಣ (Rohan Bopanna) ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಸೆಮಿಫೈನಲ್ಗೆ ಪ್ರವೇಶಿಸಿದ್ದಾರೆ. ಈ ಗೆಲುವಿನೊಂದಿಗೆ ATP ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಬೋಪಣ್ಣ ಪಾಲಾಗಿದೆ.
ಮೂಲತಃ ಕೊಡಗಿನವರಾದ ರೋಹನ್ ಬೋಪಣ್ಣ ತಮ್ಮ 43ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ. ಇದಕ್ಕೂ ಮುನ್ನ ಎಟಿಪಿ ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಯುಎಸ್ಎ ಆಟಗಾರ ಆಸ್ಟಿನ್ ಕ್ರಾಜಿಸೆಕ್ ಅಗ್ರಸ್ಥಾನದಲ್ಲಿದ್ದರು. ಆದರೆ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಕ್ರಾಜಿಸೆಕ್ ಮತ್ತು ಅವರ ಕ್ರೊಯೇಷಿಯಾದ ಜೊತೆಗಾರ ಇವಾನ್ ಡೋಡಿಗ್ ಎರಡನೇ ಸುತ್ತಿನಲ್ಲಿ ನಿರ್ಗಮಿಸಿದ್ದಾರೆ. ಇತ್ತ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಸೆಮಿಫೈನಲ್ಗೇರುವ ಮೂಲಕ ರೋಹನ್ ಬೋಪಣ್ಣ ಟೆನಿಸ್ (ಡಬಲ್ಸ್) ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
.@RohanBopanna Creates 𝐇𝐈𝐒𝐓𝐎𝐑𝐘 at #AO2024 🤩🇮🇳
The Indian Tennis ⭐ becomes the World No. 1️⃣ in Men’s Doubles as the duo seals victory in straight sets 🔥#SonySportsNetwork #AustralianOpen #AusOpen #SlamOfTheGreats #RohanBopanna #MatthewEbden pic.twitter.com/bv79xLRQMq
— Sony Sports Network (@SonySportsNetwk) January 24, 2024
ವಿಶ್ವ ಟೆನಿಸ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ ನಾಲ್ಕನೇ ಟೆನಿಸ್ ತಾರೆ ಎಂಬ ಹೆಗ್ಗಳಿಕೆಗೂ ರೋಹನ್ ಬೋಪಣ್ಣ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಹೇಶ್ ಭೂಪತಿ, ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಝಾ ಡಬಲ್ಸ್‌ನಲ್ಲಿ ನಂ.1 ಸ್ಥಾನ ಅಲಂಕರಿಸಿದ್ದರು.
ಇದೀಗ ತಮ್ಮ ಹಿರಿಯ ವಯಸ್ಸಿನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ರೋಹನ್ ಬೋಪಣ್ಣ ಡಬಲ್ಸ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
2017 ರಲ್ಲಿ ರೋಹನ್ ಬೋಪಣ್ಣ ಮಿಶ್ರ ಡಬಲ್ಸ್‌ನಲ್ಲಿ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದಿದ್ದರು. ಕೆನಡಾದ ಗೇಬ್ರಿಯೆಲಾ ದಬ್ರೊವ್ಸ್ಕಿ ಅವರೊಂದಿಗೆ ಫ್ರೆಂಚ್ ಓಪನ್‌ನಲ್ಲಿ ಈ ಸಾಧನೆ ಮಾಡಿದ್ದರು. ಹಾಗೆಯೇ US ಓಪನ್‌ನ ಪುರುಷರ ಡಬಲ್ಸ್‌ನಲ್ಲಿ ಎರಡು ಬಾರಿ ರನ್ನರ್ ಅಪ್ ಆಗಿದ್ದಾರೆ.
2010 ರಲ್ಲಿ ಪಾಕಿಸ್ತಾನದ ಐಸಾಮ್-ಉಲ್-ಹಕ್ ಖುರೇಷಿ ಮತ್ತು 2023 ರಲ್ಲಿ ಎಬ್ಡೆನ್ ಅವರೊಂದಿಗೆ ಗ್ರ್ಯಾಂಡ್ ಸ್ಲಾಮ್ ಫೈನಲ್ ಆಡಿದ್ದರು. ಇದಾಗ್ಯೂ ಪ್ರಶಸ್ತಿ ಸುತ್ತಿನಲ್ಲಿ ಸೋಲುವ ಮೂಲಕ ರೋಹನ್ ಬೋಪಣ್ಣ ನಿರಾಸೆ ಅನುಭವಿಸಿದರು.
ಇದನ್ನೂ ಓದಿ: Virat Kohli: ಮೈದಾನಕ್ಕಿಳಿಯದೇ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ
ಇದೀಗ 2024ರ ಆಸ್ಟ್ರೇಲಿಯನ್ ಓಪನ್‌ನ ಪುರುಷರ ಡಬಲ್ಸ್‌ನಲ್ಲಿ ಅರ್ಜೆಂಟೀನಾದ ಮ್ಯಾಕ್ಸಿಮೊ ಗೊನ್ಜಾಲೆಜ್ ಮತ್ತು ಆಂಡ್ರೆಸ್ ಮೊಲ್ಟೆನಿ ಅವರನ್ನು 6-4, 7-6 (5) ಅಂಕಗಳಿಂದ ಸೋಲಿಸಿ ಮ್ಯಾಥ್ಯೂ ಎಬ್ಡೆನ್ – ರೋಹನ್ ಬೋಪಣ್ಣ ಜೋಡಿ ಸೆಮಿಫೈನಲ್ಗೆ ಪ್ರವೇಶಿಸಿದ್ದಾರೆ. ಅಲ್ಲದೆ ಸೆಮಿಫೈನಲ್ನಲ್ಲಿ ಇಂಡೊ-ಆಸೀಸ್ ಜೋಡಿ ಜೆಕ್-ಚೀನೀ ಜೋಡಿ ತೋಮಸ್ ಮಚಾಕ್ ಮತ್ತು ಝಿಜೆನ್ ಜಾಂಗ್ರನ್ನು ಎದುರಿಸಲಿದ್ದಾರೆ.