Rohit Sharma-Virat Kohli: ಮುಂದಿನ ಸರಣಿಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಲಭ್ಯ..!
Rohit Sharma and Virat Kohli: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಹೀಗಾಗಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದಲೂ ಇಬ್ಬರು ದಿಗ್ಗಜರು ಹೊರುಳಿಯಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂದಿನ ಸರಣಿಗೂ ಅಲಭ್ಯರಾಗಲಿದ್ದಾರೆ. ಝಿಂಬಾಬ್ವೆ ವಿರುದ್ಧದ ಸರಣಿ ಮುಗಿಸಿರುವ ಭಾರತ ತಂಡವು ಜುಲೈ 27 ರಿಂದ ಶ್ರೀಲಂಕಾ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.
ಇಬ್ಬರು ಆಟಗಾರರು ವಿಶ್ರಾಂತಿ ಬಯಸಿದ್ದು, ಹೀಗಾಗಿ ಮುಂಬರುವ ಏಕದಿನ ಸರಣಿಯಲ್ಲೂ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಹಿಟ್ಮ್ಯಾನ್ ಹಾಗೂ ಕಿಂಗ್ ಕೊಹ್ಲಿಯ ಕಂಬ್ಯಾಕ್ಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯವರೆಗೂ ಕಾಯಲೇಬೇಕು.
ಸದ್ಯ ವಿರಾಟ್ ಕೊಹ್ಲಿ ಲಂಡನ್ನಲ್ಲಿದ್ದರೆ, ರೋಹಿತ್ ಶರ್ಮಾ ಅಮೆರಿಕದಲ್ಲಿದ್ದಾರೆ. ಈ ಇಬ್ಬರು ಶ್ರೀಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿದರೆ, ಯುವ ಆಟಗಾರರಿಗೆ ಅವಕಾಶ ಸಿಗಲಿದೆ. ಅದರಲ್ಲೂ ಏಕದಿನ ತಂಡದ ನಾಯಕರಾಗಿ ಮುಂದುವರೆದಿರುವ ರೋಹಿತ್ ಶರ್ಮಾ ಅಲಭ್ಯರಾದರೆ, ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಬಹುದು. ಹಾಗೆಯೇ ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಭಾರತ ಮತ್ತು ಶ್ರೀಲಂಕಾ ಸರಣಿ ಯಾವಾಗ ಶುರು?
ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ.
ಜುಲೈ 27 ರಿಂದ ಟಿ20 ಸರಣಿ ಶುರುವಾಗಲಿದ್ದು, ಇದಾದ ಬಳಿಕ ಆಗಸ್ಟ್ 2 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಅಲ್ಲದೆ ಈ ಸರಣಿಗಾಗಿ ಶೀಘ್ರದಲ್ಲೇ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ.
ಭಾರತ ಮತ್ತು ಶ್ರೀಲಂಕಾ ಸರಣಿ ವೇಳಾಪಟ್ಟಿ ಹೀಗಿದೆ:
- ಮೊದಲ ಟಿ20: ಜುಲೈ 27 (ಪಲ್ಲೆಕೆಲೆ) – 7 PM IST
- ಎರಡನೇ ಟಿ20: ಜುಲೈ 28 (ಪಲ್ಲೆಕೆಲೆ) – 7 PM IST
- ಮೂರನೇ ಟಿ20: ಜುಲೈ 30 (ಪಲ್ಲೆಕೆಲೆ) – 7 PM IST
- ಮೊದಲ ಏಕದಿನ: ಆಗಸ್ಟ್ 2 (ಕೊಲಂಬೊ) – 2.30 PM IST
- ಎರಡನೇ ಏಕದಿನ: ಆಗಸ್ಟ್ 4 (ಕೊಲಂಬೊ) – 2.30 PM IST
- ಮೂರನೇ ಏಕದಿನ: ಆಗಸ್ಟ್ 7 (ಕೊಲಂಬೊ) – 2.30 PM IST
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?
ಈ ಸರಣಿಯ ಟಿ20 ಪಂದ್ಯಗಳಿಗೆ ಪಲ್ಲೆಕೆಲೆಯ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಿದರೆ, ಏಕದಿನ ಪಂದ್ಯಗಳು ಕೊಲಂಬೊದ ಆರ್. ಪ್ರೇಮದಾಸ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿದೆ.
Published On - 7:29 am, Mon, 15 July 24