ಒಟ್ಟಿನಲ್ಲಿ ರೋಹಿತ್ ಶರ್ಮಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಫೋಟೋದಲ್ಲಿ ತ್ರಿವರ್ಣ ಧ್ವಜವು ನೆಲಕ್ಕೆ ತಾಗಿರುವುದು ಸ್ಪಷ್ಟ. ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ನಾಯಕನ ವಿರುದ್ಧ ಇದೀಗ ಅನೇಕರು ಅಸಮಾಧಾನ ಹೊರಹಾಕಿದ್ದು, ರಾಷ್ಟ್ರ ಧ್ವಜವನ್ನು ಗೌರವಿಸುವಂತೆ ತಿಳಿಸಿದ್ದಾರೆ. ಅಲ್ಲದೆ ಕೂಡಲೇ ತಮ್ಮ ಪ್ರೊಫೈಲ್ ಪಿಕ್ಚರ್ನಿಂದ ಆ ಫೋಟೋವನ್ನು ತೆಗೆದು ಹಾಕುವಂತೆ ಸೂಚಿಸಿದ್ದಾರೆ.