AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಆಫ್ರಿಕಾ; ಅಗ್ರಸ್ಥಾನ ಕಳೆದುಕೊಂಡ ಕಾಂಗರೂಗಳು

ಕೇಪ್‌ಟೌನ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾವನ್ನು ಸೋಲಿಸಿ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಭರ್ಜರಿ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ಮೇಲೆರಿದೆ. ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ. ಆಫ್ರಿಕಾ ವೇಗಿಗಳ ಮಾರಕ ದಾಳಿಗೆ ಕುಸಿದ ಆಸ್ಟ್ರೇಲಿಯಾ 176 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಆಫ್ರಿಕಾ;  ಅಗ್ರಸ್ಥಾನ ಕಳೆದುಕೊಂಡ ಕಾಂಗರೂಗಳು
ದಕ್ಷಿಣ ಆಫ್ರಿಕಾ ತಂಡ
ಪೃಥ್ವಿಶಂಕರ
|

Updated on:Oct 31, 2026 | 8:59 PM

Share

ಕೇಪ್‌ಟೌನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ಆತಿಥೇಯ ದಕ್ಷಿಣ ಆಫ್ರಿಕಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ತೆಂಬಾ ಬವುಮಾ ಪಡೆ 2-1 ಅಂತರದಿಂದ ಗೆದ್ದುಕೊಂಡಿದೆ. ಮಾತ್ರವಲ್ಲದೆ ಈ ಗೆಲುವು ದಕ್ಷಿಣ ಆಫ್ರಿಕಾ ತಂಡವನ್ನು ಡಬ್ಲ್ಯೂಟಿಸಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿಸಿದೆ. ಇತ್ತ ಈ ಪಂದ್ಯದಲ್ಲಿ ಸೋತ ಆಸ್ಟ್ರೇಲಿಯಾ ಮೂರನೇ ಸ್ಥಾನಕ್ಕೆ ಜಾರಿದ್ದರೆ, ನ್ಯೂಜಿಲೆಂಡ್ ತಂಡ ಅಗ್ರಸ್ಥಾನವನ್ನು ಅಲಂಕರಿಸಿದೆ. ಪಂದ್ಯದ ಕೊನೆಯ ದಿನ ಗೆಲುವಿಗೆ 288 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ವಿಭಾಗವನ್ನು ಆಫ್ರಿಕಾ ವೇಗಿಗಳು ಇನ್ನಿಲ್ಲದಂತೆ ಕಾಡಿದರು. ಇದರ ಪರಿಣಾಮವಾಗಿ ಆಸ್ಟ್ರೇಲಿಯಾ 70 ರನ್ ದಾಟುವ ಮುನ್ನವೇ ಪ್ರಮುಖ 8 ವಿಕೆಟ್​ಗಳನ್ನು ಕಳೆದುಕೊಂಡಿತು. ಅಂತಿಮವಾಗಿ 111 ರನ್​ಗಳಿಗೆ ಆಲೌಟ್ ಆಗುವ ಮೂಲಕ 176 ರನ್​​ಗಳಿಂದ ಸೋಲೊಪ್ಪಿಕೊಂಡಿತು.

ಆಸ್ಟ್ರೇಲಿಯಾದ ಬ್ಯಾಟಿಂಗ್ ಕುಸಿತ

ಐದನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ರಬಾಡ ಆರಂಭದಲ್ಲೇ ಆಘಾತ ನೀಡಿದರು. ಮ್ಯಾಟ್ ರೆನ್‌ಶಾ ಅವರನ್ನು ಶೂನ್ಯಕ್ಕೆ ಔಟ್ ಮಾಡಿದ ಅವರು, ಮಾರ್ನಸ್ ಲಬುಶೇನ್ (4) ಮತ್ತು ಟ್ರಾವಿಸ್ ಹೆಡ್ (14) ಅವರನ್ನೂ ಪೆವಿಲಿಯನ್‌ಗೆ ಕಳುಹಿಸಿದರು. ಪರಿಣಾಮ ಆಸ್ಟ್ರೇಲಿಯಾ 22 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಬಳಿಕ ಜೋಶ್ ಇಂಗ್ಲಿಸ್ (4) ರನ್‌ಔಟ್ ಆಗುವುದರೊಂದಿಗೆ ಆಸ್ಟ್ರೇಲಿಯಾದ ಸ್ಥಿತಿ 40 ರನ್‌ಗಳಿಗೆ 4 ವಿಕೆಟ್ ಎಂಬಂತಾಯಿತು. ನಂತರ ಬೌಲಿಂಗ್‌ನಲ್ಲಿ ಮಿಂಚಿದ ಹಾರ್ಮರ್, ಅಲೆಕ್ಸ್ ಕ್ಯಾರಿ (2), ಕೂಪರ್ ಕೊನೊಲಿ (0) ಮತ್ತು ಮಿಚೆಲ್ ಸ್ಟಾರ್ಕ್ (0) ಅವರನ್ನು ಔಟ್ ಮಾಡಿದರು. ಇದರಿಂದ ಆಸ್ಟ್ರೇಲಿಯಾ 60 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿತು.

ಕ್ಯಾಮರೂನ್ ಗ್ರೀನ್ 27 ರನ್ ಗಳಿಸಿ ಹಾರ್ಮರ್ ಬೌಲಿಂಗ್‌ನಲ್ಲಿ ಬೌಲ್ಡ್ ಆದರು. ಬಳಿಕ ಪ್ಯಾಟ್ ಕಮಿನ್ಸ್ 90 ಎಸೆತಗಳನ್ನು ಎದುರಿಸಿ 11 ರನ್ ಗಳಿಸಿ ಸ್ವಲ್ಪ ಪ್ರತಿರೋಧ ತೋರಿದರೂ, ಹಾರ್ಮರ್ ಅವರ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದರು. ಕೊನೆಯದಾಗಿ ಜೋಶ್ ಹೇಜಲ್‌ವುಡ್ ಶೂನ್ಯಕ್ಕೆ ಬೌಲ್ಡ್ ಆಗುವುದರೊಂದಿಗೆ ಆಸ್ಟ್ರೇಲಿಯಾದ ಇನ್ನಿಂಗ್ಸ್ 111 ರನ್‌ಗಳಿಗೆ ಅಂತ್ಯಗೊಂಡಿತು. ಈ ಮೂಲಕ ಹಾರ್ಮರ್ 6 ವಿಕೆಟ್‌ಗಳ ಸಾಧನೆ ಪೂರ್ಣಗೊಳಿಸಿದರು.

ರಿಕೆಲ್ಟನ್, ಮುಲ್ಡರ್ ಶತಕ

ಮೊದಲ ಇನ್ನಿಂಗ್ಸ್‌ನಲ್ಲಿ 100 ರನ್‌ಗಳ ಹಿನ್ನಡೆ ಅನುಭವಿಸಿದ್ದ ದಕ್ಷಿಣ ಆಫ್ರಿಕಾ, ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿತು. ಮೊದಲ ಇನ್ನಿಂಗ್ಸ್‌ನಲ್ಲಿ 329 ರನ್‌ಗಳಿಗೆ ಆಲೌಟ್ ಆಗಿದ್ದ ಆತಿಥೇಯರು, ಆಸ್ಟ್ರೇಲಿಯಾದ 429 ರನ್‌ಗಳಿಗೆ ಉತ್ತರವಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ 387 ರನ್ ಗಳಿಸಿದರು. ಈ ಮೂಲಕ ಆಸ್ಟ್ರೇಲಿಯಾ ಎದುರು 288 ರನ್‌ಗಳ ಗುರಿ ನಿಗದಿಪಡಿಸಿದರು. ದಕ್ಷಿಣ ಆಫ್ರಿಕಾ ಪರ ರಯಾನ್ ರಿಕೆಲ್ಟನ್ 101 ರನ್ ಗಳಿಸಿದರೆ, ವಿಯಾನ್ ಮುಲ್ಡರ್ 115 ರನ್ ಸಿಡಿಸಿ ತಂಡದ ಗೆಲುವಿಗೆ ಭದ್ರ ಬುನಾದಿ ಹಾಕಿದರು. ರಿಕೆಲ್ಟನ್ 219 ಎಸೆತಗಳಲ್ಲಿ 12 ಬೌಂಡರಿ ಬಾರಿಸಿದರೆ, ಮುಲ್ಡರ್ 221 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ ಶತಕ ಪೂರೈಸಿದರು.

ಇವರಿಬ್ಬರ ಅಮೋಘ ಜೊತೆಯಾಟದಿಂದ ಸಂಕಷ್ಟದಲ್ಲಿದ್ದ ದಕ್ಷಿಣ ಆಫ್ರಿಕಾ ಉತ್ತಮ ಮೊತ್ತ ಗಳಿಸಲು ಸಾಧ್ಯವಾಯಿತು. ಮಾರ್ಕಸ್ ಅಕರ್‌ಮನ್ 62, ಮ್ಯಾಥ್ಯೂ ಬ್ರೆಟ್ಜ್ಕೆ 43 ಹಾಗೂ ನಾಯಕ ತೆಂಬಾ ಬವುಮಾ 35 ರನ್‌ಗಳ ಕೊಡುಗೆ ನೀಡಿದರು. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಪಡೆದರೆ, ಪ್ಯಾಟ್ ಕಮಿನ್ಸ್ 2 ವಿಕೆಟ್ ಕಬಳಿಸಿದರು.

ಆರಂಭಿಕ ಪಂದ್ಯ ಗೆದ್ದರೂ ಸರಣಿ ಸೋತ ಆಸ್ಟ್ರೇಲಿಯಾ

ಮೊದಲ ಟೆಸ್ಟ್ ಪಂದ್ಯ ಗೆದ್ದರೂ ಮೂರು ಪಂದ್ಯಗಳ ಸರಣಿಯನ್ನು ಕಳೆದುಕೊಂಡಿರುವುದು ಆಸ್ಟ್ರೇಲಿಯಾಗೆ ಅಪರೂಪದ ಹಿನ್ನಡೆಯಾಗಿದೆ. ಈ ಹಿಂದೆ 1882-83ರಲ್ಲಿ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ, 1888ರಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ಹಾಗೂ 2001ರಲ್ಲಿ ಭಾರತ ಪ್ರವಾಸದ ವೇಳೆ ಆಸ್ಟ್ರೇಲಿಯಾ ಮೊದಲ ಟೆಸ್ಟ್ ಗೆದ್ದ ಬಳಿಕ ಸರಣಿ ಸೋತಿತ್ತು. ಇದೀಗ 2026ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 2-1ರಿಂದ ಸೋತಿರುವುದು ಇಂತಹ ನಾಲ್ಕನೇ ಸಂದರ್ಭವಾಗಿದೆ. ಇದಲ್ಲದೆ 2023ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಎರಡು ಪಂದ್ಯಗಳಲ್ಲಿ ಭಾರತ ವಿರುದ್ಧ ಸೋತ ಬಳಿಕ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಸತತ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋಲು ಕಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Sat, 31 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಧನುಷ್‌ಗೆ ಮೀಟರ್ ಇಲ್ಲ; ಸೌಂದರ್ಯಾ ಮಾತಿಗೆ ಹೊತ್ತಿ ಉರಿದ ಮನೆ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ರಾಜ್ಯಾದ್ಯಂತ ಹೋರಾಟ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ಗುಜರಾತ್‌ನಲ್ಲಿ 400 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಗುಡ್​ ನ್ಯೂಸ್
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ಬೆನ್ನಹಿಂದೆ ಚಾಕು ಹಾಕಿದ ಯಶಸ್; ಸುದೀಪ್ ಎದುರೇ ಎದ್ದು ನಡೆದ ಸೌಂದರ್ಯಾ
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
TV9 ಬಿಗ್ ಇಂಪ್ಯಾಕ್ಟ್;ಸೋರುತ್ತಿದ್ದ ಸರ್ಕಾರಿ ಶಾಲೆಗೆ ಬಂತು ಹೊಸ ಮೇಲ್ಛಾವಣಿ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಜ್ಞಾನಭಾರತಿ ವಿವಿ ಬಳಿ ಸಿಕ್ಕಿದ್ದು ಫೇಕ್​ ಬಾಂಬ್​! ಖಾಲಿ ಪೈಪ್ ಪತ್ತೆ
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?
ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ; ಕರವೇ ನಾರಾಯಣ ಗೌಡ ಹೇಳಿದ್ದೇನು?