ಕೋವಿಡ್ ಪಾಸಿಟಿವ್: ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾದ ಸಚಿನ್ ತೆಂಡೂಲ್ಕರ್
Sachin Tendulkar: ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ವತಃ ಸಚಿನ್ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಸಚಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ತಮ್ಮ ಟ್ವೀಟ್‌ನಲ್ಲಿ ಕೆಲವೇ ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಜನರು ಕೊರೊನಾ ಸಾಂಕ್ರಾಮಿಕ ರೋಗದಿಂದ ದೂರವಿರಲು ಸಹ ಸೂಚನೆ ನೀಡಿದ್ದಾರೆ.
ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್‌ನಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರ ನಾಯಕತ್ವದಲ್ಲಿ ಇಂಡಿಯಾ ಲೆಜೆಂಡ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಫೈನಲ್‌ನಲ್ಲಿ ತಂಡವು ಶ್ರೀಲಂಕಾ ಲೆಜೆಂಡ್ಸ್ ತಂಡವನ್ನು ಸೋಲಿಸಿತ್ತು. ಈ ಪಂದ್ಯಾವಳಿಯ ಕೆಲವು ದಿನಗಳ ನಂತರ, ಸಚಿನ್ ತೆಂಡೂಲ್ಕರ್ ಅವರು ಕೊರೊನಾ ವೈರಸ್ ಸೋಂಕಿಗೆ ಒಳಗಾದರು. ಇದರ ನಂತರ, ಇಂಡಿಯಾ ಲೆಜೆಂಡ್ಸ್ ತಂಡದಲ್ಲಿ ಸೇರ್ಪಡೆಯಾದ ಇನ್ನೂ ಮೂರು ಭಾರತೀಯ ಕ್ರಿಕೆಟಿಗರಿಗೆ ಕೊರೊನಾ ಪಾಸಿಟಿವ್ ಎಂದು ಕಂಡುಬಂದಿದೆ. ಇವರಲ್ಲಿ ಯೂಸುಫ್ ಪಠಾಣ್, ಇರ್ಫಾನ್ ಪಠಾಣ್ ಮತ್ತು ಎಸ್.ಕೆ. ಬದ್ರಿನಾಥ್ ಸೇರಿದ್ದಾರೆ.
Thank you for your wishes and prayers. As a matter of abundant precaution under medical advice, I have been hospitalised. I hope to be back home in a few days. Take care and stay safe everyone.
Wishing all Indians & my teammates on the 10th anniversary of our World Cup ?? win.
— Sachin Tendulkar (@sachin_rt) April 2, 2021
ಮಾರ್ಚ್ 27 ರಂದು ಕೊರೊನಾ ದೃಢ.. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಮಾರ್ಚ್ 27 ರಂದು ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿತ್ತು. ಈ ವಿಚಾರವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದ ಸಚಿನ್, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನನಗೆ ಕೊರೊನಾ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳಿದ್ದು, ಮನೆಯ ಮಿಕ್ಕೆಲ್ಲರಿಗೂ ಕೊರೊನಾ ನೆಗೆಟಿವ್ ಬಂದಿದೆ. ಮುಂಜಾಗೃತಾ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿ ವೈದ್ಯರು ಸೂಚಿಸಿದ ಎಲ್ಲ ಸೂಚನೆಗಳನ್ನು ಅನುಸರಿಸುತ್ತಿದ್ದೇನೆ. ಕೊರೊನೊ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲ ಅಭಿಮಾನಿಗಳಿಗೂ ನಾವು ಕೃತಜ್ಞನಾಗಿದ್ದೇನೆ’ ಎಂದು ಟ್ವೀಟ್ ಮಾಡಿದ್ದರು.
ಆದಾಗ್ಯೂ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೊರತಾಗಿ, ಅವರ ಕುಟುಂಬದಲ್ಲಿ ಯಾರೊಬ್ಬರಲ್ಲೂ ಕೊರೊನಾದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಈ ಸಮಯದಲ್ಲಿ, ಮುಂಬೈ ಸೇರಿದಂತೆ ಇಡೀ ಮಹಾರಾಷ್ಟ್ರವು ಕೊರೊನಾದ ಹಿಡಿತದಲ್ಲಿದೆ. ಭಾರತದಲ್ಲಿ ಕೊರೊನಾದ ಹೊಸ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಹೆಚ್ಚಾಗಿವೆ. ಸಚಿನ್ ತೆಂಡೂಲ್ಕರ್ ಕೂಡ ಮುಂಬೈನಲ್ಲಿ ವಾಸಿಸುತ್ತಿದ್ದಾರೆ.
Published On - 11:32 am, Fri, 2 April 21