AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಟ್​ ತಯಾರಕ ‘ಅಶ್ರಫ್ ಚಾಚಾ’ಗೆ ನೆರವಾದ ಕ್ರಿಕೆಟ್ ದೇವರು..

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಾಗೂ ವ್ಯವಹಾರದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಕ್ರಿಕೆಟ್​ ಬ್ಯಾಟ್​ ತಯಾರಕ ಅಶ್ರಫ್ ಚೌಧರಿಗೆ ಸಚಿನ್​ ತೆಂಡೂಲ್ಕರ್ ಆರ್ಥಿಕ ಸಹಾಯ ಮಾಡಿದ್ದಾರೆ. ಕೊರೊನಾ ಸೋಂಕಿನಿಂದ ಸಂಕಷ್ಟದಲ್ಲಿರುವ, ಮುಂಬೈ ಕ್ರಿಕೆಟ್ ಸರ್ಕ್ಯೂಟ್‌ನಲ್ಲಿ ‘ಅಶ್ರಫ್ ಚಾಚಾ’ ಎಂದೂ ಕರೆಯಲ್ಪಡುವ ಬ್ಯಾಟ್ ತಯಾರಕನಿಗೆ ಸಹಾಯ ಮಾಡುವಂತೆ ಅಭಿಮಾನಿಗಳು ಪರಸ್ಪರ ವಿನಂತಿಸಿಕೊಂಡಿದ್ದರು. ಇತ್ತೀಚೆಗೆ ಚೌಧರಿ ಅವರ ಮನವಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಬಾಲಿವುಡ್ ನಟ ಸೋನು ಸೂದ್ ಕೂಡ ಸಹಾಯ ಮಾಡಲು […]

ಬ್ಯಾಟ್​ ತಯಾರಕ 'ಅಶ್ರಫ್ ಚಾಚಾ'ಗೆ ನೆರವಾದ ಕ್ರಿಕೆಟ್ ದೇವರು..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 26, 2020 | 12:44 PM

Share

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಾಗೂ ವ್ಯವಹಾರದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಕ್ರಿಕೆಟ್​ ಬ್ಯಾಟ್​ ತಯಾರಕ ಅಶ್ರಫ್ ಚೌಧರಿಗೆ ಸಚಿನ್​ ತೆಂಡೂಲ್ಕರ್ ಆರ್ಥಿಕ ಸಹಾಯ ಮಾಡಿದ್ದಾರೆ.

ಕೊರೊನಾ ಸೋಂಕಿನಿಂದ ಸಂಕಷ್ಟದಲ್ಲಿರುವ, ಮುಂಬೈ ಕ್ರಿಕೆಟ್ ಸರ್ಕ್ಯೂಟ್‌ನಲ್ಲಿ ‘ಅಶ್ರಫ್ ಚಾಚಾ’ ಎಂದೂ ಕರೆಯಲ್ಪಡುವ ಬ್ಯಾಟ್ ತಯಾರಕನಿಗೆ ಸಹಾಯ ಮಾಡುವಂತೆ ಅಭಿಮಾನಿಗಳು ಪರಸ್ಪರ ವಿನಂತಿಸಿಕೊಂಡಿದ್ದರು. ಇತ್ತೀಚೆಗೆ ಚೌಧರಿ ಅವರ ಮನವಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಬಾಲಿವುಡ್ ನಟ ಸೋನು ಸೂದ್ ಕೂಡ ಸಹಾಯ ಮಾಡಲು ಮುಂದೆ ಬಂದಿದ್ದು ಸೋಮವಾರ ಟ್ವಿಟ್ಟರ್ ನಲ್ಲಿ ಅಭಿಮಾನಿಗಳಿಂದ ಅಶ್ರಫ್ ಚೌಧರಿಯವರ ವಿಳಾಸವನ್ನು ಕೇಳಿದ್ದರು. ಈಗ ಸಚಿನ್ ಸಹ ಅನಾರೋಗ್ಯ ಪೀಡಿತ ಬ್ಯಾಟ್ ತಯಾರಕನಿಗೆ ಸಹಾಯ ಮಾಡಿದ್ದಾರೆ.

ಚೌಧರಿ ಕಳೆದ 12 ದಿನಗಳಿಂದ ಸಾವ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಮಧುಮೇಹ ಮತ್ತು ನ್ಯುಮೋನಿಯಾ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಕುಟುಂಬದವರು ಆಸ್ಪತ್ರೆಯ ಬಿಲ್‌ಗಳನ್ನು ಪಾವತಿಸಲಾಗದೆ ಇತರರಿಂದ ಸಹಾಯವನ್ನು ಕೇಳಿದ್ದರು.

ಚೌಧರಿ ಅವರ ಆಪ್ತ ಸ್ನೇಹಿತ ಪ್ರಶಾಂತ್ ಜೇಠ್ಮಲಾನಿ ಕೂಡ ಕ್ರಿಕೆಟಿಗರು ಮತ್ತು ಇತರರಿಗೆ ದೇಣಿಗೆ ನೀಡುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಸಚಿನ್, ಅಶ್ರಫ್ ಚೌಧರಿಯೊಂದಿಗೆ ಮಾತನಾಡಿದ್ದಾರೆ ಮತ್ತು ಆರ್ಥಿಕವಾಗಿ ಸಹಾಯ ಮಾಡಿದ್ದಾರೆ ಎಂದು ಜೇಠ್ಮಲಾನಿ ತಿಳಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ