India Open: ಇಂಡಿಯಾ ಓಪನ್ ಪುರುಷರ ಡಬಲ್ಸ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಸಾತ್ವಿಕ್- ಚಿರಾಗ್ ಜೋಡಿ!

India Open: ಫೈನಲ್‌ನಲ್ಲಿ ಇಂಡೋನೇಷ್ಯಾದ ದಿಗ್ಗಜರಾದ ಹೆಂಡ್ರಾ ಸೆಟಿಯಾವಾನ್ ಮತ್ತು ಮೊಹಮ್ಮದ್ ಎಹ್ಸಾನ್ ಜೋಡಿಯನ್ನು ಸೋಲಿಸುವ ಮೂಲಕ ಭಾರತದ ಜೋಡಿ ಮೊದಲ ಬಾರಿಗೆ ಈ ಟೂರ್ನಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು.

India Open: ಇಂಡಿಯಾ ಓಪನ್ ಪುರುಷರ ಡಬಲ್ಸ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಸಾತ್ವಿಕ್- ಚಿರಾಗ್ ಜೋಡಿ!
ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ
Follow us
TV9 Web
| Updated By: ಪೃಥ್ವಿಶಂಕರ

Updated on:Jan 16, 2022 | 6:22 PM

ಭಾರತದ ನಂಬರ್ ಒನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಡಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಫೈನಲ್‌ನಲ್ಲಿ ಇಂಡೋನೇಷ್ಯಾದ ದಿಗ್ಗಜರಾದ ಹೆಂಡ್ರಾ ಸೆಟಿಯಾವಾನ್ ಮತ್ತು ಮೊಹಮ್ಮದ್ ಎಹ್ಸಾನ್ ಜೋಡಿಯನ್ನು ಸೋಲಿಸುವ ಮೂಲಕ ಭಾರತದ ಜೋಡಿ ಮೊದಲ ಬಾರಿಗೆ ಈ ಟೂರ್ನಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇವರಿಬ್ಬರೂ 21-16, 26-24 ಅಂತರದ ಸೆಣಸಾಟದಲ್ಲಿ ವಿಶ್ವದ ಎರಡನೇ ಶ್ರೇಯಾಂಕದ ಇಂಡೋನೇಷ್ಯಾ ಜೋಡಿಯನ್ನು ಸೋಲಿಸಿ ಚಾಂಪಿಯನ್‌ಶಿಪ್ ವಶಪಡಿಸಿಕೊಂಡರು. ಭಾರತದ ಜೋಡಿ ಎರಡನೇ ಬಾರಿಗೆ ಸೂಪರ್ 500 ಟೂರ್ನಿಯ ಪ್ರಶಸ್ತಿ ಗೆದ್ದಿದೆ. ಇಬ್ಬರೂ ಈ ಹಿಂದೆ 2019 ರಲ್ಲಿ ಥಾಯ್ಲೆಂಡ್ ಓಪನ್ ಸೂಪರ್ 500 ಪ್ರಶಸ್ತಿಯನ್ನು ಗೆದ್ದಿದ್ದರು.

10ನೇ ಶ್ರೇಯಾಂಕದ ಭಾರತದ ಜೋಡಿ ಮೊದಲ ಬಾರಿಗೆ ಈ ಟೂರ್ನಿಯ ಫೈನಲ್‌ಗೆ ತಲುಪಿದ್ದು, ಅಗ್ರ ಶ್ರೇಯಾಂಕದ ಇಂಡೋನೇಷ್ಯಾ ಜೋಡಿಯಿಂದ ಕಠಿಣ ಸವಾಲನ್ನು ಎದುರಿಸಿತು. ಮೂರು ಬಾರಿಯ ವಿಶ್ವ ಚಾಂಪಿಯನ್ ಎಹ್ಸಾನ್-ಸೆಟಿಯಾವಾನ್ ಜೋಡಿ ವಿರುದ್ಧ ಸಾತ್ವಿಕ್-ಚಿರಾಗ್ 4 ಪಂದ್ಯಗಳಲ್ಲಿ ಒಮ್ಮೆ ಮಾತ್ರ ಗೆದ್ದಿದ್ದರು. ಆದರೆ ಸಾತ್ವಿಕ್ ಮತ್ತು ಚಿರಾಗ್ ಉತ್ತಮ ಆರಂಭವನ್ನು ಪಡೆದರು ಮತ್ತು ಮೊದಲ ಗೇಮ್‌ನಲ್ಲಿ ಇಂಡೋನೇಷ್ಯಾ ದೈತ್ಯರಿಗೆ ಯಾವುದೇ ಅವಕಾಶವನ್ನು ನೀಡಲಿಲ್ಲ. ಮೊದಲ ಗೇಮ್ ಅನ್ನು 21-16 ರಿಂದ ಗೆದ್ದು ಪಂದ್ಯದಲ್ಲಿ ಮುನ್ನಡೆ ಸಾಧಿಸಿದರು.

ಎರಡನೇ ಗೇಮ್ ಆರಂಭದಿಂದಲೂ ಬಹಳ ಹತ್ತಿರವಾಗಿತ್ತು ಮತ್ತು ಎಹ್ಸಾನ್ ಮತ್ತು ಸೆಟಿಯಾವಾನ್ ತಮ್ಮ ಅನುಭವ ಮತ್ತು ಸಾಮರ್ಥ್ಯದಿಂದ ಭಾರತೀಯ ಜೋಡಿಯನ್ನು ಸಂಕಷ್ಟಕ್ಕೆ ಸಿಲುಕಿಸಿದರು. ಆದರೆ, ಸಾತ್ವಿಕ್ ಮತ್ತು ಚಿರಾಗ್ ಕೂಡ ಕಠಿಣ ಹೋರಾಟದ ನಂತರ ಮುನ್ನಡೆ ಸಾಧಿಸಿ ಮ್ಯಾಚ್ ಪಾಯಿಂಟ್ ಸಮೀಪ ಬಂದರು. ಇಲ್ಲಿಂದ ಪೈಪೋಟಿ ಕಠಿಣವಾಯಿತು ಮತ್ತು ಎರಡೂ ಜೋಡಿಗಳು ಕೊನೆಯ ಅಂಕ ಪಡೆಯುವ ಹಲವು ಅವಕಾಶಗಳನ್ನು ಕಳೆದುಕೊಂಡರು. ಅಂತಿಮವಾಗಿ, 43 ನಿಮಿಷಗಳ ಕಾಲ ನಡೆದ ಕಠಿಣ ಪಂದ್ಯದಲ್ಲಿ ಸಾತ್ವಿಕ್ ಮತ್ತು ಚಿರಾಗ್ 21-16 26-24 ಗೆಲುವಿನ ಮೂಲಕ ಪ್ರಶಸ್ತಿಯನ್ನು ಗೆದ್ದರು.

ಹೊಸ ವರ್ಷಕ್ಕೆ ಉತ್ತಮ ಆರಂಭ ಈ ಗೆಲುವಿನೊಂದಿಗೆ ಭಾರತದ ಜೋಡಿ ಹೊಸ ವರ್ಷಕ್ಕೆ ಶುಭಾರಂಭ ಮಾಡಿದೆ. ಈ ಟೂರ್ನಿಯಲ್ಲಿ ಪುರುಷರ ಡಬಲ್ಸ್‌ನಲ್ಲಿ ಪ್ರಶಸ್ತಿ ಗೆದ್ದ ಭಾರತದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಳೆದ ವರ್ಷ ಇಬ್ಬರಿಗೂ ನಿರಾಸೆಯಾಗಿತ್ತು. ಸ್ವಿಸ್ ಓಪನ್ ಮತ್ತು ಇಂಡೋನೇಷ್ಯಾ ಓಪನ್‌ನ ಸೆಮಿ-ಫೈನಲ್‌ನಲ್ಲಿ ಸೋತಿದ್ದರು. ನಂತರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮೊದಲ ಸುತ್ತಿನಲ್ಲಿ ಪರಾಭವಗೊಂಡರು. ಈಗ ಇಬ್ಬರೂ ಕಣ್ಣುಗಳು ಈ ವರ್ಷ ತಮ್ಮ ದಾಖಲೆಯನ್ನು ಸುಧಾರಿಸುವತ್ತ ಇವೆ.

ಸಾತ್ವಿಕ್ ಮತ್ತು ಚಿರಾಗ್ ನಂತರ ಭಾರತದ ಯುವ ಷಟ್ಲರ್ ಲಕ್ಷ್ಯ ಸೇನ್ ಕೂಡ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಅವಕಾಶ ಹೊಂದಿದ್ದಾರೆ. 20 ವರ್ಷದ ಭಾರತೀಯ ಆಟಗಾರ ಮೊದಲ ಬಾರಿಗೆ ಫೈನಲ್‌ಗೆ ಪ್ರವೇಶಿಸಿದ್ದಾರೆ ಮತ್ತು ಕಳೆದ ತಿಂಗಳು ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಸಿಂಗಾಪುರದ ಲೋಹ್ ಕೀನ್ ಯೂ ವಿರುದ್ಧ ಸೆಣಸಿದ್ದಾರೆ.

Published On - 5:57 pm, Sun, 16 January 22

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು