AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ನಲ್ಲಿ ಭಾರತಕ್ಕೆ ಪದಕ ಖಚಿತ

Satwiksairaj Rankireddy and Chirag Shetty : 2023 ರಲ್ಲಿ  ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಜೋಡಿಯು ಇದೀಗ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲೂ ಪರಾಕ್ರಮ ಮೆರೆದಿದ್ದಾರೆ. ಈ ಮೂಲಕ ಮತ್ತೊಮ್ಮೆ ಭಾರತಕ್ಕೆ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ನಲ್ಲಿ ಭಾರತಕ್ಕೆ ಪದಕ ಖಚಿತ
Satwiksairaj Rankireddy And Chirag Shetty
ಝಾಹಿರ್ ಯೂಸುಫ್
|

Updated on: Aug 30, 2025 | 10:31 AM

Share

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಸೆಮಿಫೈನಲ್​ಗೆ ಭಾರತದ ಸಾತ್ವಿಕ್ ‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ. ಈ ಎಂಟ್ರಿಯೊಂದಿಗೆ ಈ ಬಾರಿ ಭಾರತಕ್ಕೆ ಪದಕ ಸಿಗುವುದು ಖಚಿತವಾಗಿದೆ. ಇದಕ್ಕೂ ಮುನ್ನ 2022 ರಲ್ಲಿ ಸಾತ್ವಿಕ್ ‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೆಮಿಫೈನಲ್​ಗೆ ತಲುಪುವ ಮೂಲಕ ಕಂಚಿನ ಪದಕ ಗೆದ್ದಿದ್ದರು.

ಇದೀಗ ಮತ್ತೊಮ್ಮೆ ಸಾತ್ವಿಕ್ ‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಿರ್ಣಾಯಕ ಹಂತಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಕಂಚಿನ ಪದಕ ದೃಢಪಡಿಸಿಕೊಂಡಿರುವ ಈ ಜೋಡಿಯು ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್​ಗೇರುವ ವಿಶ್ವಾಸದಲ್ಲಿದ್ದಾರೆ. 

ಅಮೋಘ ಗೆಲುವು:

ಪುರುಷರ ಡಬಲ್ಸ್​ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ಮಲೇಷ್ಯಾದ ಜೋಡಿ ಆರನ್ ಚಿಯಾ ಮತ್ತು ಸೋಹ್ ವೂಯಿ ಯಿಕ್ ಅವರನ್ನು ನೇರ ಸೆಟ್​​ಗಳಿಂದ ಸೋಲಿಸಿದರು.

ಮೊದಲ ಸೆಟ್​ ಅನ್ನು 21-12 ಅಂಕಗಳ ಅಂತರದಿಂದ ಗೆದ್ದ ಸಾತ್ವಿಕ್-ಚಿರಾಗ್, ದ್ವಿತೀಯ ಸೆಟ್​​ನಲ್ಲಿ 21-19 ಅಂತರದ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಆರನ್ ಚಿಯಾ ಮತ್ತು ಸೋಹ್ ವೂಯಿ ಯಿಕ್ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡರು.

ಏಷ್ಯನ್ ಚಾಂಪಿಯನ್​​ಶಿಪ್ ಗೆದ್ದ ಜೋಡಿ:

ಇದಕ್ಕೂ ಮುನ್ನ 2023 ರಲ್ಲಿ ದುಬೈನಲ್ಲಿ ನಡೆದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಜೋಡಿ ಇತಿಹಾಸ ಸೃಷ್ಟಿಸಿದ್ದರು. ಫೈನಲ್ ಪಂದ್ಯದಲ್ಲಿ ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.

ಅಲ್ಲದೆ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಡಬಲ್ಸ್ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಜೋಡಿ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ದೀಪ್ ಘೋಸ್ ಮತ್ತು ರಾಮನ್ ಘೋಸ್ ಜೋಡಿ 1971ರಲ್ಲಿ ನಡೆದ ಈ ಟೂರ್ನಿಯಲ್ಲಿ ಸೆಮಿಫೈನಲ್‌ವರೆಗೆ ತಲುಪಿತ್ತು. ಆದರೆ, ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ಆದರೆ 52 ವರ್ಷಗಳ ಏಷ್ಯಾದ ಅಂಗಳದಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಯಶಸ್ವಿಯಾಗಿದ್ದರು. ಇದೀಗ ವಿಶ್ವ ಬ್ಯಾಡ್ಮಿಂಟನ್​ನಲ್ಲೂ ಹೊಸ ಅಧ್ಯಾಯ ಬರೆಯುವತ್ತ ಭಾರತದ ಜೋಡಿ ಮುನ್ನುಗ್ಗಿದ್ದಾರೆ.

ಇದನ್ನೂ ಓದಿ: ಬರೋಬ್ಬರಿ 15 ಸಿಕ್ಸ್, 8 ಫೋರ್: ವಿಸ್ಫೋಟಕ ಸೆಂಚುರಿ ಸಿಡಿಸಿದ ನಿತೀಶ್ ರಾಣಾ

ಅದರಂತೆ ಸೆಮಿಫೈನಲ್‌ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ವಿಶ್ವದ 11ನೇ ಶ್ರೇಯಾಂಕದ ಚೀನಾದ ಲಿ ಯಿಯು ಮತ್ತು ಬೊ ಯಾಂಗ್ ಚೆನ್ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯದಲ್ಲಿ ಗೆದ್ದರೆ ಭಾರತಕ್ಕೆ ಬೆಳ್ಳಿ ಪದಕ ಖಚಿತವಾಗಲಿದೆ.

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ