RCB vs PBKS: ಹೈ ಸೆಕ್ಯೂರಿಟಿ ನಡುವೆಯೂ ನುಗ್ಗಿ ಬಂದು ಕೊಹ್ಲಿ ಕಾಲು ಹಿಡಿದ ಫ್ಯಾನ್ ಪೊಲೀಸ್ ವಶಕ್ಕೆ

ಐಪಿಎಲ್ 2024ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ರೋಚಕ ಪಂದ್ಯ ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಿತು. ಈ ವೇಳೆ ಭದ್ರತಾ ವೈಫಲ್ಯ ಉಂಟಾಗಿದೆ. ಓರ್ವ ಅಭಿಮಾನಿ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದಾನೆ. ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದಂತೆ ಕ್ರೀಸ್​ಗೆ ನುಗ್ಗಿದ್ದ ಅಭಿಮಾನಿ ಕಾಲು ಹಿಡಿದುಕೊಂಡಿದ್ದಾನೆ.

RCB vs PBKS: ಹೈ ಸೆಕ್ಯೂರಿಟಿ ನಡುವೆಯೂ ನುಗ್ಗಿ ಬಂದು ಕೊಹ್ಲಿ ಕಾಲು ಹಿಡಿದ ಫ್ಯಾನ್ ಪೊಲೀಸ್ ವಶಕ್ಕೆ
ಮೈದಾನಕ್ಕೆ ನುಗ್ಗಿದ ವಿರಾಟ್ ಕೊಹ್ಲಿ ಅಭಿಮಾನಿ
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on:Mar 25, 2024 | 10:53 PM

ಬೆಂಗಳೂರು, ಮಾರ್ಚ್​​ 25: ಐಪಿಎಲ್ 2024ರ (IPL 2024) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ ನಡುವೆ ರೋಚಕ ಪಂದ್ಯ ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಿತು. ಈ ವೇಳೆ ಭದ್ರತಾ ವೈಫಲ್ಯ ಉಂಟಾಗಿದೆ. ಓರ್ವ ಅಭಿಮಾನಿ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದಾನೆ. ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದಂತೆ ಕ್ರೀಸ್​ಗೆ ನುಗ್ಗಿದ್ದ ಅಭಿಮಾನಿ ಕಾಲು ಹಿಡಿದುಕೊಂಡಿದ್ದಾನೆ. ಹೈ ಸೆಕ್ಯೂರಿಟಿ ನಡುವೆಯೂ ಕೊಹ್ಲಿ ಅಭಿಮಾನಿ ಮೈದಾನಕ್ಕೆ ನುಗ್ಗಿದ್ದು, ಬಳಿಕ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಬ್ಬನ್​ ಪಾರ್ಕ್ ಠಾಣೆ ಪೊಲೀಸರಿಂದ ಯುವಕನ ವಿಚಾರಣೆ ಮಾಡಲಾಗುತ್ತಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್​​ ತಂಡದ ಶಿಖರ್ ಧವನ್ ಅವರು 37 ಎಸೆತಗಳಲ್ಲಿ 45 ರನ್ ಗಳಿಸಿದರು. ಬಳಿಕ ಪ್ರಭಾಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ ಮತ್ತು ವಿಶೇಷವಾಗಿ ಶಶಾಂಕ್ ಸಿಂಗ್ ಅವರ ಉತ್ತಮ ಆಟದೊಂದಿಗೆ ತಂಡವು 176 ರನ್ ಗಳಿಸಿತು.

ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ

ರನ್ ಚೇಸ್‌ನಲ್ಲಿ ಆರ್‌ಸಿಬಿ ಈಗಾಗಲೇ 4 ವಿಕೆಟ್‌ಗಳನ್ನು ಕಳೆದುಕೊಂಡಿದೆ, ಆದರೆ ಕೊಹ್ಲಿ ಇನ್ನೂ ತನ್ನ ಮೇಲೆ ಸಂಪೂರ್ಣ ಭರವಸೆಯನ್ನು ಇಟ್ಟುಕೊಂಡಿದ್ದಾರೆ. ಬೆಂಗಳೂರು ಇಲ್ಲಿಯವರೆಗೆ ಫಾಫ್ ಡು ಪ್ಲೆಸಿಸ್, ಕ್ಯಾಮೆರಾನ್ ಗ್ರೀನ್, ರಜತ್ ಪಾಟಿದಾರ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರ ವಿಕೆಟ್​ ಕಳೆದುಕೊಳ್ಳಲಾಗಿದೆ. ಪ್ರಸ್ತುತ, ವಿಕೆಟ್ ಕೀಪರ್ ಅನುಜ್ ರಾವತ್ ಮಾಜಿ ನಾಯಕನೊಂದಿಗೆ ಕ್ರೀಸ್‌ನಲ್ಲಿದ್ದು ಜೊತೆಯಾಟವನ್ನು ಆಡುತ್ತಿದ್ದಾರೆ.

ಇದನ್ನೂ ಓದಿ: IPL 2024: ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಕಿಂಗ್ ಕೊಹ್ಲಿ..!

ವಿರಾಟ್ ಕೊಹ್ಲಿ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಇದು ಟಿ20 ಕ್ರಿಕೆಟ್‌ನಲ್ಲಿ ಅವರ 100ನೇ 50+ ಸ್ಕೋರ್ ಆಗಿದೆ. ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು 9 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿದೆ. ಇಲ್ಲಿಂದ ಪಂದ್ಯ ಗೆಲ್ಲಲು ಆರ್‌ಸಿಬಿಗೆ 11 ಓವರ್‌ಗಳಲ್ಲಿ 100 ರನ್‌ಗಳ ಅಗತ್ಯವಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:39 pm, Mon, 25 March 24

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ