AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shafali Verma: ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆ ಮೇಲೆ ದಾಖಲೆ ಬರೆದ ಶೆಫಾಲಿ ವರ್ಮಾ! ಕಿರಿಯ ವಯಸ್ಸಿನಲ್ಲಿ ಅದ್ಭುತ ಸಾಧನೆ

Shafali Verma: ಎರಡೂ ಇನ್ನಿಂಗ್ಸ್‌ಗಳಲ್ಲಿ ಅವರು ಶತಕದಿಂದ ವಂಚಿತರಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಶೆಫಾಲಿ 96 ರನ್ ಗಳಿಸಿದ್ದರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 63 ರನ್ಗಳು ಅವರ ಬ್ಯಾಟ್‌ನಿಂದ ಹೊರಬಂದವು.

Shafali Verma: ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆ ಮೇಲೆ ದಾಖಲೆ ಬರೆದ ಶೆಫಾಲಿ ವರ್ಮಾ! ಕಿರಿಯ ವಯಸ್ಸಿನಲ್ಲಿ ಅದ್ಭುತ ಸಾಧನೆ
ಶೆಫಾಲಿ ವರ್ಮಾ
ಪೃಥ್ವಿಶಂಕರ
|

Updated on: Jun 19, 2021 | 6:18 PM

Share

ಶೆಫಾಲಿ ವರ್ಮಾ ಬ್ಯಾಟ್ ಹಿಡಿದಾಗಲೆಲ್ಲಾ ಒಂದಲ್ಲ ಒಂದು ದಾಖಲೆಯಿಂದ ಸುದ್ದಿಯಲ್ಲಿರುತ್ತಾರೆ. ಮಹಿಳೆಯರು ಟಿ 20 ವಿಶ್ವಕಪ್‌ಗೆ ಪ್ರವೇಶಿಸಿ ಈಗ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇದರೊಂದಿಗೆ ಹಲವಾರು ದಾಖಲೆಗಳನ್ನು ಮಾಡತ್ತಿದ್ದಾರೆ. ಬಹುತೇಕ ಪ್ರತಿದಿನ ಶೆಫಾಲಿ ಕೆಲವು ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಭಾರತದ ಮಹಿಳಾ ತಂಡ ಪ್ರಸ್ತುತ ಇಂಗ್ಲೆಂಡ್‌ನೊಂದಿಗೆ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಮತ್ತು ಎಂದಿನಂತೆ, ಈ ಪಂದ್ಯದಲ್ಲಿ ಶೆಫಾಲಿ ತನ್ನ ಬ್ಯಾಟ್‌ನಿಂದ ರನ್ ಗಳಿಸಿ ದಾಖಲೆಗಳನ್ನು ಮಾಡಿದ್ದಾರೆ.

ಆದಾಗ್ಯೂ, ಎರಡೂ ಇನ್ನಿಂಗ್ಸ್‌ಗಳಲ್ಲಿ ಅವರು ಶತಕದಿಂದ ವಂಚಿತರಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಶೆಫಾಲಿ 96 ರನ್ ಗಳಿಸಿದ್ದರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 63 ರನ್ಗಳು ಅವರ ಬ್ಯಾಟ್‌ನಿಂದ ಹೊರಬಂದವು. ಈ ಸಮಯದಲ್ಲಿ ಅವರು ಅನೇಕ ದಾಖಲೆಗಳನ್ನು ಮಾಡಿದರು. ಟೆಸ್ಟ್ ಪಂದ್ಯವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ಮಹಿಳಾ ಆಟಗಾರ್ತಿ ಎಂಬ ದಾಖಲೆ ಅವರ ಹೆಸರಲ್ಲಿ ದಾಖಲಾಯ್ತು. ಮಹಿಳಾ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದು ಪಂದ್ಯದಲ್ಲಿ ಹೆಚ್ಚು ಮೂರು ಸಿಕ್ಸರ್‌ಗಳನ್ನು ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

13 ಬೌಂಡರಿ ಮತ್ತು ಎರಡು ಸಿಕ್ಸರ್‌ ಶೆಫಾಲಿಗೂ ಮೊದಲು, ಯಾವುದೇ ಮಹಿಳಾ ಕ್ರಿಕೆಟರ್ ಟೆಸ್ಟ್ ಪಂದ್ಯದಲ್ಲಿ ಅಷ್ಟು ಸಿಕ್ಸರ್‌ಗಳನ್ನು ಹೊಡೆಯಲು ಸಾಧ್ಯವಾಗಲಿಲ್ಲ. ಎರಡೂ ಇನಿಂಗ್ಸ್‌ಗಳಲ್ಲಿ ಶೆಫಾಲಿ ಒಟ್ಟು ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅವರು ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ಸಿಕ್ಸರ್‌ಗಳನ್ನು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಒಂದು ಸಿಕ್ಸರ್‌ ಹೊಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಶೆಫಾಲಿ 152 ಎಸೆತಗಳನ್ನು ಎದುರಿಸಿದರು ಮತ್ತು 13 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಹೊಡೆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಅವರು 83 ಎಸೆತಗಳಲ್ಲಿ 11 ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ ಅರ್ಧಶತಕವನ್ನು ಬಾರಿಸಿದರು.

ಚಿಕ್ಕ ವಯಸ್ಸಿನಲ್ಲಿ ದೊಡ್ಡ ಸಾಧನೆ ಚೊಚ್ಚಲ ಟೆಸ್ಟ್‌ನಲ್ಲಿ ಅರ್ಧಶತಕ ಗಳಿಸಿದ ಕೂಡಲೇ ಹರಿಯಾಣದ ಶೆಫಾಲಿ ಭಾರತದ ಪರ ಮೊದಲ ಟೆಸ್ಟ್‌ನಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಆರಂಭಿಕ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಮಹಿಳಾ ಮತ್ತು ಪುರುಷರ ಕ್ರಿಕೆಟ್‌ನಲ್ಲಿ ಇದು ಒಂದು ದಾಖಲೆಯಾಗಿದೆ. ಶೆಫಾಲಿ 17 ವರ್ಷ ಮತ್ತು 140 ದಿನಗಳ ವಯಸ್ಸಿನಲ್ಲಿ ಈ ಅದ್ಭುತವನ್ನು ಮಾಡಿದರು. ಅವರು, ಸಹ ಬ್ಯಾಟ್ಸ್‌ಮನ್ ಸ್ಮೃತಿ ಮಂಧನಾ ಅವರ ದಾಖಲೆಯನ್ನು ಮುರಿದರು. ಮಂದಾನ 2014 ರಲ್ಲಿ 18 ವರ್ಷ ಮತ್ತು 28 ದಿನಗಳ ವಯಸ್ಸಿನಲ್ಲಿ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿದ್ದರು. ಇದರೊಂದಿಗೆ ಟೆಸ್ಟ್ ಚೊಚ್ಚಲ ಪಂದ್ಯದಲ್ಲಿ ಐವತ್ತು ರನ್ ಗಳಿಸುವಲ್ಲಿ ಮಹಿಳಾ ಕ್ರಿಕೆಟ್‌ನಲ್ಲಿ ಶೆಫಾಲಿ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಜೋಹಮರಿ ಲೌಟೆನ್‌ಬರ್ಗ್, 2003 ರಲ್ಲಿ 14 ವರ್ಷ ಮತ್ತು 166 ದಿನಗಳಲ್ಲಿ ಇಂಗ್ಲೆಂಡ್ ವಿರುದ್ಧ 74 ರನ್ ಗಳಿಸಿದ್ದಾನೆ. ಅಂದಹಾಗೆ, ಮಹಿಳಾ ಕ್ರಿಕೆಟ್‌ನಲ್ಲಿ ಒಟ್ಟಾರೆ ಐವತ್ತು ಗಳಿಸಿದ ನಾಲ್ಕನೇ ಕಿರಿಯ ಬ್ಯಾಟ್ಸ್‌ಮನ್ ಶೆಫಾಲಿ ಆಗಿದ್ದಾರೆ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ