Shubman Gill: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (131) ಹಾಗೂ ರವೀಂದ್ರ ಜಡೇಜಾ ಶತಕ ಬಾರಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಶುಭ್ಮನ್ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.