Shubman Gill: ಶತಕದಂಚಿನಲ್ಲಿ ಎಡವಿದ ಶುಭ್​ಮನ್​ ಗಿಲ್

| Updated By: ಝಾಹಿರ್ ಯೂಸುಫ್

Updated on: Feb 18, 2024 | 10:38 AM

Shubman Gill: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (131) ಹಾಗೂ ರವೀಂದ್ರ ಜಡೇಜಾ ಶತಕ ಬಾರಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಶುಭ್​ಮನ್ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.

1 / 6
India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶುಭ್​ಮನ್ ಗಿಲ್ (Shubman Gill) ಶತಕ ವಂಚಿತರಾಗಿದ್ದಾರೆ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ಇನಿಂಗ್ಸ್​​ನಲ್ಲಿ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 6
ಮೊದಲ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದ ಗಿಲ್, ದ್ವಿತೀಯ ಇನಿಂಗ್ಸ್​ನಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದರು. ಆರಂಭದಲ್ಲಿ ತಾಳ್ಲೆಯುತ ಬ್ಯಾಟಿಂಗ್​ಗೆ ಒತ್ತು ನೀಡಿದ ಗಿಲ್ 98 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

3 / 6
ಅಲ್ಲದೆ ಮೂರನೇ ದಿನದಾಟದ ಅಂತ್ಯಕ್ಕೆ 65 ರನ್​ಗಳಿಸಿ ಅಜೇಯರಾಗಿ ಉಳಿದಿದ್ದ ಗಿಲ್ ನಾಲ್ಕನೇ ದಿನದಾಟದ ಆರಂಭದಲ್ಲೇ ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಿದರು. ಆಕರ್ಷಕ ಕವರ್​ ಡ್ರೈವ್​ಗಳೊಂದಿಗೆ ಗಮನ ಸೆಳೆದ ಶುಭ್​ಮನ್ 91 ರನ್​ಗಳಿಸಿ ಶತಕದತ್ತ ದಾಪುಗಾಲಿಟ್ಟಿದ್ದರು.

4 / 6
ಆದರೆ ಈ ಹಂತದಲ್ಲಿ ಕುಲ್ದೀಪ್ ಯಾದವ್ ಎಡವಟ್ಟಿನಿಂದಾಗಿ ಶುಭ್​ಮನ್ ಗಿಲ್ ರನೌಟ್ ಆದರು. 151 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 9 ಫೋರ್​ಗಳೊಂದಿಗೆ 91 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಶುಭ್​ಮನ್ ಗಿಲ್ ಕೇವಲ 9 ರನ್​ಗಳಿಂದ ಶತಕ ವಂಚಿತರಾಗಿದ್ದಾರೆ. ಇದರೊಂದಿಗೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 2ನೇ ಶತಕ ಬಾರಿಸುವ ಅವಕಾಶವನ್ನು ಕೈ ಚೆಲ್ಲಿಕೊಂಡರು.

5 / 6
ಇದಕ್ಕೂ ಮುನ್ನ ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಗಿಲ್ 104 ರನ್ ಬಾರಿಸಿದ್ದರು. ಇದೀಗ ಮೂರನೇ ಟೆಸ್ಟ್​ನಲ್ಲೂ ಸೆಂಚುರಿ ಸಿಡಿಸುವ ಅವಕಾಶ ಹೊಂದಿದ್ದ ಶುಭ್​​ಮನ್ ಕೊನೆಯ ಹಂತದಲ್ಲಿ ರನೌಟ್ ಆಗಿ ನಿರಾಸೆ ಮೂಡಿಸಿದರು.

6 / 6
ಇನ್ನು ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಶತಕ ಬಾರಿಸಿದರೆ, ಶುಭ್​ಮನ್ ಗಿಲ್ (91) ಆಕರ್ಷಕ ಅರ್ಧಶತಕ ಸಿಡಿಸಿದರು. ಯುವ ದಾಂಡಿಗರಿಬ್ಬರ ಭರ್ಜರಿ ಬ್ಯಾಟಿಂಗ್​ ನೆರವಿನಿಂದ ಟೀಮ್ ಇಂಡಿಯಾ 65 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 247 ರನ್ ಕಲೆಹಾಕಿದೆ.