IND vs SA: ಭಾರತ-ಸೌತ್ ಆಫ್ರಿಕಾ ನಡುವೆ ಇಂದು ಫೈನಲ್ ಫೈಟ್

South Africa vs India: ಭಾರತ-ಸೌತ್ ಆಫ್ರಿಕಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ 93 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 51 ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡವೇ ಜಯ ಸಾಧಿಸಿದೆ. ಇನ್ನು ಟೀಮ್ ಇಂಡಿಯಾ ಗೆದ್ದಿರುವುದು 39 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು. 

IND vs SA: ಭಾರತ-ಸೌತ್ ಆಫ್ರಿಕಾ ನಡುವೆ ಇಂದು ಫೈನಲ್ ಫೈಟ್
IND vs SA
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 21, 2023 | 6:59 AM

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಮೂರನೇ ಟಿ20 ಪಂದ್ಯವು ಇಂದು (ಡಿ.21) ನಡೆಯಲಿದೆ. ಪಾರ್ಲ್​​ನ ಬೋಲ್ಯಾಂಡ್ ಪಾರ್ಕ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಭರ್ಜರಿ ಗೆಲುವು ದಾಖಲಿಸಿತು. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳುವುದಿಲ್ಲ. ಅಯ್ಯರ್ ಈಗಾಗಲೇ ಭಾರತ ಟೆಸ್ಟ್ ಬಳಗವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಇಂದಿನ ಪಂದ್ಯದಲ್ಲೂ ರಿಂಕು ಸಿಂಗ್ ಕಣಕ್ಕಿಳಿಯಲಿದ್ದಾರೆ.

ಉಭಯ ತಂಡಗಳ ಮುಖಾಮುಖಿ:

ಭಾರತ-ಸೌತ್ ಆಫ್ರಿಕಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ 93 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 51 ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡವೇ ಜಯ ಸಾಧಿಸಿದೆ. ಇನ್ನು ಟೀಮ್ ಇಂಡಿಯಾ ಗೆದ್ದಿರುವುದು 39 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.

ಇದಾಗ್ಯೂ ಕಳೆದ 6 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಮೇಲುಗೈ ಸಾಧಿಸಿದೆ. ಕೊನೆಯ ಆರು ಮುಖಾಮುಖಿಯಲ್ಲಿ ಸೌತ್ ಆಫ್ರಿಕಾ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಉಳಿದ 4 ಪಂದ್ಯಗಳಲ್ಲಿ ಜಯ ಸಾಧಿಸಿ ಟೀಮ್ ಇಂಡಿಯಾ ಪಾರುಪತ್ಯ ಮೆರೆದಿದೆ. ಅದರಲ್ಲೂ ಈ ವರ್ಷ ಆಡಿದ ಮೂರು ಮ್ಯಾಚ್​​ಗಳಲ್ಲಿ ಟೀಮ್ ಇಂಡಿಯಾ ಎರಡರಲ್ಲಿ ಜಯ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳುವುದನ್ನು ನಿರೀಕ್ಷಿಸಬಹುದು.

ಸೌತ್ ಆಫ್ರಿಕಾ ತಂಡ: ರೀಝ ಹೆಂಡ್ರಿಕ್ಸ್, ಟೋನಿ ಡಿ ಜೊರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್ , ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ, ಲಿಝಾಡ್ ವಿಲಿಯಮ್ಸ್, ವಿಯಾನ್ ಮುಲ್ಡರ್, ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮಿಹ್ಲಾಲಿ ಎಂಪೊಂಗ್ವಾನಾ, ಕೈಲ್ ವೆರ್ರೆನ್ನೆ.

ಇದನ್ನೂ ಓದಿ: Rohit Sharma: ರೋಹಿತ್ ಶರ್ಮಾಗೆ ಬಿಗ್ ಆಫರ್ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್​

ಭಾರತ ತಂಡ: ರಜತ್ ಪಾಟಿದಾರ್, ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಯುಜ್ವೇಂದ್ರ ಚಹಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಆಕಾಶ್ ದೀಪ್.