AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Squash World Cup 2023: ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಸೆಮಿಫೈನಲ್​ಗೆ ಎಂಟ್ರಿಕೊಟ್ಟ ಭಾರತ..!

Squash World Cup 2023: 12 ವರ್ಷಗಳ ನಂತರ ಚೆನ್ನೈನ ಎಕ್ಸ್‌ಪ್ರೆಸ್ ಅವೆನ್ಯೂ ಮಾಲ್‌ನಲ್ಲಿ ನಡೆಯುತ್ತಿರುವ ಸ್ಕ್ವಾಷ್ ವಿಶ್ವಕಪ್‌ನ ಸೆಮಿಫೈನಲ್‌ಗೆ ಭಾರತ ತಂಡ ಅರ್ಹತೆ ಪಡೆದಿದೆ.

Squash World Cup 2023: ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಸೆಮಿಫೈನಲ್​ಗೆ ಎಂಟ್ರಿಕೊಟ್ಟ ಭಾರತ..!
ಸ್ಕ್ವಾಷ್ ವಿಶ್ವಕಪ್‌
Follow us
ಪೃಥ್ವಿಶಂಕರ
|

Updated on:Jun 15, 2023 | 12:09 PM

12 ವರ್ಷಗಳ ನಂತರ ಚೆನ್ನೈನಲ್ಲಿ (Chennai) ನಡೆಯುತ್ತಿರುವ ಸ್ಕ್ವಾಷ್ ವಿಶ್ವಕಪ್‌ನಲ್ಲಿ (Squash World Cup 2023) ಭಾರತ ತಂಡ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಹಾಂಗ್ ಕಾಂಗ್ ಚೀನಾ ತಂಡವನ್ನು ಮಣಿಸಿದ್ದ ಭಾರತ, ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 4-0 ಅಂತರದಿಂದ ಸುಲಭವಾಗಿ ಮಣಿಸಿತು. ಇದರೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 12 ಅಂಕಗಳೊಂದಿಗೆ ಭಾರತ ಬಿ ಪೂಲ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಜಪಾನ್ 10 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಭಾರತದ ತನ್ವಿ ಖನ್ನಾ, ಸೌರವ್ ಘೋಸಲ್, ಜೋಷ್ನಾ ಚಿನಪ್ಪ ಮತ್ತು ಅಭಯ್ ಸಿಂಗ್ (Tanvi Khanna, Saurav Ghosal, Joshna Chinappa and Abhay Singh) ಆಯಾ ಎದುರಾಳಿಗಳ ವಿರುದ್ಧ ಆರಾಮದಾಯಕ ವಿಜಯವನ್ನು ದಾಖಲಿಸಿದರು. ಇದರೊಂದಿಗೆ ಇನ್ನು ಒಂದು ಪಂದ್ಯ ಬಾಕಿ ಇರುವಂತೆ ಭಾರತ ಸೆಮಿಫೈನಲ್ ಪ್ರವೇಶಿಸಿದೆ. ಭಾರತ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಜಪಾನ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನವನ್ನು ಉಳಿಸಿಕೊಳ್ಳುವುದು ಭಾರತದ ಗುರಿಯಾಗಿದೆ.

ಪಂದ್ಯ ಹೀಗಿತ್ತು

ಮೊದಲ ಪಂದ್ಯದಲ್ಲಿ ತನ್ವಿ ಖನ್ನಾ 7-4, 7-2, 3-7, 7-2 ಸೆಟ್‌ಗಳಿಂದ ಹೇಲಿ ವಾರ್ಡ್‌ರನ್ನು ಸೋಲಿಸಿದರು. ತನ್ವಿ ಒಂದೇ ಒಂದು ಪಂದ್ಯದಲ್ಲಿ ಸೋತಿದ್ದರಿಂದ ಪಂದ್ಯ ಬಹುತೇಕ ಏಕಪಕ್ಷೀಯವಾಗಿತ್ತು. ಎರಡನೇ ಪಂದ್ಯದಲ್ಲಿ ಸೌರವ್ ಘೋಸಾಲ್ ಅವರು ಡೆವಾಲ್ಡ್ ವ್ಯಾನ್ ನಿಕೆರ್ಕ್ ಅವರನ್ನು 7-6, 7-4, 7-1 ಸೆಟ್‌ಗಳಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಭಾರತದ ಪರ ಸ್ಕೋರ್‌ಲೈನ್ 2-0ಗೆ ಏರಿಕೆಯಾಯಿತು.

ಟೈನ ಮೂರನೇ ಪಂದ್ಯದಲ್ಲಿ ಜೋಶ್ನಾ ಚಿನಪ್ಪ 7-4, 7-3, 3-7, 7-1 ರಲ್ಲಿ ಲಿಜೆಲ್ ಮುಲ್ಲರ್ ಅವರನ್ನು ಸೋಲಿಸಿದರು. ಹೀಗಾಗಿ ಟೈನಲ್ಲಿ ಭಾರತ 3-0 ಅಂತರದ ಮುನ್ನಡೆ ಸಾಧಿಸಿತ್ತು. ಕೊನೆಯದಾಗಿ ಅಭಯ್ ಸಿಂಗ್ 7-4, 3-7, 7-6, 7-5 ಸೆಟ್‌ಗಳಿಂದ ಜೀನ್-ಪಿಯರ್ ಬ್ರಿಟ್ಸ್‌ರನ್ನು ಸೋಲಿಸುವುದರೊಂದಿಗೆ ಭಾರತದ ಮುನ್ನಡೆಯನ್ನು 4-0 ಅಂತರಕ್ಕೇರಿಸಿದರು.

ಎರಡು ಹಂತಗಳಲ್ಲಿ ಸ್ಕ್ವಾಷ್ ವಿಶ್ವಕಪ್

ಸ್ಕ್ವಾಷ್ ಚಾಂಪಿಯನ್‌ಶಿಪ್ ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಮೊದಲನೆಯದು ಗುಂಪು ಹಂತವಾಗಿದ್ದರೆ, ಎರಡನೆಯದು ನಾಕೌಟ್ ಹಂತವಾಗಿದೆ. ಗುಂಪು ಹಂತಕ್ಕಾಗಿ ತಂಡಗಳನ್ನು ತಲಾ ನಾಲ್ಕು ತಂಡಗಳ ಎರಡು ಪೂಲ್‌ಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಈಜಿಪ್ಟ್, ಆಸ್ಟ್ರೇಲಿಯಾ, ಮಲೇಷ್ಯಾ ಮತ್ತು ಕೊಲಂಬಿಯಾ ಪೂಲ್ ಎಯಲ್ಲಿ ಸ್ಥಾನ ಪಡೆದಿದ್ದರೆ, ಭಾರತ, ಜಪಾನ್, ದಕ್ಷಿಣ ಆಫ್ರಿಕಾ ಮತ್ತು ಹಾಂಗ್ ಕಾಂಗ್ ಚೀನಾ ಪೂಲ್ ಬಿಯಲ್ಲಿ ಸ್ಥಾನ ಪಡೆದಿವೆ.

ರೌಂಡ್-ರಾಬಿನ್ ಪಂದ್ಯಗಳಲ್ಲಿ ಸ್ಪರ್ಧಿಸುತ್ತವೆ

ಗುಂಪು ಹಂತದಲ್ಲಿ, ಪ್ರತಿ ತಂಡವು ತನ್ನ ಪೂಲ್‌ನಲ್ಲಿರುವ ಇತರ ಮೂರು ತಂಡಗಳ ವಿರುದ್ಧ ರೌಂಡ್-ರಾಬಿನ್ ( ಒಂದು ತಂಡವು ಗುಂಪಿನಲ್ಲಿರುವ ಇತರ ತಂಡಗಳ ವಿರುದ್ಧ ತಲಾ ಒಂದೊಂದು ಪಂದ್ಯವನ್ನು ಆಡುತ್ತವೆ) ಮಾದರಿಯಲ್ಲಿ ಸ್ಪರ್ಧಿಸುತ್ತವೆ. ಪ್ರತಿ ಪೂಲ್‌ನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಎಂಟ್ರಿಕೊಡುತ್ತವೆ. ಇನ್ನುಳಿದ ತಂಡಗಳು ಐದರಿಂದ ಎಂಟನೇ ಸ್ಥಾನಕ್ಕಾಗಿ ಪಂದ್ಯಗಳಲ್ಲಿ ಸ್ಪರ್ಧಿಸುತ್ತವೆ. ಪ್ಲೇ ಆಫ್ ವರ್ಗೀಕರಣಕ್ಕಾಗಿ ಈ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.

ಒಂದು ಸ್ಕ್ವಾಷ್ ತಂಡದಲ್ಲಿ ನಾಲ್ವರು ಸದಸ್ಯರಿರುತ್ತಾರೆ. ಇದರಲ್ಲಿ ಪ್ರತಿಯೊಂದೂ ತಂಡದಲ್ಲೂ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರಿರುತ್ತಾರೆ. ನಾಕೌಟ್ ಸುತ್ತಿನಲ್ಲಿ ಡ್ರಾ ಕಂಡುಬಂದರೆ, ಟೈ ಸಮಯದಲ್ಲಿ ಪ್ರತಿ ತಂಡವು ಗೆದ್ದ ಅಥವಾ ಸೋತ ಪಂದ್ಯಗಳ ಸಂಖ್ಯೆಯಿಂದ ವಿಜೇತ ತಂಡವನ್ನು ನಿರ್ಧರಿಸಲಾಗುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:04 pm, Thu, 15 June 23

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!