ವಿಶ್ವಕಪ್ ಮ್ಯಾಚ್​ ಫಿಕ್ಸಿಂಗ್ ತನಿಖೆ ಕೈಬಿಟ್ಟ ಶ್ರೀಲಂಕಾ ಪೊಲೀಸರು.. ಯಾಕೆ?

ಶ್ರೀಲಂಕಾ ಪೊಲೀಸರು 2011ರ ವಿಶ್ವಕಪ್ ಫೈನಲ್ ಪಂದ್ಯದ ಮ್ಯಾಚ್​ ಫಿಕ್ಸಿಂಗ್ ಆರೋಪಕ್ಕೆ ಸಂಬಂಧಪಟ್ಟಂತೆ ನಡೆಸುತ್ತಿದ್ದ ತನಿಖೆಯನ್ನ ಕೈ ಬಿಟ್ಟಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಯನ್ನ ಕೈ ಬಿಡುತ್ತಿರೋದಾಗಿ ಶ್ರೀಲಂಕಾ ಪೊಲೀಸರು ತಿಳಿಸಿದ್ದಾರೆ. ಶ್ರೀಲಂಕಾದ ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಲುತಗಮಗೆ ಈ ಹಿಂದೆ ಮುಂಬೈನ ವಾಂಖೆಡೆಯಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಅಂತಾ ಗಂಭೀರವಾದ ಆರೋಪವನ್ನು ಮಾಡಿದ್ದರು. ಹೀಗಾಗಿ ಶ್ರೀಲಂಕಾ ಸರ್ಕಾರ ಮ್ಯಾಚ್ ಫಿಕ್ಸಿಂಗ್ ಆರೋಪದ ಬಗ್ಗೆ ವಿಚಾರಣೆ ನಡೆಸಲು […]

ವಿಶ್ವಕಪ್ ಮ್ಯಾಚ್​ ಫಿಕ್ಸಿಂಗ್ ತನಿಖೆ ಕೈಬಿಟ್ಟ ಶ್ರೀಲಂಕಾ ಪೊಲೀಸರು.. ಯಾಕೆ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 04, 2020 | 4:00 PM

ಶ್ರೀಲಂಕಾ ಪೊಲೀಸರು 2011ರ ವಿಶ್ವಕಪ್ ಫೈನಲ್ ಪಂದ್ಯದ ಮ್ಯಾಚ್​ ಫಿಕ್ಸಿಂಗ್ ಆರೋಪಕ್ಕೆ ಸಂಬಂಧಪಟ್ಟಂತೆ ನಡೆಸುತ್ತಿದ್ದ ತನಿಖೆಯನ್ನ ಕೈ ಬಿಟ್ಟಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಯನ್ನ ಕೈ ಬಿಡುತ್ತಿರೋದಾಗಿ ಶ್ರೀಲಂಕಾ ಪೊಲೀಸರು ತಿಳಿಸಿದ್ದಾರೆ.

ಶ್ರೀಲಂಕಾದ ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಲುತಗಮಗೆ ಈ ಹಿಂದೆ ಮುಂಬೈನ ವಾಂಖೆಡೆಯಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಅಂತಾ ಗಂಭೀರವಾದ ಆರೋಪವನ್ನು ಮಾಡಿದ್ದರು. ಹೀಗಾಗಿ ಶ್ರೀಲಂಕಾ ಸರ್ಕಾರ ಮ್ಯಾಚ್ ಫಿಕ್ಸಿಂಗ್ ಆರೋಪದ ಬಗ್ಗೆ ವಿಚಾರಣೆ ನಡೆಸಲು ವಿಶೇಷ ತನಿಖಾ ತಂಡವನ್ನ ರಚಿಸಿದ್ದರು.

ತನಿಖೆ ಆರಂಭಿಸಿದ್ದ ಸ್ಪೆಷಲ್​ ತಂಡವು ಅಂದಿನ ಕ್ಯಾಪ್ಟನ್ ಕುಮಾರ್ ಸಂಗಕ್ಕಾರ, ಉಪುಲ್ ತರಂಗ, ಮಹೇಲಾ ಜಯವರ್ಧನೆ ಹಾಗೂ ತಂಡದ ಆಯ್ಕೆ ಸಮಿತಿಯ ಮಾಜಿ ಮುಖ್ಯಸ್ಥ ಅರವಿಂದ್ ಡಿಸಿಲ್ವಾ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಅದರಲ್ಲೂ ಸಂಗಕ್ಕಾರನ 10 ಗಂಟೆಗೂ ಹೆಚ್ಚಿನ ಕಾಲ ವಿಚಾರಣೆ ಮಾಡಲಾಗಿತ್ತು.

ಅದರೆ, ತನಿಖೆ ವೇಳೆ ಮ್ಯಾಚ್ ಫಿಕ್ಸಿಂಗ್ ಆಗಿರುವ ಬಗ್ಗೆ ಯಾವುದೇ ಸಾಕ್ಷಿಗಳು ದೊರೆತಿಲ್ಲ. ಜೊತೆಗೆ ಅಂದಿನ ಆಟಗಾರರು ಮತ್ತು ಅಧಿಕಾರಿಗಳು ನೀಡಿದ ಉತ್ತರ ತೃಪ್ತಿ ತಂದಿರೋದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ತನಿಖೆಯನ್ನ ಕೈಬಿಟ್ಟಿದ್ದೇವೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ