AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂರ್ಯ ನನಗೆ ಬಿಟ್ಟು ಬಿಡದೆ ಮೆಸೇಜ್ ಮಾಡ್ತಿದ್ದ’; ಬಾಲಿವುಡ್​ ನಟಿಯ ಅಚ್ಚರಿಯ ಹೇಳಿಕೆ

Khushi Mukherjee's Shocking Claim: ನಟಿ ಖುಷಿ ಮುಖರ್ಜಿ ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕ ಕ್ರಿಕೆಟಿಗರು ನನಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆದರೆ ತಾನು ಯಾರೊಂದಿಗೂ ಡೇಟಿಂಗ್ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದು, ಅವರ ಈ ಮಾತುಗಳು ವೈರಲ್ ಆಗಿವೆ. ಸೂರ್ಯಕುಮಾರ್ ಯಾದವ್ ಈಗ ಟಿ20 ವಿಶ್ವಕಪ್‌ಗೆ ಸಜ್ಜಾಗುತ್ತಿದ್ದಾರೆ.

‘ಸೂರ್ಯ ನನಗೆ ಬಿಟ್ಟು ಬಿಡದೆ ಮೆಸೇಜ್ ಮಾಡ್ತಿದ್ದ’; ಬಾಲಿವುಡ್​ ನಟಿಯ ಅಚ್ಚರಿಯ ಹೇಳಿಕೆ
Suryakumar
ಪೃಥ್ವಿಶಂಕರ
|

Updated on:Dec 30, 2025 | 6:54 PM

Share

ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡು ಮುಂಬರುವ ಟಿ20 ವಿಶ್ವಕಪ್​ನಲ್ಲಿ (T20 World Cup) ಟೀಂ ಇಂಡಿಯಾವನ್ನು ಮುನ್ನಡೆಸಲಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಬಗ್ಗೆ ನಟಿ ಮತ್ತು ರೂಪದರ್ಶಿ ಖುಷಿ ಮುಖರ್ಜಿ (Khushi Mukherjee) ಶಾಕಿಂಗ್ ಹೇಳಿಕೆಯನ್ನು ನೀಡಿ ಸಂಚಲನ ಸೃಷ್ಟಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಖುಷಿ ಮುಖರ್ಜಿ, ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕ ಕ್ರಿಕೆಟಿಗರು ನನಗೆ ಆಗಾಗ್ಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು. ಹಾಗೆಯೇ ಈಗಲೂ ಅನೇಕ ಕ್ರಿಕೆಟಿಗರು ತನ್ನನ್ನು ಫಾಲೋ ಮಾಡುತ್ತಿದ್ದಾರೆ. ಆದರೆ ನಾನು ಯಾವುದೇ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಲು ಬಯಸುವುದಿಲ್ಲ ಎಂದಿದ್ದಾರೆ.

ನನಗೆ ಮೆಸೇಜ್​ಗಳನ್ನು ಕಳುಹಿಸುತ್ತಿದ್ದರು

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಖುಷಿ ಮುಖರ್ಜಿ, ‘ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವಾರು ಕ್ರಿಕೆಟಿಗರು ತಮ್ಮನ್ನು ಫಾಲೋ ಮಾಡುತ್ತಿದ್ದಾರೆ. ಟಿ20 ತಂಡದ ನಾಯಕ ಸೂರ್ಯಕುಮಾರ್ ನನಗೆ ಬಹಳಷ್ಟು ಮೆಸೇಜ್​ಗಳನ್ನು ಕಳುಹಿಸುತ್ತಿದ್ದರು. ಆದರೆ ಈಗ ಅವರು ಹೆಚ್ಚು ಸಂವಹನ ನಡೆಸುತ್ತಿಲ್ಲ. ಹಾಗೆಯೇ ನಾನು ಯಾರೊಂದಿಗೂ ರಿಲೇಷನ್​ಶಿಪ್​ನಲ್ಲಿ ಇರಲು ಬಯಸುವುದಿಲ್ಲ ಮತ್ತು ಯಾವುದೇ ಲಿಂಕ್-ಅಪ್ ವದಂತಿಗಳನ್ನು ಇಷ್ಟಪಡುವುದಿಲ್ಲ ಎಂದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ, ನಟಿ ಖುಷಿ ಮುಖರ್ಜಿ ಸೂರ್ಯಕುಮಾರ್ ಯಾದವ್ ಬಗ್ಗೆ ಹೀಗೆ ಹೇಳಿದ್ದಾರೆ, ‘ಅನೇಕ ಕ್ರಿಕೆಟಿಗರು ನನ್ನ ಫಾಲೋ ಮಾಡುತ್ತಿದ್ದಾರೆ. ಸೂರ್ಯಕುಮಾರ್ ನನಗೆ ತುಂಬಾ ಸಂದೇಶ ಕಳುಹಿಸುತ್ತಿದ್ದರು. ಈಗ ನಾವು ಹೆಚ್ಚು ಮಾತನಾಡುವುದಿಲ್ಲ. ನಾನು ಯಾರೊಂದಿಗೂ ರಿಲೇಷನ್​ಶಿಪ್​ನಲ್ಲಿ ಇರಲು ಬಯಸುವುದಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಖುಷಿ ಮುಖರ್ಜಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 1.5 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ. ಆದರೆ ಅವರು ಮಾತ್ರ ಯಾರನ್ನೂ ಫಾಲೋ ಮಾಡುತ್ತಿಲ್ಲ.

ಟಿ20 ವಿಶ್ವಕಪ್ ತಯಾರಿಯಲ್ಲಿ ಸೂರ್ಯ

ಖುಷಿ ಮುಖರ್ಜಿ ಅವರ ಈ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆಯಾದರೂ ಈ ಬಗ್ಗೆ ಸೂರ್ಯಕುಮಾರ್ ಯಾದವ್ ಯಾವುದೇ ಸ್ಪಷ್ಟನೇ ನೀಡಿಲ್ಲ. ಪ್ರಸ್ತುತ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯಕುಮಾರ್ ಯಾದವ್, ತಮ್ಮ ಹಳೆಯ ಲಯವನ್ನು ಕಂಡುಕೊಳ್ಳುವುದರ ಜೊತೆಗೆ ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್​ ಪಟ್ಟದತ್ತ ಕೊಂಡೊಯ್ಯಬೇಕಿದೆ. ಹೀಗಾಗಿ ಹೊಸ ವರ್ಷದ ಆರಂಭದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್‌ಗೆ ಮುನ್ನ ತಯಾರಿ ನಡೆಸಲು ಇದು ಟೀಂ ಇಂಡಿಯಾಕ್ಕೆ ಕೊನೆಯ ಅವಕಾಶವಾಗಿದೆ. ಇದರ ನಂತರ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಫೆಬ್ರವರಿಯಲ್ಲಿ ಟಿ20 ವಿಶ್ವಕಪ್ ಆಡಲಿದೆ. ಐಸಿಸಿ ಟೂರ್ನಮೆಂಟ್‌ನಲ್ಲಿ ಸೂರ್ಯ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವುದು ಇದೇ ಮೊದಲು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Tue, 30 December 25

PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ
PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ
ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು
ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?