T20 World Cup 2022: ಟೀಮ್ ಇಂಡಿಯಾಗೆ ಬಿಗ್ ಶಾಕ್: ಮತ್ತೋರ್ವ ಆಟಗಾರ ಗಾಯಾಳು..!

| Updated By: ಝಾಹಿರ್ ಯೂಸುಫ್

Updated on: Oct 05, 2022 | 10:00 AM

T20 World Cup 2022: 3ನೇ ಟಿ20 ಪಂದ್ಯದಲ್ಲಿ ಉಮೇಶ್ ಯಾದವ್ ಕಣಕ್ಕಿಳಿದಿದ್ದರು. ಹಾಗೆಯೇ ಕೆಎಲ್ ರಾಹುಲ್ ಬದಲು ಮೊಹಮ್ಮದ್ ಸಿರಾಜ್ ಹಾಗೂ ವಿರಾಟ್ ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಕಣಕ್ಕಿಳಿದಿದ್ದರು. 

T20 World Cup 2022: ಟೀಮ್ ಇಂಡಿಯಾಗೆ ಬಿಗ್ ಶಾಕ್: ಮತ್ತೋರ್ವ ಆಟಗಾರ ಗಾಯಾಳು..!
Team India
Follow us on

T20 World Cup 2022: ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಇದೀಗ ಟೀಮ್ ಇಂಡಿಯಾಗೆ (Team India) ಗಾಯದ ಸಮಸ್ಯೆ ಎದುರಾಗಿದೆ. ಈಗಾಗಲೇ ಗಾಯದ ಕಾರಣ ರವೀಂದ್ರ ಜಡೇಜಾ ಹಾಗೂ ಜಸ್​ಪ್ರೀತ್ ಬುಮ್ರಾ ತಂಡದಿಂದ ಹೊರಗುಳಿದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಆಟಗಾರ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಸೌತ್ ಆಫ್ರಿಕಾ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಕಾಣಿಸಿಕೊಂಡಿರಲಿಲ್ಲ.

ಅರ್ಷದೀಪ್ ಸಿಂಗ್ ತಂಡದಿಂದ ಹೊರಗುಳಿಯಲು ಮುಖ್ಯ ಕಾರಣ ಬೆನ್ನು ನೋವಿನ ಸಮಸ್ಯೆ. ಹೀಗಾಗಿ ಕೊನೆಯ ಟಿ20 ಪಂದ್ಯದಲ್ಲಿ ಆಡಿರಲಿಲ್ಲ. ಈಗಾಗಲೇ ಬೆನ್ನು ನೋವಿನ ಕಾರಣ ಜಸ್​ಪ್ರೀತ್ ಬುಮ್ರಾ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಅರ್ಷದೀಪ್ ಸಿಂಗ್ ಕೂಡ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

ಏಕೆಂದರೆ ಜಸ್​ಪ್ರೀತ್ ಬುಮ್ರಾ ಅವರ ಬದಲಿ ಆಟಗಾರನನ್ನು ಇನ್ನೂ ಕೂಡ ಟೀಮ್ ಇಂಡಿಯಾ ಆಯ್ಕೆ ಮಾಡಿಲ್ಲ. ಇದೀಗ ಅರ್ಷದೀಪ್ ಸಿಂಗ್ ಕೂಡ ಟಿ20 ವಿಶ್ವಕಪ್​ನಿಂದ ಹೊರಗುಳಿದರೆ ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗುವುದರಲ್ಲಿ ಅನುಮಾನವೇ ಇಲ್ಲ.

ಇದನ್ನೂ ಓದಿ
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾಗ್ಯೂ ಅರ್ಷದೀಪ್ ಸಿಂಗ್ ಅವರ ಬೆನ್ನು ನೋವಿನ ಸಮಸ್ಯೆ ಗಂಭೀರವಲ್ಲ. ಆದರೆ ಮುನ್ನೆಚ್ಚರಿಕೆಯಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ. ಆದರೆ ಟಿ20 ವಿಶ್ವಕಪ್​ಗೆ ದಿನಗಳು ಮಾತ್ರ ಉಳಿದಿರುವಾಗ ಆಟಗಾರರು ಗಾಯದ ಸಮಸ್ಯೆಗೆ ಒಳಗಾಗುತ್ತಿರುವುದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ ಚಿಂತೆಯನ್ನು ಇಮ್ಮಡಿಗೊಳಿಸಿದೆ.

ಇನ್ನು ಅರ್ಷದೀಪ್ ಸಿಂಗ್ ಬದಲಿಗೆ 3ನೇ ಟಿ20 ಪಂದ್ಯದಲ್ಲಿ ಉಮೇಶ್ ಯಾದವ್ ಕಣಕ್ಕಿಳಿದಿದ್ದರು. ಹಾಗೆಯೇ ಕೆಎಲ್ ರಾಹುಲ್ ಬದಲು ಮೊಹಮ್ಮದ್ ಸಿರಾಜ್ ಹಾಗೂ ವಿರಾಟ್ ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಕಣಕ್ಕಿಳಿದಿದ್ದರು.

ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೀಗಿದೆ:

 ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್,  ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್