ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೇಬಲ್ ಟೆನ್ನಿಸ್ ಆಟಗಾರ ಶರತ್ ಕಮಲ್ ಅಚಂತ್‌ ಆಯ್ಕೆ, ನವೆಂಬರ್ 30ರಂದು ಪ್ರಶಸ್ತಿ ಪ್ರದಾನ

| Updated By: ರಶ್ಮಿ ಕಲ್ಲಕಟ್ಟ

Updated on: Nov 14, 2022 | 9:21 PM

ಶಟ್ಲರ್‌ಗಳಾದ ಲಕ್ಷ್ಯ ಸೇನ್, ಎಚ್‌ಎಸ್ ಪ್ರಣಯ್, ಮಹಿಳಾ ಬಾಕ್ಸರ್ ನಿಖತ್ ಜರೀನ್, ಅಥ್ಲೀಟ್‌ಗಳಾದ ಎಲ್ದೋಸ್ ಪಾಲ್, ಅವಿನಾಶ್ ಸೇಬಲ್ ಸೇರಿದಂತೆ ಒಟ್ಟು 25 ಕ್ರೀಡಾಪಟುಗಳು ಈ ವರ್ಷ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ

ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೇಬಲ್ ಟೆನ್ನಿಸ್ ಆಟಗಾರ ಶರತ್ ಕಮಲ್ ಅಚಂತ್‌ ಆಯ್ಕೆ, ನವೆಂಬರ್ 30ರಂದು ಪ್ರಶಸ್ತಿ ಪ್ರದಾನ
Follow us on

ಟೇಬಲ್ ಟೆನಿಸ್ ಆಟಗಾರ ಅಚಂತ ಶರತ್ ಕಮಲ್(Achanta Sharath Kamal) ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ (Major Dhyan Chand Khel Ratna Award)ಆಯ್ಕೆಯಾಗಿದ್ದು, ನವೆಂಬರ್ 30 ರಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಬಾರಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾದ ಏಕೈಕ ಆಟಗಾರರಾಗಿದ್ದಾರೆ ಶರತ್. ಶಟ್ಲರ್‌ಗಳಾದ ಲಕ್ಷ್ಯ ಸೇನ್, ಎಚ್‌ಎಸ್ ಪ್ರಣಯ್, ಮಹಿಳಾ ಬಾಕ್ಸರ್ ನಿಖತ್ ಜರೀನ್, ಅಥ್ಲೀಟ್‌ಗಳಾದ ಎಲ್ದೋಸ್ ಪಾಲ್, ಅವಿನಾಶ್ ಸೇಬಲ್ ಸೇರಿದಂತೆ ಒಟ್ಟು 25 ಕ್ರೀಡಾಪಟುಗಳು ಈ ವರ್ಷ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.ಈ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಮಲ್ ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದರು. ಈ ವರ್ಷದ ಅರ್ಜುನ ಪ್ರಶಸ್ತಿ ವಿಜೇತರಲ್ಲಿ ಸೀಮಾ ಪುನಿಯಾ ಮತ್ತು ಲಕ್ಷ್ಯ ಸೇನ್ ಸೇರಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೇನ್ ಚಿನ್ನ ಗೆದ್ದಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾದ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಜಿವಾನ್‌ಜೋತ್ ಸಿಂಗ್ ತೇಜಾ (ಆರ್ಚರಿ), ಮೊಹಮ್ಮದ್ ಅಲಿ ಕಮರ್ (ಬಾಕ್ಸಿಂಗ್), ಸುಮಾ ಸಿದ್ಧಾರ್ಥ್ ಶಿರೂರ್ (ಪ್ಯಾರಾ ಶೂಟಿಂಗ್) ಮತ್ತು ಸುಜೀತ್ ಮಾನ್ (ಕುಸ್ತಿ) ಸಾಮಾನ್ಯ ವಿಭಾಗದಲ್ಲಿ ದ್ರೋಣಾಚಾರ್ಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ದಿನೇಶ್ ಜವಾಹರ್ ಲಾಡ್ (ಕ್ರಿಕೆಟ್), ಬಿಮಲ್ ಪ್ರಫುಲ್ಲ ಘೋಷ್ (ಫುಟ್‌ಬಾಲ್) ಮತ್ತು ರಾಜ್ ಸಿಂಗ್ ಜೀವಮಾನ ವಿಭಾಗದಲ್ಲಿ ಮನ್ನಣೆ ಪಡೆಯಲಿದ್ದಾರೆ.

ಅಶ್ವಿನಿ ಅಕ್ಕುಂಜಿ ಸಿ (ಅಥ್ಲೆಟಿಕ್ಸ್), ಧರಂವೀರ್ ಸಿಂಗ್ (ಹಾಕಿ), ಬಿ ಸಿ ಸುರೇಶ್ (ಕಬಡ್ಡಿ) ಮತ್ತು ನಿರ್ ಬಹದ್ದೂರ್ ಗುರುಂಗ್ (ಪ್ಯಾರಾ ಅಥ್ಲೆಟಿಕ್ಸ್) ಕ್ರೀಡೆ ಮತ್ತು ಆಟಗಳಲ್ಲಿ ಜೀವಮಾನದ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿಯನ್ನು ಪಡೆಯಲಿದ್ದಾರೆ

ಉದಯೋನ್ಮುಖ ಮತ್ತು ಯುವ ಪ್ರತಿಭೆಗಳನ್ನು ಗುರುತಿಸಲು ಮತ್ತು ಪೋಷಿಸಿದ್ದಕ್ಕಾಗಿ TransStadia Enterprises Private Limitedಗೆ ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ್ ಸಿಗಲಿದೆ. ಕಳಿಂಗಾ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ ಮತ್ತು ಲಡಾಖ್ ಸ್ಕೀ ಮತ್ತು ಸ್ನೋಬೋರ್ಡ್ ಅಸೋಸಿಯೇಷನ್ ಅನ್ನು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯ ಮೂಲಕ ಕ್ರೀಡೆಗಳಿಗೆ ಪ್ರೋತ್ಸಾಹಕ್ಕಾಗಿ ನಾಮನಿರ್ದೇಶನ ಮಾಡಲಾಗಿದೆ.

ಅರ್ಜುನ ಪ್ರಶಸ್ತಿ ಪಡೆದವರು

ಸೀಮಾ ಪುನಿಯಾ (ಅಥ್ಲೆಟಿಕ್ಸ್), ಎಲ್ದೋಸ್ ಪಾಲ್ (ಅಥ್ಲೆಟಿಕ್ಸ್), ಅವಿನಾಶ್ ಮುಕುಂದ್ ಸೇಬಲ್ (ಅಥ್ಲೆಟಿಕ್ಸ್), ಲಕ್ಷ್ಯ ಸೇನ್ (ಬ್ಯಾಡ್ಮಿಂಟನ್), ಎಚ್ಎಸ್ ಪ್ರಣಯ್ (ಬ್ಯಾಡ್ಮಿಂಟನ್), ಅಮಿತ್ (ಬಾಕ್ಸಿಂಗ್), ನಿಖತ್ ಜರೀನ್ (ಬಾಕ್ಸಿಂಗ್), ಭಕ್ತಿ ಪ್ರದೀಪ್ ಕುಲಕರ್ಣಿ (ಚೆಸ್), ಆರ್. ಪ್ರಗ್ನಾನಂದಾ (ಚೆಸ್), ಡೀಪ್ ಗ್ರೇಸ್ ಎಕ್ಕಾ (ಹಾಕಿ), ಶುಶೀಲಾ ದೇವಿ (ಜೂಡೋ), ಸಾಕ್ಷಿ ಕುಮಾರಿ (ಕಬಡ್ಡಿ), ನಯನ್ ಮೋನಿ ಸೈಕಿಯಾ (ಲಾನ್ ಬೌಲ್), ಸಾಗರ್ ಕೈಲಾಸ್ ಓವಲ್ಕರ್ (ಮಲ್ಲಖಾಂಬ್), ಎಲವೆನಿಲ್ ವಲರಿವನ್ (ಶೂಟಿಂಗ್), ಓಂಪ್ರಕಾಶ್ ಮಿಥರ್ವಾಲ್ (ಶೂಟಿಂಗ್) , ಶ್ರೀಜಾ ಅಕುಲಾ (ಟೇಬಲ್ ಟೆನಿಸ್), ವಿಕಾಸ್ ಠಾಕೂರ್ (ವೇಟ್‌ಲಿಫ್ಟಿಂಗ್), ಅಂಶು (ಕುಸ್ತಿ), ಸರಿತಾ (ಕುಸ್ತಿ), ಪರ್ವೀನ್ (ವುಶು), ಮಾನಸಿ ಗಿರೀಶ್ಚಂದ್ರ ಜೋಶಿ (ಪ್ಯಾರಾ ಬ್ಯಾಡ್ಮಿಂಟನ್), ತರುಣ್ ಧಿಲ್ಲೋನ್ (ಪ್ಯಾರಾ ಬ್ಯಾಡ್ಮಿಂಟನ್), ಸ್ವಪ್ನಿಲ್ ಸಂಜಯ್ ಪಾಟೀಲ್ (ಪ್ಯಾರಾ ಸ್ವಿಮ್ಮಿಂಗ್), ಜೆರ್ಲಿನ್ ಅನಿಕಾ ಜೆ (ಡೆಫ್ ಬ್ಯಾಡ್ಮಿಂಟನ್).

 ದ್ರೋಣಾಚಾರ್ಯ ಪ್ರಶಸ್ತಿ

ಜೀವನ್ಜೋತ್ ಸಿಂಗ್ ತೇಜಾ (ಆರ್ಚರಿ), ಮೊಹಮ್ಮದ್ ಅಲಿ ಕಮರ್ (ಬಾಕ್ಸಿಂಗ್), ಸುಮಾ ಸಿದ್ಧಾರ್ಥ್ ಶಿರೂರ್ (ಪ್ಯಾರಾ ಶೂಟಿಂಗ್), ಸುಜೀತ್ ಮಾನ್ (ಕುಸ್ತಿ).

ಜೀವಮಾನ ಪ್ರಶಸ್ತಿ

ದಿನೇಶ್ ಜವಾಹರ್ ಲಾಡ್ (ಕ್ರಿಕೆಟ್), ಬಿಮಲ್ ಪ್ರಫುಲ್ಲ ಘೋಷ್ (ಫುಟ್‌ಬಾಲ್), ರಾಜ್ ಸಿಂಗ್ (ಕುಸ್ತಿ).

ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿ 2022

ಅಶ್ವಿನಿ ಅಕ್ಕುಂಜಿ ಸಿ (ಅಥ್ಲೆಟಿಕ್ಸ್), ಧರಂವೀರ್ ಸಿಂಗ್ (ಹಾಕಿ), ಬಿ ಸಿ ಸುರೇಶ್ (ಕಬಡ್ಡಿ), ನಿರ್ ಬಹದ್ದೂರ್ ಗುರುಂಗ್ (ಪ್ಯಾರಾ ಅಥ್ಲೆಟಿಕ್ಸ್).

ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ್ 2022

ಟ್ರಾನ್ಸ್‌ಸ್ಟಡಿಯಾ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್, ಕಳಿಂಗ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ, ಲಡಾಖ್ ಸ್ಕೀ & ಸ್ನೋಬೋರ್ಡ್ ಅಸೋಸಿಯೇಷನ್.

ಮೌಲಾನಾ ಅಬುಲ್ ಕಲಾಂ ಆಜಾದ್ (MAKA) ಟ್ರೋಫಿ 2022

ಗುರು ನಾನಕ್ ದೇವ್ ವಿಶ್ವವಿದ್ಯಾಲಯ, ಅಮೃತಸರ.

Published On - 8:12 pm, Mon, 14 November 22