AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games: ಶಾಟ್ ಪುಟ್​ನಲ್ಲಿ ಸ್ವರ್ಣ ಪದಕ ಗೆದ್ದ ತೇಜಿಂದರ್‌ಪಾಲ್ ಸಿಂಗ್

Asian Games: ಏಷ್ಯನ್ ಗೇಮ್ಸ್​ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 13 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

Asian Games: ಶಾಟ್ ಪುಟ್​ನಲ್ಲಿ ಸ್ವರ್ಣ ಪದಕ ಗೆದ್ದ ತೇಜಿಂದರ್‌ಪಾಲ್ ಸಿಂಗ್
Tajinderpal Singh Toor
TV9 Web
| Edited By: |

Updated on:Oct 01, 2023 | 8:01 PM

Share

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಶಾಟ್‌ ಪುಟ್‌ ಸ್ಪರ್ಧೆಯಲ್ಲಿ ಭಾರತದ ತೇಜಿಂದರ್‌ಪಾಲ್ ಸಿಂಗ್ ತೂರ್ ಚಿನ್ನದ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪದಕ ಪಟ್ಟಿಯಲ್ಲಿ ಭಾರತದ ಸ್ವರ್ಣದ ಪದಕದ ಸಂಖ್ಯೆ 13 ಕ್ಕೇರಿದೆ. ಈ ಪಂದ್ಯದಲ್ಲಿ ತೇಜಿಂದರ್ ಆರಂಭದಲ್ಲಿ ಹಿನ್ನಡೆ ಅನುಭವಿಸಿದರೂ ಆ ಬಳಿಕ ಕಂಬ್ಯಾಕ್ ಮಾಡಿ ಚಿನ್ನದ ಪದಕ ಗೆದ್ದಿದ್ದು ವಿಶೇಷ. ಬರೋಬ್ಬರಿ 20.36 ಮೀಟರ್ ದೂರಕ್ಕೆ ಎಸೆಯುವ ಮೂಲಕ ತೇಜಿಂದರ್‌ಪಾಲ್ ಸಿಂಗ್ ತೂರ್ ಚಿನ್ನದ ಪದಕಕ್ಕೆ ಕೊರೊಳೊಡ್ಡಿದರು.

ಮತ್ತೊಂದೆಡೆ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಅಥ್ಲೆಟಿಕ್ಸ್‌ನಲ್ಲಿ ಅವಿನಾಶ್ ಸಬ್ಲೆ ಭಾರತಕ್ಕೆ ಚಿನ್ನದ ಪದಕ ಗೆದ್ದರು. ಈ ಪದಕವು ಐತಿಹಾಸಿಕ ಎಂಬುದು ವಿಶೇಷ. ಏಕೆಂದರೆ ಭಾರತವು ಈ ಹಿಂದೆ ಏಷ್ಯನ್ ಗೇಮ್ಸ್‌ನಲ್ಲಿ ಈ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದಿರಲಿಲ್ಲ. ಈ ಬಾರಿ ಅವಿನಾಶ್ 8:19:53 ನಿಮಿಷಗಳಲ್ಲಿ ಓಟ ಪೂರ್ಣಗೊಳಿಸಿ ಪ್ರಥಮ ಸ್ಥಾನ ಪಡೆದರು.

ನಾಲ್ಕನೇ ಸ್ಥಾನದಲ್ಲಿ ಭಾರತ:

ಪ್ರಸ್ತುತ ಏಷ್ಯನ್ ಗೇಮ್ಸ್​ ಪದಕ ಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಇದುವರೆಗೆ 13 ಚಿನ್ನದ ಪದಕಗಳನ್ನು ಹಾಗೂ 16 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಒಟ್ಟು 44 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಇದನ್ನೂ ಓದಿ: ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಇನ್ನು 120 ಚಿನ್ನ, 71 ಬೆಳ್ಳಿ, 37 ಕಂಚಿನ ಪದಕಗಳೊಂದಿಗೆ ಒಟ್ಟು 228 ಪದಕಗಳನ್ನು ಗೆದ್ದಿರುವ ಆತಿಥೇಯ ಚೀನಾ (ಗಣತಂತ್ರ) ದೇಶವು ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

Published On - 7:08 pm, Sun, 1 October 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್