
ನಾಳೆಯಿಂದ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿರುವ ಮೊದಲ ಟೆಸ್ಟ್ಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟ ಮಾಡಿದೆ. ಕನ್ನಡಿಗ ಕೆಎಲ್ ರಾಹುಲ್ ಅವರನ್ನು ತಂಡದಿಂದ ಹೊರಗಿಡಲಾಗಿದೆ.
ವಿರಾಟ್ ಕೊಹ್ಲಿ ಮೊದಲ ಟೆಸ್ಟ್ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಚೇತೇಶ್ವರ ಪೂಜಾರಾ, ಹನುಮ ವಿಹಾರಿ, ವೃದ್ಧಿಮಾನ್ ಸಾಹಾ, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹ್ಮದ್ ಶಮಿ ಹಾಗೂ ಜಸ್ಪ್ರೀತ್ ಬೂಮ್ರಾ ಪ್ಲೇಯಿಂಗ್ 11 ನಲ್ಲಿದ್ದಾರೆ.
ಇನಅಇದ
ಶುಭ್ ಮನ್ ಗಿಲ್, ಕೆ.ಎಲ್. ರಾಹುಲ್, ಕುಲದೀಪ್ ಯಾದವ್, ರಿಷಭ್ ಪಂತ್, ನವದೀಪ್ ಸೈನಿ, ಮೊಹ್ಮದ್ ಸಿರಾಜ್, ರವೀಂದ್ರ ಜಡೇಜಾ ಬೆಂಚ್ನಲ್ಲಿರುವ ಆಟಗಾರರಾಗಿದ್ದಾರೆ.
ಕನ್ನಡಿಗ ಕೆಎಲ್ ರಾಹುಲ್ ಮೊದಲ ಟೆಸ್ಟ್ನಲ್ಲಿ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಕೂಡ ಇದೆ. ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಕೆಲ್ ರಾಹುಲ್ ಆಡಿದ್ದಾರೆ. ಹೀಗಾಗಿ ಅವರಿಗೆ ಕೊಂಚ ವಿಶ್ರಾಂತಿಯ ಅಗತ್ಯತೆ ಇದೆ. ಅಲ್ಲದೆ, ಎರಡನೇ ಟೆಸ್ಟ್ನಿಂದ ವಿರಾಟ್ ಕೊಹ್ಲಿ ಅಲಭ್ಯರಾಗಲಿದ್ದಾರೆ. ಈ ಕಾರಣಕ್ಕೆ ಮೊದಲ ಟೆಸ್ಟ್ನಲ್ಲಿ ವಿಶ್ರಾಂತಿ ಕೊಡಲು ನಿರ್ಧರಿಸಲಾಗಿದೆ.
ಮೊದಲ ಟೆಸ್ಟ್ಗೆ ಮಾತ್ರ ವಿರಾಟ್ ಕೊಹ್ಲಿ ಆಡಲಿದ್ದಾರೆ. ಎರಡನೇ ಟೆಸ್ಟ್ ನಾಯಕತ್ವವನ್ನು ಅಜಿಂಕ್ಯ ರಹಾನೆ ವಹಿಸಿಕೊಳ್ಳಲಿದ್ದಾರೆ. ಈಗಾಗಲೇ ರೋಹಿತ್ ಶರ್ಮಾ ಫಿಟ್ ಎಂದು ಘೋಷಣೆ ಆಗಿದ್ದು, ಮೂರನೇ ಟೆಸ್ಟ್ಗೆ ಅವರು ಮರಳುವ ಸಾಧ್ಯತೆ ಇದೆ. ಏಕದಿನ ಸರಣಿ ಆಸ್ಟ್ರೇಲಿಯಾ ಪಾಲಾದರೆ, ಟಿ-20 ಕಪ್ಅನ್ನು ಭಾರತ ಎತ್ತಿದೆ.
Published On - 2:38 pm, Wed, 16 December 20