AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದರೂ ಅಮೆರಿಕ ವಿರುದ್ಧ ಹೀನಾಯ ದಾಖಲೆ ಬರೆದ ಟೀಮ್ ಇಂಡಿಯಾ

India vs United States of America: ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 161 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 132 ರನ್​ಗಳಿಸಿ 29 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Feb 08, 2026 | 7:55 AM

Share
T20 World Cup 2026: ಟಿ೨೦ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ (Team India) ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 29 ರನ್ ಗಳ ಭರ್ಜರಿ ಜಯ ಸಾಧಿಸಿದೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಅಮೆರಿಕ ತಂಡದ ನಾಯಕ ಮೊನಾಂಕ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪವರ್ ಪ್ಲೇನಲ್ಲಿ ಕಲೆಹಾಕಿದ್ದು ಕೇವಲ 46 ರನ್ ಗಳು ಮಾತ್ರ.

2 / 6
ಅಂದರೆ ಮೊದಲ 6 ಓವರ್‌ಗಳಲ್ಲಿ ಟೀಮ್ ಇಂಡಿಯಾ ಬ್ಯಾಟರ್ ಗಳು ರನ್ ಗಳಿಸಲು ಪರದಾಡಿದ್ದರು. ಈ ಮೂಲಕ ಇದೇ ಮೊದಲ ಬಾರಿಗೆ ತವರಿನಲ್ಲಿ ಐಸಿಸಿ ಪೂರ್ಣ ಸದಸ್ಯವಲ್ಲದ ರಾಷ್ಟ್ರದ ವಿರುದ್ಧ ಟೀಮ್ ಇಂಡಿಯಾ ಪವರ್ ಪ್ಲೇನಲ್ಲಿ ಅತೀ ಕಡಿಮೆ ರನ್ ಕಲೆಹಾಕಿದೆ. ಅದರಲ್ಲೂ 50 ಕ್ಕಿಂತ ಕಡಿಮೆ ರನ್ ಗಳಿಸಿದ್ದು ಇದೇ ಮೊದಲ ಬಾರಿಗೆ ಎಂಬುದೇ ಅಚ್ಚರಿ.

3 / 6
ಅಷ್ಟೇ ಅಲ್ಲದೇ, ಅಸೋಸಿಯೇಟ್ ನೇಷನ್ ವಿರುದ್ಧ ಪವರ್ ಪ್ಲೇನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಬ್ಯಾಟರ್ ಗಳು 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದಾರೆ. ಅಂದರೆ ಎಲ್ಲಾ ಅರ್ಥದಲ್ಲೂ ಅಮೆರಿಕ ಬೌಲರ್‌ಗಳು ಪವರ್ ಪ್ಲೇನಲ್ಲಿ ಟೀಮ್ ಇಂಡಿಯಾವನ್ನು ಇಕ್ಕಟಿಗೆ ಸಿಲುಕಿಸಿತ್ತು ಎಂದರೆ ತಪ್ಪಾಗಲಾರದು.

4 / 6
ಇದಾಗ್ಯೂ ಸೂರ್ಯಕುಮಾರ್ ಯಾದವ್ ಅವರ ಅಜೇಯ 84 ರನ್​ಗಳ ನೆರವಿನೊಂದಿಗೆ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 161 ರನ್​ಗಳಿಸಿತು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 132 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 29 ರನ್​ಗಳ ಜಯ ಸಾಧಿಸಿದೆ.

5 / 6
ಒಟ್ಟಿನಲ್ಲಿ ಟಿ೨೦ ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಭರ್ಜರಿ ಜಯದ ನಿರೀಕ್ಷೆಯಲ್ಲಿದ್ದ ಟೀಮ್ ಇಂಡಿಯಾ ಹೀನಾಯ ದಾಖಲೆಯೊಂದಿಗೆ ಶುಭಾರಂಭ ಮಾಡಿದೆ. ಈ ತಪ್ಪು ಸರಿಪಡಿಸಿ ಮುಂದಿನ ಪಂದ್ಯದಲ್ಲಿ ಭಾರತೀಯ ಬ್ಯಾಟರ್ ಗಳು ಅಬ್ಬರಿಸಲಿದ್ದಾರಾ ಕಾದು ನೋಡಬೇಕಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ

ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್

ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ

ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ

ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?

ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ

ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ

ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ