AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ ಪ್ಲೇಯರ್ಸ್ ಡಿಕ್ಕಿ: ಫುಟ್​ಬಾಲ್ ಆಟಗಾರ ಸಾವು!

ಪಂದ್ಯ ಮುಗಿಯಲು ಕೇವಲ ಕೆಲವೇ ನಿಮಿಷಗಳು ಬಾಕಿ ಇದ್ದವು, ಸ್ಕೋರ್ ಬೋರ್ಡ್ 2-2 ಸಮಬಲದಲ್ಲಿತ್ತು. ಅಭಿಮಾನಿಗಳು ರೋಮಾಂಚನದಿಂದ ಪಂದ್ಯ ವೀಕ್ಷಿಸುತ್ತಿದ್ದರು. ಆದರೆ ಮುಂದಿನ 7ನೇ ನಿಮಿಷದಲ್ಲಿ ನಡೆದ ಆ ಒಂದು ಭೀಕರ ಡಿಕ್ಕಿ ಇಡೀ ಕ್ರೀಡಾಂಗಣವನ್ನು ಸ್ಮಶಾನ ಮೌನವಾಗಿಸುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಮೈದಾನದಲ್ಲಿ ಪ್ಲೇಯರ್ಸ್ ಡಿಕ್ಕಿ: ಫುಟ್​ಬಾಲ್ ಆಟಗಾರ ಸಾವು!
Jesus de Miguel
ಝಾಹಿರ್ ಯೂಸುಫ್
|

Updated on: Nov 04, 2026 | 2:31 PM

Share

ಸ್ಪೇನ್‌ನ ಸೆಗುಂಡಾ ಡಿವಿಸನ್ ಫುಟ್‌ಬಾಲ್ ಪಂದ್ಯದ ವೇಳೆ ಸಂಭವಿಸಿದ ಭೀಕರ ಆನ್‌-ಫೀಲ್ಡ್ ಅಪಘಾತಕ್ಕೆ ಸಿಡಿ ಟೆನೆರೈಫ್ ತಂಡದ ಸ್ಟ್ರೈಕರ್ ಜೀಸಸ್ ಡಿ ಮಿಗುಯೆಲ್ (30) ಬಲಿಯಾಗಿದ್ದಾರೆ. ಸೋಮವಾರ ನಡೆದ ಪಂದ್ಯದ ಇಂಜುರಿ ಟೈಮ್‌ನಲ್ಲಿ ಎದುರಾಳಿ ಗೋಲ್‌ಕೀಪರ್ ಎಸಗಿದ ಅಪಾಯಕಾರಿ ಫೌಲ್‌ನಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಡಿ ಮಿಗುಯೆಲ್  ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕ್ಲಬ್ ಅಧಿಕೃತವಾಗಿ ಖಚಿತಪಡಿಸಿದೆ. ಈ ಘಟನೆಯು ಜಾಗತಿಕ ಫುಟ್‌ಬಾಲ್ ವಲಯದಲ್ಲಿ ಆಘಾತ ಮೂಡಿಸಿದ್ದು, ಕ್ರೀಡಾಂಗಣಗಳಲ್ಲಿ ಆಟಗಾರರ ಸುರಕ್ಷತೆಯ ಕುರಿತು ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

ಟೆನೆರೈಫ್‌ನ ತವರು ಮೈದಾನವಾದ ಎಸ್ಟಾಡಿಯೊ ಹೆಲಿಯೊಡೊರೊ ರೊಡ್ರಿಗಸ್ ಲೋಪೆಜ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಸಿಡಿ ಟೆನೆರೈಫ್ ಹಾಗೂ ಎಫ್‌ಸಿ ಅಂಡೋರಾ ತಂಡಗಳು ಮುಖಾಮುಖಿಯಾಗಿದ್ದವು.  ಪಂದ್ಯವು 2–2 ಗೋಲುಗಳ ಸಮಬಲದೊಂದಿಗೆ ಇಂಜುರಿ ಟೈಮ್‌ (90+7ನೇ ನಿಮಿಷ) ತಲುಪಿತ್ತು. ಈ ವೇಳೆ ಚೆಂಡನ್ನು ಬೆನ್ನಟ್ಟುತ್ತಿದ್ದ ಡಿ ಮಿಗುಯೆಲ್ ಅವರಿಗೆ, ಅಂಡೋರಾ ತಂಡದ ಗೋಲ್‌ಕೀಪರ್ ಜೀಸಸ್ ಒವೊನೊ ಡಿಕ್ಕಿ ಹೊಡೆದರು.

ಪೆನಾಲ್ಟಿ ಬಾಕ್ಸ್‌ನಿಂದ ಮುನ್ನುಗ್ಗಿ ಬಂದ ಒವೊನೊ ಅವರ ಮೊಣಕಾಲು ಡಿ ಮಿಗುಯೆಲ್ ಅವರ ಎದೆ ಮತ್ತು ತಲೆಯ ಭಾಗಕ್ಕೆ ಬಲವಾಗಿ ಅಪ್ಪಳಿಸಿತು. ಡಿಕ್ಕಿಯ ತೀವ್ರತೆಗೆ ಡಿ ಮಿಗುಯೆಲ್ ತಕ್ಷಣವೇ ಮೈದಾನದಲ್ಲಿ ಪ್ರಜ್ಞೆ ತಪ್ಪಿ ಬಿದ್ದರು. ರೆಫರಿ ತಕ್ಷಣವೇ ಗೋಲ್‌ಕೀಪರ್ ಒವೊನೊಗೆ ರೆಡ್ ಕಾರ್ಡ್ ತೋರಿಸಿ ಮೈದಾನದಿಂದ ಹೊರಹಾಕಿದರು ಮತ್ತು ಪಂದ್ಯವನ್ನು ಅಲ್ಲಿಗೇ ರದ್ದುಗೊಳಿಸಲಾಯಿತು.

ಆಸ್ಪತ್ರೆಯಲ್ಲಿ ಕೊನೆಯುಸಿರು:

ಮೈದಾನದಲ್ಲೇ ಐದು ನಿಮಿಷಗಳಿಗೂ ಹೆಚ್ಚು ಕಾಲ ತುರ್ತು ಚಿಕಿತ್ಸೆ ನೀಡಿದ ಬಳಿಕ, ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯದಲ್ಲಿ ಅವರಿಗೆ ಕಾರ್ಡಿಯಾಕ್ ಅರೆಸ್ಟ್ (ಹೃದಯ ಸ್ತಂಭನ) ಆಗಿತ್ತು ಎಂದು ವೈದ್ಯಕೀಯ ವರದಿಗಳು ತಿಳಿಸಿವೆ.

ತೀವ್ರ ನಿಗಾ ಘಟಕದಲ್ಲಿ (ICU) ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರ ಮೆದುಳಿನ ಆರೋಗ್ಯ ಸ್ಥಿತಿ ರಾತ್ರೋರಾತ್ರಿ ಕ್ಷೀಣಿಸಿತು. ಮಂಗಳವಾರ ಮುಂಜಾನೆ 8:00 ಗಂಟೆಗೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಟೆನೆರೈಫ್ ಕ್ಲಬ್ ಅಧಿಕೃತವಾಗಿ ಪ್ರಕಟಿಸಿದೆ.

ಜಾಗತಿಕ ಫುಟ್‌ಬಾಲ್ ವಲಯದಿಂದ ಸಂತಾಪ:

ಡಿ ಮಿಗುಯೆಲ್ ಅವರ ಅಕಾಲಿಕ ಮರಣಕ್ಕೆ ಇಡೀ ಕ್ರೀಡಾಲೋಕ ಕಂಬನಿ ಮಿಡಿದಿದೆ.  ಈ ವಾರ ನಡೆಯಲಿರುವ ಎಲ್ಲಾ ಚಾಂಪಿಯನ್ಸ್ ಲೀಗ್ ಮತ್ತು ಯುರೋಪಾ ಲೀಗ್ ಪಂದ್ಯಗಳ ಆರಂಭಕ್ಕೂ ಮುನ್ನ ಡಿ ಮಿಗುಯೆಲ್ ಸ್ಮರಣಾರ್ಥ ಒಂದು ನಿಮಿಷದ ಮೌನಾಚರಣೆ ಇರಲಿದೆ ಎಂದು ಯುಇಎಫ್‌ಎ ಘೋಷಿಸಿದೆ.

ಸಿಡಿ ಟೆನೆರೈಫ್ ಕ್ಲಬ್ 6 ದಿನಗಳ ಅಧಿಕೃತ ಶೋಕಾಚರಣೆ ಪ್ರಕಟಿಸಿದ್ದು, ತನ್ನ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಅಭಿಮಾನಿಗಳು ಕ್ರೀಡಾಂಗಣದ ಹೊರಗೆ ಜಮಾಯಿಸಿ ಮೇಣದಬತ್ತಿ ಬೆಳಗಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಇನ್ನು ರಿಯಲ್ ಮ್ಯಾಡ್ರಿಡ್, ಬಾರ್ಸಿಲೋನಾ ಸೇರಿದಂತೆ ವಿಶ್ವದ ಪ್ರಮುಖ ಕ್ಲಬ್‌ಗಳು ಹಾಗೂ ಲಿಯೋನೆಲ್ ಮೆಸ್ಸಿ ಅವರಂತಹ ಜಾಗತಿಕ ತಾರೆಗಳು ಡಿ ಮಿಗುಯೆಲ್ ಕುಟುಂಬ ಮತ್ತು ಅಭಿಮಾನಿಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ