AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಲು ಬಡಿದು 24 ವರ್ಷದ ಫುಟ್ಬಾಲ್ ಆಟಗಾರ ಸಾವು; ದಾರುಣ ಘಟನೆ ಕ್ಯಾಮರಾದಲ್ಲಿ ಸೆರೆ

football player lightning strike: ಥೈಲ್ಯಾಂಡ್‌ನಲ್ಲಿ ನಡೆದ ಫುಟ್‌ಬಾಲ್ ಪಂದ್ಯದಲ್ಲಿ ಸಿಡಿಲು ಬಡಿದು 24 ವರ್ಷದ ಯುವ ಆಟಗಾರ ಸೋಫ್ವಾನ್ ಅವೆ ಸಾವನ್ನಪ್ಪಿದ್ದಾರೆ. ಈ ಹೃದಯವಿದ್ರಾವಕ ವಿಡಿಯೋ ವೈರಲ್ ಆಗಿದೆ. ಭಾರೀ ಮಳೆಯ ನಡುವೆಯೂ ಪಂದ್ಯ ಮುಂದುವರಿಸಿದ್ದಕ್ಕೆ ಆಯೋಜಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇನ್ನುಳಿದ ಸುಮಾರು ಒಂದು ಡಜನ್ ಆಟಗಾರರು ಗಾಯಗೊಂಡಿದ್ದಾರೆ. ಈ ಘಟನೆ ಪಂದ್ಯದ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಿಡಿಲು ಬಡಿದು 24 ವರ್ಷದ ಫುಟ್ಬಾಲ್ ಆಟಗಾರ ಸಾವು; ದಾರುಣ ಘಟನೆ ಕ್ಯಾಮರಾದಲ್ಲಿ ಸೆರೆ
Thai Footballer
ಪೃಥ್ವಿಶಂಕರ
|

Updated on:Aug 07, 2026 | 3:29 PM

Share

ಸಿಡಿಲು ಬಡಿದು 24 ವರ್ಷದ ಯುವ ಫುಟ್ಬಾಲ್ ಆಟಗಾರ (football player) ಸಾವನ್ನಪ್ಪಿರುವ ದಾರುಣ ಘಟನೆ ಭಾರತದ ನೆರೆಯ ರಾಷ್ಟ್ರ ಥೈಲ್ಯಾಂಡ್​ನಲ್ಲಿ ನಡೆದಿದೆ. ಈ ಅವಘಡದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಿಜಕ್ಕೂ ಹೃದಯವಿದ್ರಾವಕವಾಗಿದೆ. ದಕ್ಷಿಣ ಥೈಲ್ಯಾಂಡ್‌ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಪಂದ್ಯದ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮವಾಗಿ ಯುವ ಫುಟ್ಬಾಲ್ ಆಟಗಾರ ಸೋಫ್ವಾನ್ ಅವೆ ಸಾವನ್ನಪ್ಪಿದ್ದಾರೆ. ಹಾಗೆಯೇ ಈ ಘಟನೆಯಲ್ಲಿ ಸುಮಾರು ಒಂದು ಡಜನ್ ಇತರ ಆಟಗಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸ್ಥಳದಲ್ಲೇ ಸಾವು

ವೈರಲ್ ಆಗಿರುವ ವಿಡಿಯೋದಲ್ಲಿರುವಂತೆ ಭಾರೀ ಮಳೆಯ ನಡುವೆಯೂ ಫುಟ್ಬಾಲ್ ಪಂದ್ಯ ನಡೆಯುತ್ತಿತ್ತು. ಇದೇ ವೇಳೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಿದ್ದರಿಂದ ಮೈದಾನದಲ್ಲಿದ್ದ ಸೋಫ್ವಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈದಾನದಲ್ಲಿದ್ದ ಉಳಿದ ಆಟಗಾರರು ಸಿಡಿಲನ ರಬಸಕ್ಕೆ ನೆಲಕ್ಕುರುಳಿದ್ದಾರೆ. ಕೂಡಲೇ ಅಲ್ಲಿ ನೆರೆದಿದ್ದವರು ಆಟಗಾರರ ಸಹಾಯಕ್ಕೆ ಧಾವಿಸಿದ್ದಾರೆ. ಈ ಅವಘಡದ ವಿಡಿಯೋ ವೈರಲ್ ಆದ ನಂತರ, ಭಾರೀ ಮಳೆಯ ನಡುವೆಯೂ ಆಟವನ್ನು ಮುಂದುವರೆಸಿರುವುದರ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಹತ್ತಿರದ ಆಸ್ಪತ್ರೆಗೆ ರವಾನಿಸಲಾಯಿತು

ಮಳೆ ಬಂದ ಕೂಡಲೇ ಪಂದ್ಯವನ್ನು ನಿಲ್ಲಿಸಿದ್ದರೆ, ಈ ಘಟನೆ ನಡೆಯುತ್ತಿರಲಿಲ್ಲ ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಅಲ್ಲದೆ ಈ ಪಂದ್ಯಾವಳಿಯ ಆಯೋಜಕರ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಮಲೇಷ್ಯಾದ ಸುದ್ದಿ ಸಂಸ್ಥೆ ಬರ್ನಾಮ ಪ್ರಕಾರ, ಅವಘಡದ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಮುಖ್ಯಸ್ಥ ಥುನ್ ಸಿರಿಖುಂಟ್, ‘ತುರ್ತು ವೈದ್ಯಕೀಯ ತಂಡವು ಸೋಫ್ವಾನ್ ಅವರನ್ನು ಉಳಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸಿತು. ಆದರೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರ ಕಾರಣದಿಂದಾಗಿ ಸೋಫ್ವಾನ್ ಸಾವನ್ನಪ್ಪಿದ್ದಾರೆ. ಸಿಡಿಲು ಬಡಿದ ಕೂಡಲೇ ಪ್ರೇಕ್ಷಕರು ಮತ್ತು ಅಲ್ಲಿದ್ದ ಇತರ ಜನರು ಸಫ್ವಾನ್ ಅವರನ್ನು ರಕ್ಷಿಸಲು ಭಯಭೀತರಾಗಿ ಮೈದಾನಕ್ಕೆ ಧಾವಿಸಿದರು. ತಕ್ಷಣವೇ ವೈದ್ಯಕೀಯ ತಂಡ ಕೂಡ ಆಗಮಿಸಿ ಸಫ್ವಾನ್ ಅವರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಯಿತು. ವೈದ್ಯರ ಅತ್ಯುತ್ತಮ ಪ್ರಯತ್ನದ ಹೊರತಾಗಿಯೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Fri, 7 August 26

Follow Us
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ದೇವರಿಗೆ ಹಾಡು ಹಾಡಿ ಪ್ರಾರ್ಥಿಸಿದ ಕಿರಣ್ ಶಾಸ್ತ್ರಿ; ಬೀಳಲಿಲ್ಲ ಹೂವು
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್