ದಿ ಹಂಡ್ರೆಡ್ ಲೀಗ್ಗೆ ಕಾಲಿಟ್ಟ IPLನ ಮೂರು ಫ್ರಾಂಚೈಸಿಗಳು..!
The Hundred 2024: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯ ನಡೆಯಲಿದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್ನಲ್ಲಿ 5 ಎಸೆತಗಳು ಇರಲಿವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂದರೆ ಒಬ್ಬ ಬೌಲರ್ ಸತತ 2 ಓವರ್ ಅಥವಾ 10 ಎಸೆತಗಳನ್ನು ಎಸೆಯಬಹುದು. ಹೀಗೆ ಹಲವು ರೀತಿಯಲ್ಲಿ ವಿಭಿನ್ನವಾಗಿ ಟೂರ್ನಿಗೆ ಇದೀಗ ಐಪಿಎಲ್ ಫ್ರಾಂಚೈಸಿಗಳು ಎಂಟ್ರಿ ಕೊಟ್ಟಿದ್ದಾರೆ.
Updated on: Feb 06, 2025 | 10:23 AM

ಇಂಡಿಯನ್ ಪ್ರೀಮಿಯರ್ ಲೀಗ್ನ (IPL) ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ನಲ್ಲಿ ಐಪಿಎಲ್ನ ಮೂರು ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿದೆ. ಕೆಲ ತಿಂಗಳ ಹಿಂದೆಯಷ್ಟೇ ಇಸಿಬಿ ದಿ ಹಂಡ್ರೆಡ್ ಲೀಗ್ ತಂಡಗಳ ಸ್ಟೇಕ್ ಮಾರಾಟ ಮಾಡುವುದಾಗಿ ತಿಳಿಸಿತ್ತು.

ಅದರಂತೆ ಇದೀಗ ಐಪಿಎಲ್ನ ಮೂರು ಪ್ರಮುಖ ಫ್ರಾಂಚೈಸಿಗಳಾದ ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ದಿ ಹಂಡ್ರೆಡ್ ಲೀಗ್ ತಂಡಗಳ ಮಾಲೀಕತ್ವನ್ನು ಪಡೆದುಕೊಂಡಿದೆ. ಈ ಮೂಲಕ ಇಂಗ್ಲೆಂಡ್ ಕ್ರಿಕೆಟ್ ಲೀಗ್ನತ್ತ ಐಪಿಎಲ್ ಫ್ರಾಂಚೈಸಿಗಳು ಹೊಸ ಹೆಜ್ಜೆಯನ್ನಿಟ್ಟಿದೆ.

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ರಿಲಯನ್ಸ್ ಒಡೆತನದ ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ 100 ಎಸೆತಗಳ ಟೂರ್ನಿಗೆ ಕಾಲಿಟ್ಟಿದೆ.

ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್ನಲ್ಲಿ ತಂಡವನ್ನು ಖರೀದಿಸಿದ್ದು, ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯ ಶೇ.49 ರಷ್ಟು ಪಾಲನ್ನು ತನ್ನದಾಗಿಸಿಕೊಂಡಿದೆ. ಹೀಗಾಗಿ ದಿ ಹಂಡ್ರೆಡ್ ಲೀಗ್ನಲ್ಲೂ ಇನ್ಮುಂದೆ ಸೂಪರ್ ಜೈಂಟ್ಸ್ ಕಾಣಿಸಿಕೊಳ್ಳಲಿದೆ.

ಇದೀಗ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್ನಲ್ಲಿ ತಂಡವನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಯಾರ್ಕ್‌ಷೈರ್ ಒಡೆತನದಲ್ಲಿದ್ದ ನಾರ್ದರ್ನ್ ಸೂಪರ್‌ಚಾರ್ಜರ್ಸ್‌ನ ಸಂಪೂರ್ಣ ಪಾಲನ್ನು ಖರೀದಿಸಲು ಸನ್ ಗ್ರೂಪ್ ಮುಂದಾಗಿದ್ದು, ಹೀಗಾಗಿ ಮುಂಬರುವ ದಿ ಹಂಡ್ರೆಡ್ ಲೀಗ್ನಲ್ಲಿ ನಾರ್ದರ್ನ್ ಸೂಪರ್‌ಚಾರ್ಜರ್ಸ್ ತಂಡವು ಸನ್ರೈಸರ್ಸ್ ಹೆಸರಿನಲ್ಲಿ ಕಣಕ್ಕಿಳಿಯಲಿದೆ.



















