ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟ IPLನ ಮೂರು ಫ್ರಾಂಚೈಸಿಗಳು..!

|

Updated on: Feb 06, 2025 | 10:23 AM

The Hundred 2024: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯ ನಡೆಯಲಿದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್​ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್​ನಲ್ಲಿ 5 ಎಸೆತಗಳು ಇರಲಿವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂದರೆ ಒಬ್ಬ ಬೌಲರ್ ಸತತ 2 ಓವರ್ ಅಥವಾ 10 ಎಸೆತಗಳನ್ನು ಎಸೆಯಬಹುದು. ಹೀಗೆ ಹಲವು ರೀತಿಯಲ್ಲಿ ವಿಭಿನ್ನವಾಗಿ ಟೂರ್ನಿಗೆ ಇದೀಗ ಐಪಿಎಲ್ ಫ್ರಾಂಚೈಸಿಗಳು ಎಂಟ್ರಿ ಕೊಟ್ಟಿದ್ದಾರೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನಲ್ಲಿ ಐಪಿಎಲ್​ನ ಮೂರು ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿದೆ. ಕೆಲ ತಿಂಗಳ ಹಿಂದೆಯಷ್ಟೇ ಇಸಿಬಿ ದಿ ಹಂಡ್ರೆಡ್ ಲೀಗ್ ತಂಡಗಳ ಸ್ಟೇಕ್ ಮಾರಾಟ ಮಾಡುವುದಾಗಿ ತಿಳಿಸಿತ್ತು.

2 / 5
ಅದರಂತೆ ಇದೀಗ ಐಪಿಎಲ್​ನ ಮೂರು ಪ್ರಮುಖ ಫ್ರಾಂಚೈಸಿಗಳಾದ ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ದಿ ಹಂಡ್ರೆಡ್ ಲೀಗ್​ ತಂಡಗಳ ಮಾಲೀಕತ್ವನ್ನು ಪಡೆದುಕೊಂಡಿದೆ. ಈ ಮೂಲಕ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಐಪಿಎಲ್​ ಫ್ರಾಂಚೈಸಿಗಳು ಹೊಸ ಹೆಜ್ಜೆಯನ್ನಿಟ್ಟಿದೆ.

3 / 5
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ರಿಲಯನ್ಸ್ ಒಡೆತನದ ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ 100 ಎಸೆತಗಳ ಟೂರ್ನಿಗೆ ಕಾಲಿಟ್ಟಿದೆ.

4 / 5
ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ತಂಡವನ್ನು ಖರೀದಿಸಿದ್ದು, ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯ ಶೇ.49 ರಷ್ಟು ಪಾಲನ್ನು ತನ್ನದಾಗಿಸಿಕೊಂಡಿದೆ. ಹೀಗಾಗಿ ದಿ ಹಂಡ್ರೆಡ್ ಲೀಗ್​ನಲ್ಲೂ ಇನ್ಮುಂದೆ ಸೂಪರ್ ಜೈಂಟ್ಸ್ ಕಾಣಿಸಿಕೊಳ್ಳಲಿದೆ.

5 / 5
ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ತಂಡವನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಯಾರ್ಕ್‌ಷೈರ್ ಒಡೆತನದಲ್ಲಿದ್ದ ನಾರ್ದರ್ನ್ ಸೂಪರ್‌ಚಾರ್ಜರ್ಸ್‌ನ ಸಂಪೂರ್ಣ ಪಾಲನ್ನು ಖರೀದಿಸಲು ಸನ್​ ಗ್ರೂಪ್ ಮುಂದಾಗಿದ್ದು, ಹೀಗಾಗಿ ಮುಂಬರುವ ದಿ ಹಂಡ್ರೆಡ್ ಲೀಗ್​ನಲ್ಲಿ ನಾರ್ದರ್ನ್ ಸೂಪರ್‌ಚಾರ್ಜರ್ಸ್ ತಂಡವು ಸನ್​ರೈಸರ್ಸ್ ಹೆಸರಿನಲ್ಲಿ ಕಣಕ್ಕಿಳಿಯಲಿದೆ.