Thomas Cup: ಥಾಮಸ್ ಕಪ್ ವಿಜೇತರಿಗೆ ಕೇಂದ್ರದಿಂದ 1 ಕೋಟಿ, ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ ಘೋಷಣೆ
Thomas Cup 2022: ಥಾಮಸ್ ಮತ್ತು ಉಬರ್ ಕಪ್‌ನ ಟೂರ್ನಿಯ 73 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಭಾರತವು ಫೈನಲ್ ತಲುಪಿರಲಿಲ್ಲ. ಆದರೆ ಈ ಬಾರಿ ಭಾರತೀಯ ಪುರುಷರ ತಂಡ ಐತಿಹಾಸಿಕ ಗೆಲುವು ದಾಖಲಿಸಿ ಬ್ಯಾಡ್ಮಿಂಟನ್ನಲ್ಲಿ ಹೊಸ ಇತಿಹಾಸ ಬರೆದಿದೆ.
ಚೊಚ್ಚಲ ಬಾರಿಗೆ ಥಾಮಸ್ ಕಪ್ (Thomas Cup 2022) ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ ಭಾರತ ಬ್ಯಾಡ್ಮಿಂಟನ್ ತಂಡದ ಆಟಗಾರ ಲಕ್ಷ್ಯ ಸೇನ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ 5 ಲಕ್ಷ ರೂ. ಬಹುಮಾನ ಮೊತ್ತ ಘೋಷಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ, ಥಾಮಸ್ ಕಪ್ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿದ ರಾಜ್ಯದ ಬ್ಯಾಡ್ಮಿಂಟನ್ ಆಟಗಾರನಿಗೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ ನೀಡುವುದಾಗಿ ತಿಳಿಸಿದರು. ಇದಕ್ಕೂ ಮುನ್ನ ಕೇಂದ್ರ ಸರ್ಕಾರವು 1 ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಿದೆ. 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾ ತಂಡವನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಟ್ವೀಟ್ ನಲ್ಲಿ ನಗದು ಬಹುಮಾನವನ್ನು ಘೋಷಿಸಿದ್ದರು. ಇದೀಗ ರಾಜ್ಯ ಸರ್ಕಾರ ಕೂಡ ಥಾಮಸ್ ಕಪ್ ವಿಜೇತರಿಗೆ ನಗದು ಬಹುಮಾನ ನೀಡಲು ಮುಂದಾಗಿದೆ.
ಭಾನುವಾರ ಬ್ಯಾಂಕಾಕ್‌ನಲ್ಲಿ ನಡೆದ ಥಾಮಸ್ ಮತ್ತು ಉಬರ್ ಕಪ್‌ನ ಫೈನಲ್‌ನಲ್ಲಿ ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸಿ ಭಾರತ ತಂಡವು ಹೊಸ ಇತಿಹಾಸ ಬರೆಯಿತು.ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತೆ ಲಕ್ಷ್ಯ ಸೇನ್, ಕಿಡಂಬಿ ಶ್ರೀಕಾಂತ್ ಮತ್ತು ವಿಶ್ವದ 8ನೇ ಶ್ರೇಯಾಂಕದ ಡಬಲ್ಸ್ ಜೋಡಿಯ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಸ್ಪೂರ್ತಿದಾಯಕ ಪ್ರಯತ್ನದೊಂದಿಗೆ ಎದುರಾಳಿಯ ವಿರುದ್ಧ ಪ್ರಬಲ ಪ್ರದರ್ಶನ ನೀಡಿದರು. ಈ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದ್ದರು. ಈ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.
As #TeamIndia defeats 14-time #ThomasCup Champions Indonesia (??3-0??) to win its 1️⃣st ever #ThomasCup2022, @IndiaSports is proud to announce a cash award of ₹ 1 crore for the team in relaxation of rules to acknowledge this unparalleled feat!
Congratulations Team India!! https://t.co/QMVCvBDDZS
— Anurag Thakur (@ianuragthakur) May 15, 2022
“ಭಾರತೀಯ ಬ್ಯಾಡ್ಮಿಂಟನ್ ತಂಡವು ಇತಿಹಾಸವನ್ನು ಬರೆದಿದೆ! ಥಾಮಸ್ ಕಪ್ ಗೆದ್ದ ಭಾರತ ತಂಡದಿಂದಾಗಿ ಇಡೀ ದೇಶವೇ ಸಂಭ್ರಮಿಸಿದೆ! ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗಾಗಿ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದರು.
ಥಾಮಸ್ ಮತ್ತು ಉಬರ್ ಕಪ್‌ನ ಟೂರ್ನಿಯ 73 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಭಾರತವು ಫೈನಲ್ ತಲುಪಿರಲಿಲ್ಲ. ಆದರೆ ಈ ಬಾರಿ ಭಾರತೀಯ ಪುರುಷರ ತಂಡ ಐತಿಹಾಸಿಕ ಗೆಲುವು ದಾಖಲಿಸಿ ಬ್ಯಾಡ್ಮಿಂಟನ್ನಲ್ಲಿ ಹೊಸ ಚರಿತ್ರೆ ಬರೆದಿದೆ. ಈ ಮೂಲಕ ಚೀನಾ, ಇಂಡೋನೇಷ್ಯಾ, ಜಪಾನ್, ಡೆನ್ಮಾರ್ಕ್ ನಂತರ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎನಿಸಿಕೊಂಡಿದೆ.
ಲಕ್ಷ್ಯ ಸೇನ್, ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮತ್ತು ಕಿಡಂಬಿ ಶ್ರೀಕಾಂತ್ ಅವರು ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ಇತಿಹಾಸ ಬರೆದಿದ್ದು, ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವು ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಕಿರೀಟವನ್ನು ತನ್ನದಾಗಿಸಿಕೊಂಡಿದೆ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:16 pm, Mon, 16 May 22