ವಿಶ್ವ ಚೆಸ್ ರ‍್ಯಾಂಕಿಂಗ್: ಟಾಪ್-10 ನಲ್ಲಿ ಮೂವರು ಭಾರತೀಯರು

FIDE ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಚಾಲೆಂಜರ್ ಪಂದ್ಯವು ಸಿಂಗಾಪುರದಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾರತದ ಚಾಲೆಂಜರ್ ಡಿ ಗುಕೇಶ್ ಮತ್ತು ಹಾಲಿ ಚಾಂಪಿಯನ್ ಡಿಂಗ್ ಮುಖಾಮುಖಿಯಾಗಲಿದ್ದಾರೆ. ಒಂದು ವೇಳೆ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಚಾಲೆಂಜರ್ ಪಂದ್ಯವನ್ನು ಗೆದ್ದರೆ ವಿಶ್ವ ಚೆಸ್ ಶ್ರೇಯಾಂಕ ಪಟ್ಟಿಯಲ್ಲಿ ಮತ್ತಷ್ಟು ಸ್ಥಾನ ಮೇಲೇರಲಿದ್ದಾರೆ.

ವಿಶ್ವ ಚೆಸ್ ರ‍್ಯಾಂಕಿಂಗ್: ಟಾಪ್-10 ನಲ್ಲಿ ಮೂವರು ಭಾರತೀಯರು
Gukesh-Praggnanandhaa
Follow us
|

Updated on: Jul 02, 2024 | 7:36 AM

ಭಾರತದ ಮೂವರು ಚೆಸ್ ಪಟುಗಳು ಇದೇ ಮೊದಲ ಬಾರಿಗೆ ವಿಶ್ವ ಚೆಸ್ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-10 ನಲ್ಲಿ ಕಾಣಿಸಿಕೊಂಡಿದ್ದಾರೆ. ಇಂಟರ್​ನ್ಯಾಷನಲ್ ಚೆಸ್ ಫೆಡರೇಷನ್  (FIDE) ಪ್ರಕಟಿಸಿರುವ ಜುಲೈ 2024 ರ ರೇಟಿಂಗ್ ಪಟ್ಟಿಯಲ್ಲಿ ಅರ್ಜುನ್ ಎರಿಗೈಸಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡರೆ, ಡಿ ಗುಕೇಶ್ 7ನೇ ಅಲಂಕರಿಸಿದ್ದಾರೆ. ಹಾಗೆಯೇ ಆರ್ ಪ್ರಜ್ಞಾನಂದ 8ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ಮೂವರು ಚೆಸ್ ತಾರೆಯರು ಇದೇ ಮೊದಲ ಬಾರಿಗೆ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಹತ್ತರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅರ್ಜುನ್ ಒಟ್ಟು 2778 ರೇಟಿಂಗ್ ಪಡೆದುಕೊಂಡಿದ್ದರೆ, ಗುಕೇಶ್ 2763 ರೇಟಿಂಗ್​ ಹೊಂದಿದ್ದಾರೆ. ಹಾಗೆಯೇ ಪ್ರಜ್ಞಾನಂದ 2757 ರೇಟಿಂಗ್​ನೊಂದಿಗೆ ಟಾಪ್-10 ನಲ್ಲಿ ಕಾಣಿಸಿಕೊಂಡಿದ್ದಾರೆ. ಇವರಲ್ಲದೆ, ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಅವರು 2751 ರೇಟಿಂಗ್​ನೊಂದಿಗೆ 11ನೇ ಸ್ಥಾನ ಅಲಂಕರಿಸಿದ್ದಾರೆ.

ಇನ್ನು ಈ ಬಾರಿ ಕೂಡ ನಾರ್ವೆ ಚೆಸ್ ಚುತುರ ಮ್ಯಾಗ್ನಸ್ ಕಾರ್ಲ್​ಸೆನ್ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಹಾಗೆಯೇ ಯುಎಸ್​ಎ ಹಿಕಾರು ನಕಮುರ ದ್ವಿತೀಯ ಸ್ಥಾನದಲ್ಲಿದ್ದರೆ, ಫ್ಯಾನಿಯಾನೊ ಕರುವಾನ ಮೂರನೇ ಸ್ಥಾನದಲ್ಲಿದ್ದಾರೆ.

ಏಪ್ರಿಲ್​ನಲ್ಲಿ ಪ್ರಕಟಿಸಲಾಗಿದ್ದ ಶ್ರೇಯಾಂಕ ಪಟ್ಟಿಯಲ್ಲಿ ಅರ್ಜುನ್ ಎರಿಗೈಸಿ 9ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮೂರು ತಿಂಗಳಲ್ಲಿ ಉತ್ತಮ ಪ್ರದರ್ಶನದೊಂದಿಗೆ ಭಾರತದ ಯುವ ಚೆಸ್ ತಾರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಗೆಯೇ ಕಳೆದ ಬಾರಿ 2743 ರೇಟಿಂಗ್​ನೊಂದಿಗೆ 16ನೇ ಸ್ಥಾನದಲ್ಲಿದ್ದ ಗುಕೇಶ್ ಈ ಬಾರಿ 2763 ಅಂಕಗಳೊಂದಿಗೆ 7ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಅದೇ ರೀತಿ ಏಪ್ರಿಲ್​ನಲ್ಲಿ 14ನೇ ಸ್ಥಾನದಲ್ಲಿದ್ದ ಆರ್​ ಪ್ರಜ್ಞಾನಂದ 2747 ಅಂಕಗಳಿಂದ 2757 ಕ್ಕೇರುವ ಮೂಲಕ ಟಾಪ್-10 ನಲ್ಲಿ ಕಾಣಿಸಿಕೊಂಡಿದ್ದಾರೆ

ಒಟ್ಟಿನಲ್ಲಿ ಭಾರತದ ಚೆಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೂವರು ಚೆಸ್​ ಚತುರರು ವಿಶ್ವ ಚೆಸ್ ಶ್ರೇಯಾಂಕದಲ್ಲಿ ಟಾಪ್-10 ನಲ್ಲಿ ಕಾಣಿಸಿಕೊಂಡಿದ್ದು, ಈ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇಂಟರ್​ನ್ಯಾಷನಲ್ ಚೆಸ್ ಫೆಡರೇಷನ್ (FIDE) ಟಾಪ್-10 ರೇಟಿಂಗ್:

  1. ಮ್ಯಾಗ್ನಸ್ ಕಾರ್ಲ್​ಸೆನ್ (ನಾರ್ವೆ) – 2832
  2. ಹಿಕರು ನಕಮುರಾ (ಯುಎಸ್​ಎ) – 2802
  3. ಫ್ಯಾಬಿಯಾನೋ ಕರುವಾನಾ (ಯುಎಸ್​ಎ) – 2796
  4. ಅರ್ಜುನ್ ಎರಿಗೈಸಿ (ಭಾರತ)– 2778
  5. ಇಯಾನ್ ನೆಪೋಮ್ನಿಯಾಚಿ (ರಷ್ಯಾ) – 2770
  6. ನೋಡಿರ್ಬೆಕ್ ಅಬ್ದುಸ್ಸಾಟ್ರೋವ್ (ಉಝ್ಬೇಕಿಸ್ತಾನ್) – 2765
  7. ಡಿ ಗುಕೇಶ್ (ಭಾರತ)– 2763
  8. ಆರ್ ಪ್ರಜ್ಞಾನಂದ (ಭಾರತ)– 2757
  9. ವೆಸ್ಲಿ ಸೋ (ಯುಎಸ್​ಎ) – 2757
  10. ವೀ ಯಿ (ಚೀನಾ) – 2755

ವಿಶ್ವ ಚೆಸ್ ಚಾಂಪಿಯನ್​ಶಿಪ್​ಗೆ ಗುಕೇಶ್:

ಟೊರೆಂಟೊದಲ್ಲಿ ನಡೆದ ಕ್ಯಾಂಡಿಡೇಟ್ಸ್ ಚೆಸ್  ಟೂರ್ನಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಅಗಿ ಹೊರಹೊಮ್ಮಿದ್ದರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಕಿರಿಯ ಚೆಸ್ ಚತುರ ಎನಿಸಿಕೊಂಡಿದ್ದಾರೆ. ಅಲ್ಲದೆ ಕ್ಯಾಂಡಿಡೇಟ್ ಚೆಸ್ ಸ್ಪರ್ಧೆಯನ್ನು ಗೆದ್ದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಗುಕೇಶ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2014 ರಲ್ಲಿ 5 ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಈ ಸಾಧನೆ ಮಾಡಿದ್ದರು.

ಇದನ್ನೂ ಓದಿ: Shoaib Akhtar: ಭಗವದ್ಗೀತೆ ಶ್ಲೋಕ ಹಂಚಿಕೊಂಡ ಶೊಯೇಬ್ ಅಖ್ತರ್

ಈ ಗೆಲುವಿನೊಂದಿಗೆ 17ನೇ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಚಾಲೆಂಜರ್ ಪಂದ್ಯವಾಡಲು ಅವಕಾಶ ಪಡೆದಿರುವ ಡಿ ಗುಕೇಶ್​ ಹಾಲಿ ವಿಶ್ವ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ವಿರುದ್ಧ ಡಿಸೆಂಬರ್​ನಲ್ಲಿ ಸ್ಪರ್ಧಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ಗುಕೇಶ್ ಗೆದ್ದರೆ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಚಾಲೆಂಜರ್ ಗೆದ್ದ ವಿಶ್ವದ ಅತ್ಯಂತ ಕಿರಿಯ ಚೆಸ್ ಚತುರ ಎನಿಸಿಕೊಳ್ಳಲಿದ್ದಾರೆ.

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು