Tokyo Olympics: ಒಲಿಂಪಿಕ್ಸ್​ಗೆ ಮತ್ತೆ ಕೊರೊನಾ ಕರಿನೆರಳು: ಇಬ್ಬರು ಕ್ರೀಡಾಪಟುಗಳಿಗೆ ಕೋವಿಡ್ ಸೋಂಕು

ಕೋವಿಡ್ ಸೋಂಕು ಪಾಸಿಟಿವ್ ಬಂದಿರುವ ಇಬ್ಬರಲ್ಲಿ ಒಬ್ಬರು ಸೌತ್ ಕೊರಿಯಾದ ಇಂಟರ್ ನ್ಯಾಷನಲ್ ಒಲಿಂಪಿಕ್ ಕಮಿಟಿ (ಐಒಸಿ) ಸದಸ್ಯ ಎಂದು ತಿಳಿದು ಬಂದಿದೆ. ಸೋಂಕಿಗೀಡಾಗಿರುವವರು ಈಗ ಐಸೊಲೇಶನ್‌ನಲ್ಲಿದ್ದಾರೆ.

Tokyo Olympics: ಒಲಿಂಪಿಕ್ಸ್​ಗೆ ಮತ್ತೆ ಕೊರೊನಾ ಕರಿನೆರಳು: ಇಬ್ಬರು ಕ್ರೀಡಾಪಟುಗಳಿಗೆ ಕೋವಿಡ್ ಸೋಂಕು
ಟೋಕಿಯೊ ಒಲಿಂಪಿಕ್ಸ್‌
Follow us
TV9 Web
| Updated By: Vinay Bhat

Updated on: Jul 18, 2021 | 12:29 PM

ಟೋಕಿಯೊ ಒಲಿಂಪಿಕ್ಸ್ (Tokyo Olympics) ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆದರೆ ಅತಿ ದೊಡ್ಡ ಕ್ರೀಡಾಕೂಟಕ್ಕೆ ಕೊರೊನಾ (Corona) ಕರಿ ನೆರಳು ಮತ್ತೆ ಆವರಿಸಿದೆ. ಕ್ರೀಡಾಪ್ರದೇಶದಲ್ಲಿ ಇಬ್ಬರು ಅಥ್ಲೀಟ್​ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಧಿಕಾರಿಗಳು ಈ ವಿಚಾರವನ್ನು ಖಾತರಿಪಡಿಸಿದ್ದಾರೆ.

ಕ್ರೀಡಾ ಪ್ರದೇಶದಲ್ಲಿ ಸೋಂಕು ಪತ್ತೆಯಾದ ಮೊದಲ ಪ್ರಕರಣ ಇದಾಗಿದ್ದು ಟೋಕಿಯೊ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮತ್ತೋರ್ವ ಕ್ರೀಡಾಪಟುವಿಗೂ ಕೋವಿಡ್ ಸೋಂಕು ದೃಢವಾಗಿದೆ. ಆದರೆ ಆತ ಕ್ರೀಡಾ ಪ್ರದೇಶ ಪ್ರವೇಶಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಲಿಂಪಿಕ್ಸ್ ಸಂಘಟಕರು ಶನಿವಾರ ಕ್ರೀಡಾಪಟುಗಳ ಹಳ್ಳಿಯಲ್ಲಿ ಕೋವಿಡ್ -19 ರ ಮೊದಲ ಪ್ರಕರಣವನ್ನು ವರದಿ ಮಾಡಿದ್ದರು.

ಕೋವಿಡ್-19 ಸೋಂಕು ಪಾಸಿಟಿವ್ ಬಂದಿರುವ ಇಬ್ಬರಲ್ಲಿ ಒಬ್ಬರು ಸೌತ್ ಕೊರಿಯಾದ ಇಂಟರ್ ನ್ಯಾಷನಲ್ ಒಲಿಂಪಿಕ್ ಕಮಿಟಿ (ಐಒಸಿ) ಸದಸ್ಯ ಎಂದು ತಿಳಿದು ಬಂದಿದೆ. ಸೋಂಕಿಗೀಡಾಗಿರುವವರು ಈಗ ಐಸೊಲೇಶನ್‌ನಲ್ಲಿದ್ದಾರೆ. ಮುಂದಿನ ವಾರ ಪ್ರಾರಂಭವಾಗುವ ಕ್ರೀಡಾಕೂಟಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 14 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸುರಕ್ಷಿತ ಒಲಿಂಪಿಕ್​ನ ಭರವಸೆಗಳ ಬಗ್ಗೆ ಅನುಮಾನ ಮೂಡುತ್ತಿದೆ.

ಟೋಕಿಯೊ ಒಲಿಂಪಿಕ್ಸ್‌ ಮೇಲೆ ಕೊರೊನಾ ವೈರಸ್‌ ಪರಿಣಾಮ ಬೀರುತ್ತಲೇ ಇದೆ. ಕಳೆದ ವರ್ಷವೂ ಕೊರೊನಾದಿಂದಾಗಿ ಈ ಆಟಗಳನ್ನು ಒಂದು ವರ್ಷ ಮುಂದೂಡಲಾಯಿತು. ಈ ವರ್ಷ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ, ಆದರೆ ಕೊರೊನಾಂತಕ ಕಡಿಮೆಯಾಗಿಲ್ಲ.

ಈ ಮೊದಲು ಘಾನಾದ ಆಟಗಾರ ಕೊರೊನಾ ಪಾಸಿಟಿವ್ ಎಂಬ ಸುದ್ದಿ ಬಂದಿತ್ತು. ಅದೇ ಸಮಯದಲ್ಲಿ, ಒಲಿಂಪಿಕ್ ನಿರಾಶ್ರಿತರ ತಂಡವು ಕೊರೊನಾ ಸೋಂಕಿಗೆ ಒಳಗಾದ ಸುದ್ದಿ ಕೂಡ ಕೇಳಿ ಬಂದಿತ್ತು. ಟೋಕಿಯೊಗೆ ತೆರಳುವ ಮೊದಲು, ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ನಿರಾಶ್ರಿತರ ತಂಡದ ಅಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು.

IND vs SL: ಲಂಕಾ ಕೊನೆಯದಾಗಿ ಏಕದಿನ ಸರಣಿ ಗೆದ್ದಾಗ ಭಾರತದ ಈ ಸ್ಟಾರ್ ಪ್ಲೇಯರ್ ಹುಟ್ಟಿಯೇ ಇರಲಿಲ್ಲ!

India vs Sri Lanka 1st ODI: ಭಾರತ-ಶ್ರೀಲಂಕಾ ಮೊದಲ ಏಕದಿನ ಪಂದ್ಯ ಎಲ್ಲಿ?, ಯಾವುದರಲ್ಲಿ ನೇರಪ್ರಸಾರ?, ಎಷ್ಟು ಗಂಟೆಗೆ?, ಇಲ್ಲಿದೆ ಮಾಹಿತಿ

(Tokyo Games Two Athletes Positive For COVID-19 In Olympic Village Say Officials)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ