Sania Mirza: ಒಲಿಂಪಿಕ್ ಕಿಟ್​ನಲ್ಲಿ ಸಾನಿಯಾ ಮಿರ್ಜಾ ಸಖತ್ ಡ್ಯಾನ್ಸ್: ವೈರಲ್ ವಿಡಿಯೋ ಇಲ್ಲಿದೆ ನೋಡಿ

Olympics 2021: ಸಾನಿಯಾ ಮಿರ್ಜಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಭಾರತದ ಹೊಸ ಒಲಿಂಪಿಕ್ ಜೆರ್ಸಿಯಲ್ಲಿ ಡ್ಯಾನ್ಸ್ ಮಾಡಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Sania Mirza: ಒಲಿಂಪಿಕ್ ಕಿಟ್​ನಲ್ಲಿ ಸಾನಿಯಾ ಮಿರ್ಜಾ ಸಖತ್ ಡ್ಯಾನ್ಸ್: ವೈರಲ್ ವಿಡಿಯೋ ಇಲ್ಲಿದೆ ನೋಡಿ
Sania Mirza
Follow us
TV9 Web
| Updated By: Vinay Bhat

Updated on: Jul 15, 2021 | 12:01 PM

ಜಗತ್ತಿನ ಅತಿ ದೊಡ್ಡ ಕ್ರೀಡಾಕೂಟ ಬಹುನಿರೀಕ್ಷಿತ ಟೋಕಿಯೋ ಒಲಿಂಪಿಕ್ಸ್​​ಗೆ ಕ್ಷಣಗಣನೆ ಶುರುವಾಗಿದೆ. ಕ್ರೀಡಾಕೂಟವು ಜುಲೈ 23ರಿಂದ ಆರಂಭವಾಗಿ ಆಗಸ್ಟ್ 08ರವರೆಗೆ ನಡೆಯಲಿದೆ. ಜುಲೈ 17 ರಂದು ಭಾರತದ ಮೊದಲ ಬ್ಯಾಚ್ ಆಟಗಾರರು ಟೋಕಿಯೋಗೆ ತೆರಳಲಿದ್ದಾರೆ. ಭಾರತ ಒಟ್ಟು 18 ವಿಭಾಗದಲ್ಲಿ ಸ್ಪರ್ಧಿಸಲಿದ್ದು, ಇದಕ್ಕಾಗಿ 126 ಕ್ರೀಡಾಪಟುಗಳು ಜಪಾನ್ ರಾಜಧಾನಿ ಟೋಕಿಯೋಗೆ ಪ್ರಯಾಣ ಬೆಳೆಸಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಕ್ರೀಡಾಪಟುಗಳು ಒಲಿಂಪಿಕ್​ನಲ್ಲಿ ಭಾಗವಹಿಸುವುದಕ್ಕು ಮುನ್ನ ತಮಗಾಗುತ್ತಿರುವ ವಿಶೇಷ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರಲ್ಲಿ ಭಾರತದ ಹೆಮ್ಮೆಯ ಟೆನ್ನಿಸ್ ಆಟಗಾರ್ತಿ, ಆರು ಬಾರಿಯ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್​ ಸಾನಿಯಾ ಮಿರ್ಜಾ ಕೂಡ ಸೇರಿದ್ದಾರೆ.

ಸಾನಿಯಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಭಾರತದ ಹೊಸ ಒಲಿಂಪಿಕ್ ಜೆರ್ಸಿಯಲ್ಲಿ ಡ್ಯಾನ್ಸ್ ಮಾಡಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕೆಲವು ಸೆಕೆಂಡ್​ನಷ್ಟಿರುವ ಈ ವಿಡಿಯೋಗೆ ಸಾನಿಯಾ ಕ್ಯಾಪ್ಷನ್ ಕೂಡ ಕೊಟ್ಟಿದ್ದು, ನನ್ನ ಹೆಸರಿನಲ್ಲಿರುವ A ಅಕ್ಷರ ನನ್ನ ಜೀವನದಲ್ಲಿ ತುಂಬಾನೆ ಮುಖ್ಯವಾದೂದು ಎಂದಿದ್ದಾರೆ. A ಎಂದರೆ ಆಕ್ರಮಣಶೀಲತೆ, ಮಹತ್ವಾಕಾಂಕ್ಷೆ, ಸಾಧನೆ ಮತ್ತು ವಾತ್ಸಲ್ಯ ಎಂದು ವಿವರಿಸಿದ್ದಾರೆ.

ಸಾನಿಯಾ ಅವರ ಈ ಫೋಸ್ಟ್ ಭರ್ಜರಿ ವೈರಲ್ ಆಗುತ್ತಿದ್ದು, ಶೇರ್ ಮಾಡಿಕೊಂಡ 2 ಗಂಟೆಗಳಲ್ಲಿ 55 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿವೆ.

View this post on Instagram

A post shared by Sania Mirza (@mirzasaniar)

ಜುಲೈ 23ರಿಂದ ಆಗಸ್ಟ್ 8ರ ವರೆಗೆ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್‌ಗಾಗಿ ಭಾರತದಿಂದ 18 ಕ್ರೀಡಾ ವಿಭಾಗಗಳಲ್ಲಿ ಒಟ್ಟು 126 ಕ್ರೀಡಾಪಟುಗಳು ತೆರಳಲಿದ್ದಾರೆ. ಯಾವುದೇ ಒಲಿಂಪಿಕ್ಸ್‌ಗೆ ಹೋಲಿಸಿದರೆ ಭಾರತ ಕಳುಹಿಸುತ್ತಿರುವ ಅತಿದೊಡ್ಡ ಅಥ್ಲೀಟ್‌ಗಳ ತಂಡ ಇದಾಗಿದೆ.

ಇನ್ನೂ ಭಾರತ ಇದೇ ಮೊದಲ ಬಾರಿಗೆ ಫೆನ್ಸರ್ ಕ್ರೀಡೆಯಲ್ಲಿ ಸ್ಪರ್ಧಿಸುತ್ತಿದೆ. ಭಾರತದ ಭವಾನಿ ದೇವಿ ಫೆನ್ಸರ್ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಸೈಲರ್ ವಿಭಾಗದಲ್ಲಿ ನೇತ್ರಾ ಕುಮಾರ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಭಾರತದ ಮೊದಲ ಮಹಿಳೆ ಆಗಿದ್ದಾರೆ. ಇನ್ನು ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಭಾರತದ ಮೊದಲ ಈಜುಗಾರರಾದ ಸಜನ್ ಪ್ರಕಾಶ್ ಮತ್ತು ಶ್ರೀಹರಿ ನಟರಾಜ್ ಕೂಡ ಈ ಬಾರಿಯ ಒಲಿಂಪಿಕ್ಸ್ ಕೂಟದ ವಿಶೇಷತೆ ಹಾಗೂ ಹೆಗ್ಗಳಿಕೆಯಾಗಿದೆ.

IND vs SL: ಪಡಿಕ್ಕಲ್ ಪದಾರ್ಪಣೆ ಅನುಮಾನ: ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸುತ್ತಿರುವ ಹೊಸ ಓಪನರ್

Rishabh Pant: ಇಂಗ್ಲೆಂಡ್​ನಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್​ಮನ್​ಗೆ ಕೊರೋನಾ: ಭೀತಿಯಲ್ಲಿ ವಿರಾಟ್ ಕೊಹ್ಲಿ ಪಡೆ

(Tokyo Olympic Sania Mirzas Dance Video In Olympic Kit Is Winning The Internet)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ