Tokyo Olympic: ಟೋಕಿಯೊ ಒಲಿಂಪಿಕ್ಸ್ ನಡೆಯುವ ಪ್ರದೇಶದಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲು

ಟೋಕಿಯೊ ಒಲಿಂಪಿಂಕ್ ನಡೆಯಲಿರುವ ಪ್ರದೇಶದಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸ್ಕ್ರೀನಿಂಗ್ ನಡೆಸುವ ವೇಳೆ ಈ ವಿಚಾರ ತಿಳಿದುಬಂದಿದೆ.

Tokyo Olympic: ಟೋಕಿಯೊ ಒಲಿಂಪಿಕ್ಸ್ ನಡೆಯುವ ಪ್ರದೇಶದಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲು
ಟೋಕಿಯೊ ಒಲಿಂಪಿಕ್ಸ್‌
Follow us
TV9 Web
| Updated By: Vinay Bhat

Updated on:Jul 17, 2021 | 10:01 AM

ಬಹುನಿರೀಕ್ಷಿತ ಟೋಕಿಯೊ ಒಲಿಂಪಿಕ್ಸ್ಗೆ(Tokyo Olympics) ಮತ್ತೆ ಕೊರೊನಾ (Corona virus) ಕರಿನೆರಳು ಆವರಿಸಿದೆ. ಕ್ರೀಡಾಕೂಟ ಆರಂಭಕ್ಕೆ ಇನ್ನೇನು ಆರು ದಿನಗಳು ಇರುವಾಗಲೇ ಟೋಕಿಯೊ ಒಲಿಂಪಿಂಕ್ ನಡೆಯಲಿರುವ ಸ್ಥಳದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಟೋಕಿಯೊ ಸಂಘಟನಾ ಸಮಿತಿ ಮಾಹಿತಿ ನೀಡಿದೆ.

ಟೋಕಿಯೊ ಒಲಿಂಪಿಕ್ಸ್ ನಡೆಯಲಿರುವ ಪ್ರದೇಶದಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸ್ಕ್ರೀನಿಂಗ್ ನಡೆಸುವ ವೇಳೆ ಈ ವಿಚಾರ ತಿಳಿದುಬಂದಿದೆ” ಎಂದು ಟೋಕಿಯೊ ಸಂಘಟನಾ ಸಮಿತಿಯ ಮಸಾ ಟಕಾಯ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿರುವ ವ್ಯಕ್ತಿ ಯಾರು, ಯಾವ ದೇಶದವರು ಎಂಬುದು ಇನ್ನೂ ಬಹಿರಂಗ ಪಡಿಸಿಲ್ಲ.

ಟೋಕಿಯೊ ಒಲಿಂಪಿಕ್ಸ್‌ ಮೇಲೆ ಕೊರೊನಾ ವೈರಸ್‌ ಪರಿಣಾಮ ಬೀರುತ್ತಲೇ ಇದೆ. ಕಳೆದ ವರ್ಷವೂ ಕೊರೊನಾದಿಂದಾಗಿ ಈ ಆಟಗಳನ್ನು ಒಂದು ವರ್ಷ ಮುಂದೂಡಲಾಯಿತು. ಈ ವರ್ಷ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ, ಆದರೆ ಕೊರೊನಾಂತಕ ಕಡಿಮೆಯಾಗಿಲ್ಲ.

ಈ ಮೊದಲು ಘಾನಾದ ಆಟಗಾರ ಕೊರೊನಾ ಪಾಸಿಟಿವ್ ಎಂಬ ಸುದ್ದಿ ಬಂದಿತ್ತು. ಅದೇ ಸಮಯದಲ್ಲಿ, ಒಲಿಂಪಿಕ್ ನಿರಾಶ್ರಿತರ ತಂಡವು ಕೊರೊನಾ ಸೋಂಕಿಗೆ ಒಳಗಾದ ಸುದ್ದಿ ಕೂಡ ಕೇಳಿ ಬಂದಿತ್ತು. ಟೋಕಿಯೊಗೆ ತೆರಳುವ ಮೊದಲು, ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ನಿರಾಶ್ರಿತರ ತಂಡದ ಅಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು.

India vs Sri lanka: ಹಾರ್ದಿಕ್-ಧವನ್ ಅಲ್ಲ: ಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ಗೇಮ್ ಚೇಂಜರ್ ಈತನಂತೆ!

ಟಿ-20 ವಿಶ್ವಕಪ್​ನಲ್ಲಿ ಭಾರತಕ್ಕೆ ಪಾಕ್ ಎದುರಾಳಿ! ಚುಟುಕು ಸಮರದಲ್ಲಿ ಬದ್ಧವೈರಿ ಎದುರು ಭಾರತವೇ ಬೆಸ್ಟ್

(First COVID-19 Case In Tokyo Olympic Village: Organisers)

Published On - 9:55 am, Sat, 17 July 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ