Tokyo Olympics: ಫೈನಲ್​ಗೇರುವ ಭಾರತ ಮಹಿಳಾ ಹಾಕಿ ತಂಡದ ಕನಸು ಭಗ್ನ: ಸೆಮೀಸ್​ನಲ್ಲಿ ಅರ್ಜೇಂಟಿನಾ ವಿರುದ್ಧ ಸೋಲು

India Vs Argentina: ಪಂದ್ಯ ಆರಂಭವಾದ ಕೇವಲ ಎರಡು ನಿಮಿಷದಲ್ಲೇ ಭಾರತಕ್ಕೆ ಮೊದಲ ಗೋಲು ದಕ್ಕಿತು. ವಂದನಾ ಅವರು ತಂಡಕ್ಕೆ ಖಾತೆ ತೆರೆದು ಮೊದಲ ಕ್ವಾರ್ಟರ್​ನಲ್ಲಿ ಭಾರತ 1-0 ಮುನ್ನಡೆ ಸಾಧಿಸುವಂತೆ ಮಾಡಿದರು. 

Tokyo Olympics: ಫೈನಲ್​ಗೇರುವ ಭಾರತ ಮಹಿಳಾ ಹಾಕಿ ತಂಡದ ಕನಸು ಭಗ್ನ: ಸೆಮೀಸ್​ನಲ್ಲಿ ಅರ್ಜೇಂಟಿನಾ ವಿರುದ್ಧ ಸೋಲು
ಭಾರತೀಯ ಮಹಿಳಾ ಹಾಕಿ ತಂಡ
Follow us
TV9 Web
| Updated By: Vinay Bhat

Updated on: Aug 04, 2021 | 5:07 PM

ಒಲಿಂಪಿಕ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಕಿಯ ಸೆಮಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದ್ದ ಭಾರತ ಮಹಿಳಾ ತಂಡ ಫೈನಲ್​ಗೇರಲು ವಿಫಲವಾಗಿದೆ. ಅರ್ಜೇಂಟಿನಾ ವಿರುದ್ಧ ನಡೆದ ಸೆಮಿ ಫೈನಲ್ ಕದನದಲ್ಲಿ ಭಾರತ 1-2 ಗೋಲುಗಳ ಅಂತರದಿಂದ ಸೋಲು ಕಂಡಿದೆ. ಆದರೆ, ಭಾರತಕ್ಕೆ ಕಂಚು ಗೆಲ್ಲುವ ಅವಕಾಶವಿದ್ದು, ಇನ್ನೊಂದು ಸೆಮಿ ಫೈನಲ್​ನಲ್ಲಿ ಸೋಲುವ ತಂಡದ ವಿರುದ್ಧ ಪಂದ್ಯವಿದೆ. ಇದರಲ್ಲಿ ಭಾರತ ಮಹಿಳಾ ಹಾಕಿ ತಂಡ ಗೆದ್ದರೆ ಕಂಚಿನ ಪದಕ ಮುಡಿಗೇರಿಸಿಕೊಳ್ಳಲಿದೆ.

ಪಂದ್ಯ ಆರಂಭವಾದ ಕೇವಲ ಎರಡು ನಿಮಿಷದಲ್ಲೇ ಭಾರತಕ್ಕೆ ಮೊದಲ ಗೋಲು ದಕ್ಕಿತು. ವಂದನಾ ಅವರು ತಂಡಕ್ಕೆ ಖಾತೆ ತೆರೆದು ಮೊದಲ ಕ್ವಾರ್ಟರ್​ನಲ್ಲಿ ಭಾರತ 1-0 ಮುನ್ನಡೆ ಸಾಧಿಸುವಂತೆ ಮಾಡಿದರು. ಎರಡನೇ ಕ್ವಾರ್ಟರ್​ನ ಆರಂಭದಲ್ಲಿ  ಅರ್ಜೇಂಟಿನಾ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದುಕೊಂಡು ತನ್ನ ಖಾತೆ ತೆರೆಯಿತು. ಈ ಮೂಲಕ ಮೊದಲಾರ್ಧದ ವೇಳೆಗೆ ಉಭಯ ತಂಡಗಳು ಸಲಬಲ ಸಾಧಿಸಿದವು.

ಮೂರನೇ ಕ್ವಾರ್ಟರ್​ನಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಅದ್ಭುತವಾಗಿ ಉಪಯೋಗಿಸಿಕೊಂಡ ಅರ್ಜೇಂಟಿನಾ 2-1ರ ಮುನ್ನಡೆ ಸಾಧಿಸಿತು. ಮೂರನೇ ಮತ್ತು ಅಂತಿಮ ನಾಲ್ಕನೆ ಕ್ವಾರ್ಟರ್​ನಲ್ಲಿ ಆಕ್ರಮಣ ಆಟ ಪ್ರದರ್ಶಿಸಿದ ಅರ್ಜೇಂಟಿನಾ ಭಾರತಕ್ಕೆ ಗೋಲು ದಾಖಲಿಸಲು ಅವಕಾಶವೇ ಕೊಡಲಿಲ್ಲ. ಅಂತಿಮವಾಗಿ ಅರ್ಜೇಂಟಿನಾ 2-1 ಗೋಲುಗಳ ಅಂತರದಿಂದ ಗೆದ್ದು ಫೈನಲ್​ಗೆ ಪ್ರವೇಶ ಪಡೆದಿದೆ. ಭಾರತ ಮಹಿಳಾ ಹಾಕಿ ತಂಡದ ಚೊಚ್ಚಲ ಫೈನಲ್ ಕನಸು ಭಗ್ನಗೊಂಡಿದೆ.

ಇದಕ್ಕೂ ಮುನ್ನ ಗುಂಪು ಹಂತದ ಪಂದ್ಯದಲ್ಲಿ ಮೊದಲ 3 ಪಂದ್ಯ ಸೋತಿದ್ದ ಭಾರತ ಆ ಬಳಿಕ ಸತತ 2 ಪಂದ್ಯ ಗೆದ್ದು ಭರ್ಜರಿ ಕಮ್​ಬ್ಯಾಕ್ ಮಾಡಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿತ್ತು. ಇಲ್ಲಿ 3 ಬಾರಿ ಒಲಿಂಪಿಕ್ಸ್‌ ಚಾಂಪಿಯನ್‌ ಆಸ್ಪ್ರೇಲಿಯಾವನ್ನು 1-0 ಗೋಲಿನಿಂದ ಕಟ್ಟಿಹಾಕಿ ಸೆಮಿ ಫೈನಲ್​ಗೆ ಪ್ರವೇಶ ಪಡೆದು ಜಗತ್ತೇ ಬೆರಗಾಗುವಂತೆ ಮಾಡಿತ್ತು.

ಇನ್ನೂ ಭಾರತದ ಖ್ಯಾತ ಕುಸ್ತಿತಿಪಟು ರವಿಕುಮಾರ್ ಇತಿಹಾಸ ನಿರ್ಮಿಸಿದ್ದಾರೆ. ಬುಧವಾರ ನಡೆದ ಪುರುಷರ 57 ಕೆ.ಜಿ. ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್ ಮುಖಾಮುಖಿಯಲ್ಲಿ ರವಿಕುಮಾರ್ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆದ್ದು ಭಾರತಕ್ಕೆ ಮಗದೊಂದು ಪದಕ ಖಾತ್ರಿಪಡಿಸಿದ್ದಾರೆ.

ರವಿ ಅವರು ಪುರುಷರ 57 ಕೆ.ಜಿ. ವಿಭಾಗದ ಫ್ರೀ ಸ್ಟ್ರೈಲ್‌ ಕುಸ್ತಿ ಸ್ಪರ್ಧೆಯಲ್ಲಿ ಕೊಲಂಬಿಯಾದ ಅರ್ಬಾನೊ ಟೈಗರೋಸ್ ಎದುರು 13-2 ಅಂಕಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ ಫೈನಲ್​ನಲ್ಲಿ ಬಲ್ಜೆರಿಯಾದ ಜಾರ್ಗೀ ವಂಗೆಲೊವ್ ಎದುರು 14-4 ಅಂಕಗಳ ಅಂತರದಲ್ಲಿ ಅಮೋಘ ಗೆಲುವು ಸಾಧಿಸಿ ಸೆಮೀಸ್​ಗೆ ಅರ್ಹತೆಗಿಟ್ಟಿಸಿಕೊಂಡಿದ್ದರು.

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ