AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಎಮ್ಮಾ…7 ಪದಕ ಗೆದ್ದು ಒಲಿಂಪಿಕ್ಸ್​ನಲ್ಲಿ ವಿಶ್ವ ದಾಖಲೆ ಬರೆದ ಈಜುಗಾರ್ತಿ

Emma McKeon: 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಮೈಕಲ್ ಫೆಲ್ಪ್ಸ್ ಒಟ್ಟು 8 ಪದಕಗಳನ್ನು ಗೆದ್ದಿದ್ದರು. ಇದೀಗ ಒಲಿಂಪಿಕ್ಸ್​ವೊಂದರಲ್ಲಿ ಏಳು ಪದಕ ಮೊದಲ ಮಹಿಳಾ ಕ್ರೀಡಾಪಟ್ಟು ಎಂಬ ಹೆಗ್ಗಳಿಕೆ ಎಮ್ಮಾ ಪಾತ್ರರಾಗಿದ್ದಾರೆ.

Tokyo Olympics: ಎಮ್ಮಾ...7 ಪದಕ ಗೆದ್ದು ಒಲಿಂಪಿಕ್ಸ್​ನಲ್ಲಿ ವಿಶ್ವ ದಾಖಲೆ ಬರೆದ ಈಜುಗಾರ್ತಿ
emma mckeon
TV9 Web
| Edited By: |

Updated on: Aug 01, 2021 | 4:35 PM

Share

ಟೋಕಿಯೋ ಒಲಂಪಿಕ್ಸ್‌ನಲ್ಲಿ ( Tokyo Olympics 2020) ಭಾರತೀಯ ಕ್ರೀಡಾಪಟುಗಳು ಒಂದಾದರೂ ಚಿನ್ನ ಗೆಲ್ಲಲಿ ಎಂಬ ಪ್ರಾರ್ಥನೆ ಒಂದೆಡೆಯಾದರೆ, ಇದೇ ಒಲಿಂಪಿಕ್ಸ್​ನಲ್ಲಿ ಒಂದೆರಡಲ್ಲ ಬರೋಬ್ಬರಿ ಏಳು ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ ಆಸ್ಟ್ರೇಲಿಯಾದ ಈಜುಗಾರ್ತಿ ಎಮ್ಮಾ ಮೆಕಿಯನ್ ( emma mckeon ). ಈ ಮೂಲಕ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಅತೀ ಹೆಚ್ಚು ಪದಕಗಳಿಸಿದ ಮಹಿಳೆ ಎಂಬ ವಿಶ್ವ ದಾಖಲೆಯನ್ನು ಬರೆದಿದ್ದಾರೆ.

ಭಾನುವಾರ ನಡೆದ 4X100 ಮಹಿಳೆಯರ ಫ್ರೀ ಸ್ಟೈಲ್ ರಿಲೆಯಲ್ಲಿ ಚಿನ್ನ ಗಳಿಸುವ ಮೂಲಕ ಎಲ್ಲಾ ಎಮ್ಮಾ ಮೆಕಿಯನ್ ದಾಖಲೆ ನಿರ್ಮಿಸಿದರು. ಇದಕ್ಕೂ ಮೊದಲು 1952ರಲ್ಲಿ ಸೋವಿಯತ್ ಒಕ್ಕೂಟದ ಜಿಮ್ನಾಸ್ಟ್ ಪಟು ಮರಿಯ ಗೊರೊವೊವಿಸ್ಕ ಒಲಿಂಪಿಕ್ಸ್​ನಲ್ಲಿ ಏಳು ಪದಕಗಳನ್ನು ಜಯಿಸಿ ಇತಿಹಾಸ ನಿರ್ಮಿಸಿದ್ದರು. ಇದೀಗ ಎಮ್ಮಾ ಮೆಕಿಯನ್ ಒಂದೇ ಒಲಿಂಪಿಕ್ಸ್​ನಲ್ಲಿ ಏಳು ಪದಕಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸ ರಚಿಸಿದ್ದಾರೆ.

ಈ 7 ಪದಕದಲ್ಲಿ ನಾಲ್ಕು ಚಿನ್ನದ ಪದಕಗಳಿರುವುದು ವಿಶೇಷ. ಹಾಗೆಯೇ ಮೂರು ಕಂಚಿನ ಪದಕಗಳನ್ನು ಕೂಡ 27ರ ಮೆಕಿಯನ್ ತಮ್ಮದಾಗಿಸಿಕೊಂಡಿದ್ದಾರೆ. ಇದಾಗ್ಯೂ ಒಲಿಂಪಿಕ್ಸ್​ನಲ್ಲಿ ಅತೀ ಹೆಚ್ಚು ಪದಕ ಗೆದ್ದ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ.

2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಮೈಕಲ್ ಫೆಲ್ಪ್ಸ್ ಒಟ್ಟು 8 ಪದಕಗಳನ್ನು ಗೆದ್ದಿದ್ದರು. ಇದೀಗ ಒಲಿಂಪಿಕ್ಸ್​ವೊಂದರಲ್ಲಿ ಏಳು ಪದಕ ಮೊದಲ ಮಹಿಳಾ ಕ್ರೀಡಾಪಟ್ಟು ಎಂಬ ಹೆಗ್ಗಳಿಕೆ ಎಮ್ಮಾ ಪಾತ್ರರಾಗಿದ್ದಾರೆ.

ಎಮ್ಮಾ ಮೆಕಿಯನ್ ಗೆದ್ದ ಪದಕಗಳ ವಿವರ ಹೀಗಿದೆ: 50 ಮೀ. ಫ್ರೀಸ್ಟ್ರೈಲ್ (ಚಿನ್ನ) 100 ಮೀ. ಫ್ರೀಸ್ಟೈಲ್(ಚಿನ್ನ) 100 ಮೀ. ಬಟರ್ ಫ್ಲೈ (ಕಂಚು) 4×200 ಮೀ. ಫ್ರೀ ಸ್ಟೈಲ್ ರಿಲೇ (ಕಂಚು) 4×100 ಮೀ. ಮಿಕ್ಸೆಡ್ ಮೆಡ್ಲಿ ರಿಲೇ (ಕಂಚು) 4×100 ಮೀ. ಪ್ರೀಸ್ಟೈಲ್ ರಿಲೇ(ಚಿನ್ನ) 4×100 ಮೀ. ಮೆಡ್ಲಿ ರಿಲೇ (ಚಿನ್ನ)

ಒಟ್ಟು 7 ಪದಕಗಳನ್ನು ಆಸ್ಟ್ರೇಲಿಯಾದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೇರಿಸುವ ಎಮ್ಮಾ ಅವರ ಸಾಧನೆ ನೋಡಿ ಇದೀಗ ಇತರೆ ದೇಶಗಳು ಎಮ್ಮಾ ಎಂಬುದು ಹುಬ್ಬೇರಿಸುತ್ತಿರುವುದಂತು ಸುಳ್ಳಲ್ಲ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

ಇದನ್ನೂ ಓದಿ: LICಯ ವಿಶೇಷ ಯೋಜನೆ: 200 ರೂ. ಹೂಡಿಕೆ ಮಾಡಿ, 28 ಲಕ್ಷ ರೂ. ಪಡೆಯಿರಿ

(Emma McKeon becomes first female swimmer to win 7 medals)

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್