ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ನೀರಜ್​ ಚೋಪ್ರಾಗೆ ಜೀವಿತಾವಧಿ ಕೊಡುಗೆ ನೀಡಿದ ಕೆಎಸ್​ಆರ್​ಟಿಸಿ; ಕನ್ನಡತಿ ಅದಿತಿ ಅಶೋಕ್​ಗೂ ಗೌರವ

KSRTC: ಕೆಎಸ್​ಆರ್​ಟಿಸಿ ಕೊಡಮಾಡುವ ಗೋಲ್ಡನ್​ ಪಾಸ್​ ಮೂಲಕ ನಿಗಮದ ಯಾವುದೇ ಬಸ್ಸಿನಲ್ಲಿ ರಾಜ್ಯ ಹಾಗೂ ಅಂತಾರಾಜ್ಯಗಳಲ್ಲಿ ಜೀವಿತಾವಧಿವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ನೀರಜ್​ ಚೋಪ್ರಾಗೆ ಜೀವಿತಾವಧಿ ಕೊಡುಗೆ ನೀಡಿದ ಕೆಎಸ್​ಆರ್​ಟಿಸಿ; ಕನ್ನಡತಿ ಅದಿತಿ ಅಶೋಕ್​ಗೂ ಗೌರವ
ನೀರಜ್​ ಚೋಪ್ರಾಗೆ ಕೆಎಸ್​ಆರ್​ಟಿಸಿ ಗೌರವ
Follow us
TV9 Web
| Updated By: Skanda

Updated on: Aug 08, 2021 | 9:04 AM

ಟೋಕಿಯೋ ಒಲಿಂಪಿಕ್ಸ್​ನ (Tokyo Olympics) ಜಾವೆಲಿನ್‌ ತ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಶತಮಾನದ ಸಾಧನೆ ಮಾಡಿರುವ ನೀರಜ್‌ ಚೋಪ್ರಾ (Neeraj Chopra) ಅವರಿಗೆ ಇಡೀ ದೇಶವೇ ಅಭಿನಂದನೆ ಸಲ್ಲಿಸುತ್ತಿದೆ. 100 ವರ್ಷಗಳ ಬಳಿಕ ಭಾರತಕ್ಕೆ ಒಲಿಂಪಿಕ್ಸ್‌ ಕ್ರಿಡಾಕೂಟದ ಅಥ್ಲೆಟಿಕ್ಸ್​​ ವಿಭಾಗದಲ್ಲಿ ಚಿನ್ನ ಗೆದ್ದು ಕೊಟ್ಟಿರುವ ನೀರಜ್​ಗೆ ಬಿಸಿಸಿಐ, ಹರಿಯಾಣ ರಾಜ್ಯ ಸರ್ಕಾರ, ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಸೇರಿದಂತೆ ಹಲವರು ಬಹುಮಾನ ಘೋಷಿಸಿದ್ದಾರೆ. ಏತನ್ಮಧ್ಯೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ) ಕೂಡಾ ಚಿನ್ನದ ಹುಡುಗನಿಗೆ ಅಭಿನಂದನೆ ಸಲ್ಲಿಸಿ ವಿಶೇಷ ಸವಲತ್ತನ್ನು ಕಲ್ಪಿಸಿಕೊಟ್ಟಿದೆ.

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದಿರುವ ನೀರಜ್​ ಚೋಪ್ರಾಗೆ ಕೆಎಸ್​ಆರ್​ಟಿಸಿ ಗೋಲ್ಡನ್ ಪಾಸ್ ನೀಡಿದೆ. ಸಂಸ್ಥೆಯ 60 ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲೇ ಈ ವಿಶೇಷ ಗೌರವವನ್ನು ಬಂಗಾರದ ಪದಕಕ್ಕೆ ಕೊರಳೊಡ್ಡಿದ ಚೋಪ್ರಾಗೆ ಸಲ್ಲಿಸಲಾಗಿದ್ದು, ಈ ಬಗ್ಗೆ ಕೆಎಸ್​ಆರ್​ಟಿಸಿ ಅಧಿಕೃತ ಟ್ವಿಟರ್ ಅಕೌಂಟ್​ನಲ್ಲಿ ಟ್ವೀಟ್ ಮಾಡಿದೆ.

ಅನಂತ ಅನಂತ ಅಭಿನಂದನೆಗಳು. ಚಿನ್ನದ ಹುಡುಗ ನೀರಜ್ ಚೋಪ್ರಾ ಅವರ ಅತ್ಯುನ್ನತ ಸಾಧನೆಯನ್ನು ಸಂಭ್ರಮಿಸಿ ಹಾರೈಸುತ್ತಾ, ಕೆಎಸ್​ಆರ್​ಟಿಸಿಯು 60 ವಸಂತಗಳನ್ನು ಪೂರೈಸಿರುವ ಸವಿನೆನಪಿನಲ್ಲಿ ನೀರಜ್ ಚೋಪ್ರಾ ಅವರಿಗೆ ಕೆಎಸ್​ಆರ್​ಟಿಸಿ ಗೋಲ್ಡನ್ ಪಾಸ್ ನೀಡಲಾಗುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ. ಭಾರತವು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಒಟ್ಟು 7 ಪದಕಗಳನ್ನು ದಾಖಲಿಸಿ ಅತ್ಯುತ್ತಮ ಪ್ರದರ್ಶನ ನೀಡಲು ಕಾರಣರಾದ ನೀರಜ್​​ ಚೋಪ್ರಾ ನೆರವಾಗಿದ್ದು, ಅವರ ಸಾಧನೆಗೆ ಕೆಎಸ್​ಆರ್​ಟಿಸಿ ಅಭಿನಂದನೆ ಸಲ್ಲಿಸಿದೆ.

ಗೋಲ್ಡನ್ ಪಾಸ್ ವಿಶೇಷತೆ ಏನು? ಕೆಎಸ್​ಆರ್​ಟಿಸಿ ಕೊಡಮಾಡುವ ಗೋಲ್ಡನ್​ ಪಾಸ್​ ಮೂಲಕ ನಿಗಮದ ಯಾವುದೇ ಬಸ್ಸಿನಲ್ಲಿ ರಾಜ್ಯ ಹಾಗೂ ಅಂತಾರಾಜ್ಯಗಳಲ್ಲಿ ಜೀವಿತಾವಧಿವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದು ಗೌರವ ಸೂಚಕವಾಗಿ ಕೊಡಲಾಗುವ ಸವಲತ್ತಾಗಿದ್ದು, ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ ಕಾರಣಕ್ಕಾಗಿ ನೀರಜ್​ ಚೋಪ್ರಾ ಅವರಿಗೆ ಇದನ್ನು ಕೆಎಸ್​ಆರ್​ಟಿಸಿ ನೀಡಿದೆ.

ಅದಿತಿ ಅಶೋಕ್​ಗೂ ಉಚಿತ ಪಾಸ್ ಪದಕ ಗೆಲ್ಲುವುದು ಸಾಧ್ಯವಾಗದಿದ್ದರೂ ಗಾಲ್ಫ್​ ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹೃದಯ ಗೆದ್ದ ಕನ್ನಡತಿ ಅದಿತಿ ಅಶೋಕ್​ ಅವರಿಗೂ ಕೆಎಸ್​ಆರ್​ಟಿಸಿ ಉಚಿತ ಪಾಸ್​ ನೀಡುವುದಾಗಿ ಘೋಷಿಸಿದೆ. ಒಲಿಂಪಿಕ್​ನಲ್ಲಿ ಅದ್ಭುತ ಆಟವಾಡಿದ ಕನ್ನಡದ ಕುವರಿ, ಅರ್ಜುನ ಪ್ರಶಸ್ತಿ ವಿಜೇತೆ ಅದಿತಿ ಅಶೊಕ್​ ಅವರಿಗೆ ಕೆಎಸ್​ಆರ್​ಟಿಸಿ ಉಚಿತ ಪಾಸ್​ ನೀಡುವ ಮೂಲಕ ಅಭಿನಂದನೆ ಸಲ್ಲಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.

ಇದನ್ನೂ ಓದಿ: ಕೂದಲೆಳೆಯಲ್ಲಿ ಸೋಲು ಅನುಭವಿಸಿದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಮೂಲತಃ ಬಾಗಲಕೋಟೆಯವರು; ಇನ್ನಷ್ಟು ವಿವರ ಇಲ್ಲಿದೆ 

Tokyo Olympics: ಬಂಗಾರ ಗೆದ್ದ ನೀರಜ್​ಗೆ ತರಬೇತಿ ನೀಡಿದ್ದು ನಮ್ಮ ಹೆಮ್ಮೆಯ ಕನ್ನಡಿಗ ಕಾಶೀನಾಥ್ ನಾಯ್ಕ್​!

(KSRTC announce Golden Bus Pass to Olympic Gold Medalist Neeraj Chopra and Free pass to Aditi Ashok)

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ