Sign In

By signing in or creating an account, you agree with Associated Broadcasting Company's Terms & Conditions and Privacy Policy.

Neeraj Chopra Stadium: ಪುಣೆಯ ಆರ್ಮಿ ಕ್ರೀಡಾಂಗಣಕ್ಕೆ ಚಿನ್ನದ ಹುಡುಗ ನೀರಜ್ ಚೋಪ್ರಾ ಹೆಸರು

ಭೂಸೇನೆಯಲ್ಲಿ ಸುಬೇದಾರ್ ಆಗಿರುವ 23 ವರ್ಷದ ನೀರಜ್ ಜತೆಗೆ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಇತರ ಸೈನಿಕರನ್ನೂ ಆರ್ಮಿ ಸ್ಪೋರ್ಟ್ಸ್ ಇನ್‌ಸ್ಟಿಟ್ಯೂಟ್‌ನಲ್ಲಿ (ಎಎಸ್‌ಐ) ನಡೆದ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

Neeraj Chopra Stadium: ಪುಣೆಯ ಆರ್ಮಿ ಕ್ರೀಡಾಂಗಣಕ್ಕೆ ಚಿನ್ನದ ಹುಡುಗ ನೀರಜ್ ಚೋಪ್ರಾ ಹೆಸರು
Neeraj Chopra Stadium
Follow us
TV9 Web
| Updated By: Vinay Bhat

Updated on: Aug 28, 2021 | 12:22 PM

ಟೋಕಿಯೊ ಒಲಿಂಪಿಕ್ಸ್​ 2020 (Tokyo Olympics) ರಲ್ಲಿ ಭಾಗವಹಿಸಿದ್ದ, ದೇಶದ ರಕ್ಷಣಾ ಪಡೆಗಳಲ್ಲಿ ಕಾರ್ಯನಿರ್ವಹಿಸುವ ಕ್ರೀಡಾಪಟುಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪುಣೆಯ ಆರ್ಮಿ ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್​ನಲ್ಲಿ (ಎಎಸ್ಐ) ಸನ್ಮಾನಿಸಿದರು. ಇದೇವೇಳೆ ಪುಣೆಯ ಆರ್ಮಿ ಕ್ರೀಡಾ ಸಂಸ್ಥೆಯಲ್ಲಿರುವ ಕ್ರೀಡಾಂಗಣಕ್ಕೆ ಅಥ್ಲೀಟ್‌ ನೀರಜ್‌ ಚೋಪ್ರಾ (Neeraj Chopra Stadium) ಹೆಸರನ್ನು ನಾಮಕರಣ ಮಾಡಲಾಯಿತು.

ಟೋಕಿಯೊ ಒಲಿಂಪಿಕ್ಸ್‌ನ ಜಾವೆಲಿನ್‌ ಥ್ರೋನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಬರೆದ ನೀರಜ್‌ಗೆ ಗೌರವ ಸೂಚಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. Rajnath Singh ಇದೇ ವೇಳೆ ಒಲಿಂಪಿಯನ್ ಸೈನಿಕರ ಸಹಿ ಇದ್ದ ಶಾಲು ಒಂದನ್ನು ರಾಜ್‌ನಾಥ್ ಸಿಂಗ್ ಅವರಿಗೆ ಉಡುಗೊರೆ ನೀಡಲಾಯಿತು.

‘ಕ್ರೀಡೆಗೆ ಪ್ರೋತ್ಸಾಹ ನೀಡಲು ಸರ್ಕಾರ ಎಲ್ಲವನ್ನೂ ಮಾಡಲಿದೆ. ಕ್ರೀಡಾ ಪ್ರೋತ್ಸಾಹಕ್ಕೆ ಸರ್ಕಾರ ಮತ್ತು ಸೇನೆ ಬದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಭಾರತ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವ ಅವಕಾಶವನ್ನು ಯಾವಾಗ ಪಡೆಯುತ್ತದೆ ಎಂಬುದನ್ನು ನಾನು ಕಾಯುತ್ತಿರುವೆ’ ಎಂದು ರಾಜ್‌ನಾಥ್ ಸಿಂಗ್ ಹೇಳಿದರು.

ಸಮಾರಂಭದಲ್ಲಿ ನೀರಜ್, ತರುಣದೀಪ್ ರಾಯ್, ಪ್ರವೀಣ್ ಜಾಧವ್ (ಇಬ್ಬರೂ ಆರ್ಚರಿಪಟುಗಳು), ಅಮಿತ್, ಮನೀಷ್ ಕೌಶಿಕ್, ಸತೀಶ್ ಕುಮಾರ್ (ಮೂವರು ಬಾಕ್ಸರ್ಗಳು), ಸಿ.ಎ.ಕುಟ್ಟಪ್ಪ (ಬಾಕ್ಸಿಂಗ್ ಕೋಚ್), ಚೋಟೆಲಾಲ್ ಯಾದವ್ (ಬಾಕ್ಸರ್ ಮೇರಿ ಕೋಮ್ ಅವರ ಕೋಚ್), ದೀಪಕ್ ಪೂನಿಯಾ (ಕುಸ್ತಿಪಟು), ಅರ್ಜುನ್ ಲಾಲ್ ಜಾಟ್ ಮತ್ತು ಅರವಿಂದ್ ಸಿಂಗ್ (ರೋಯಿಂಗ್ ಪಟುಗಳು), ವಿಷ್ಣು ಸರವಣನ್ (ಸೇಲರ್) ಅವರನ್ನು ಸನ್ಮಾನಿಸಲಾಯಿತು.

2006ರಲ್ಲಿ ಆರ್ಮಿ ಕ್ರೀಡಾಂಗಣ ನಿರ್ಮಾಣವಾಗಿತ್ತು. ಈ ಕ್ರೀಡಾಂಗಣವು 400 ಮೀಟರ್ ಸಿಂಥೆಟಿಕ್‌ ಟ್ರ್ಯಾಕ್‌ ಹಾಗೂ ವೀಕ್ಷಕರ ಗ್ಯಾಲರಿಯನ್ನು ಒಳಗೊಂಡಿದೆ. 23 ವರ್ಷದ ನೀರಜ್ ಚೋಪ್ರಾ ಕೂಡಾ ಸೈನ್ಯದಲ್ಲಿ ಸುಬೇದಾರ್ ಹುದ್ದೆಯನ್ನು ಹೊಂದಿದ್ದು, ಅಥ್ಲೆಟಿಕ್ಸ್‌ ವಿಭಾಗದಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದುಕೊಟ್ಟ ಏಕೈಕ ಸಾಧಕ ಎನಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ನೀರಜ್‌ ಚೋಪ್ರಾ 87.58 ಮೀಟರ್ ದೂರ ಜಾವಲಿನ್ ಥ್ರೋ ಮಾಡುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು.

Cheteshwar Pujara: 968 ದಿನಗಳ ಬಳಿಕ ಪೂಜಾರ ಬ್ಯಾಟ್​ನಿಂದ- 645 ದಿನಗಳ ಬಳಿಕ ಕೊಹ್ಲಿ ಬ್ಯಾಟ್​ನಿಂದ ಸಿಡಿಯುವುದೇ ಶತಕ?

India vs England: ವಿರಾಟ್ ಕೊಹ್ಲಿಗೆ ಬೇಕು ಕೇವಲ 11 ರನ್: ಸೃಷ್ಟಿಯಾಗಲಿದೆ ಹೊಸ ದಾಖಲೆ

(Neeraj Chopra Rajnath Singh Renames Army Sports Institute Stadium In Pune After Neeraj Chopra)

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ