Independence Day: ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದ ಭಾರತದ ಒಲಿಂಪಿಕ್ ವೀರರು
ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಒಲಿಂಪಿಕ್ಸ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಎಲ್ಲಾ ಕ್ರೀಡಾಳುಗಳಿಗೆ ಅಭಿನಂದನೆ ಸಲ್ಲಿಸಿದರು.
ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆಯಲ್ಲಿ ಇಂದು 75ನೇ ಸ್ವಾತಂತ್ರ್ಯೋತ್ಸವದ (Independence Day) ಅಂಗವಾಗಿ ಪ್ರಧಾನಿ ಮೋದಿ (Narendra Modi) ಧ್ವಜಾರೋಹಣ ಕಾರ್ಯಕ್ರಮದಲ್ಲಿ ಈ ಬಾರಿಯ ಟೋಕಿಯೋ ಒಲಿಂಪಿಕ್ಸ್ನಲ್ಲಿ (Tokyo Olympics) ಭಾರತಕ್ಕೆ ಪದಕ ತಂದುಕೊಟ್ಟ ವೀರರು ಭಾಗಿಯಾದರು. ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧೂ, ಜ್ವಾವೆಲಿನ್ ಥ್ರೋ ಸ್ಟಾರ್, ಚಿನ್ನದ ಹುಡುಗ ನೀರಜ್ ಚೋಪ್ರಾ, ವೈಟ್ ಲಿಫ್ಟರ್ ಮೀರಾಬಾಯಿ ಚಾನು, ಕುಸ್ತಿಪಟು ರವಿಕುಮಾರ್ ದಹಿಯಾ, ಬಜರಂಗ್ ಪೂನಿಯಾ ಸೇರಿದಂತೆ ಹಾಕಿ ಆಟಗಾರರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಒಲಿಂಪಿಕ್ಸ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಎಲ್ಲಾ ಕ್ರೀಡಾಳುಗಳಿಗೆ ಅಭಿನಂದನೆ ಸಲ್ಲಿಸಿದರು. ಒಲಿಂಪಿಕ್ಸ್ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ್ದ ಕ್ರೀಡಾಪಟುಗಳು ಇವತ್ತು ಇಲ್ಲಿದ್ದಾರೆ. ಅವರು ನಮ್ಮ ಹೃದಯ ಗೆದ್ದಿರುವುದಷ್ಟೇ ಅಲ್ಲ ಭವಿಷ್ಯದ ತಲೆಮಾರುಗಳಿಗೆ ಪ್ರೇರಣೆಯಾಗಿದ್ಧಾರೆ ಎಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದರು.
ಇನ್ನೂ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ಶನಿವಾರ ಮಾತನಾಡಿದ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು, ಇತ್ತೀಚೆಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ಮಾಡಿದ್ದಾರೆ. ಭಾರತದ 121 ವರ್ಷಗಳ ಒಲಿಂಪಿಕ್ ಇತಿಹಾಸದಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಹೆಣ್ಣುಮಕ್ಕಳು ಮಹತ್ವದ ಸೆಣೆಸಾಟ ತೋರಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳಿಗೂ ಹೆಚ್ಚಿನ ಅವಕಾಶಗಳನ್ನು ಒದಗಿಸಬೇಕು” ಎಂದರು.
ಭಾರತಕ್ಕೆ ಈ ಒಲಿಂಪಿಕ್ಸ್ ತುಂಬಾನೆ ವಿಶೇಷವಾಗಿತ್ತು. ಯಾಕಂದ್ರೆ ಒಲಿಂಪಿಕ್ ವೊಂದರಲ್ಲಿ ಒಟ್ಟು 7 ಪದಕಗಳನ್ನು ಜಯಿಸಿ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತವು ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿದೆ. ಜಾವಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದರು. 120 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಹೆಗ್ಗಳಿಕೆಗೆ ನೀರಜ್ ಪಾತ್ರರಾಗಿದ್ದಾರೆ. ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದರು.
ಅಂತೆಯೆ ಪುರುಷರ ಕುಸ್ತಿ ವಿಭಾಗದಲ್ಲಿ ರವಿಕುಮಾರ್ ದಹಿಯಾ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. 65 ಕೆಜಿ ಪುರುಷರ ಕುಸ್ತಿ ವಿಭಾಗದಲ್ಲಿ ಭಜರಂಗ್ ಪೂನಿಯಾ ಕಂಚಿನ ಪದಕಕ್ಕೆ ಕೊರಳೊಡ್ಡಿದರು. ದಶಕಗಳ ಬಳಿಕ ಒಲಿಂಪಿಕ್ ಟೂರ್ನಿಯಲ್ಲಿ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಭಾರತದ ಮಹಿಳಾ ಬಾಕ್ಸರ್ ಲವ್ಲಿನಾ ಬೊರ್ಗೊಹೇನ್ ಮಹಿಳೆಯರ ವೆಲ್ಟರ್ ವೇಟ್ ಕಂಚಿನ ಪದಕ ಪಡೆದರು. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಪಿವಿ ಸಿಂಧೂ ಕಂಚಿನ ಪದಕಕ್ಕೆ ಮುತ್ತಿಟ್ಟರು.
ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಇಲ್ಲಿವೆ ಸುಂದರ ಕ್ಷಣದ ಫೋಟೋಗಳು
ಸ್ವಸಹಾಯ ಸಂಘಗಳಿಗೆ ಇ-ಕಾಮರ್ಸ್ ಮಾರುಕಟ್ಟೆ ಸೌಲಭ್ಯ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಪ್ರಧಾನಿ ಮೋದಿ ಘೋಷಣೆ
(Neeraj Chopra Sindhu Mirabai Chanu highlight Indias Olympic contingent at 75th Independence Day celebrations)
Published On - 12:46 pm, Sun, 15 August 21