AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics 2020: ಪದಕಕ್ಕಾಗಿ ಒಂದು ಹೆಜ್ಜೆ: ಒಲಿಂಪಿಕ್ಸ್​ನಲ್ಲಿ ಇಂದು ಭಾರತಕ್ಕೆ 2 ಪಂದ್ಯ

Indian Hockey Team: ಪುರಷರ ಹಾಕಿ ಕ್ವಾರ್ಟರ್ ಫೈನಲ್​​ನಲ್ಲಿ ಭಾರತವು ಗ್ರೇಟ್ ಬ್ರಿಟನ್ ಸವಾಲನ್ನು ಎದುರಿಸಲಿದ್ದು, ಈ ಪಂದ್ಯದಲ್ಲಿ ಭಾರತ ಗೆದ್ದರೆ 41 ವರ್ಷಗಳ ಬಳಿಕ ಭಾರತ ಸೆಮಿಫೈನಲ್ ಪ್ರವೇಶಿಸಲಿದೆ.

Tokyo Olympics 2020: ಪದಕಕ್ಕಾಗಿ ಒಂದು ಹೆಜ್ಜೆ: ಒಲಿಂಪಿಕ್ಸ್​ನಲ್ಲಿ ಇಂದು ಭಾರತಕ್ಕೆ 2 ಪಂದ್ಯ
tokyo olympics
TV9 Web
| Updated By: ಝಾಹಿರ್ ಯೂಸುಫ್|

Updated on:Aug 01, 2021 | 3:41 PM

Share

ಟೋಕಿಯೊ ಒಲಿಂಪಿಕ್ಸ್ ಅಂಗಳದಲ್ಲಿ ಇಂದು ಭಾರತಕ್ಕೆ ಎರಡು ಮಹತ್ವದ ಪಂದ್ಯಗಳಿರಲಿವೆ. ಮೊದಲ ಪಂದ್ಯದಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಚೀನಾದ ಎಡಗೈ ಶಟ್ಲರ್ ಬಿಂಗ್ಜಿಯಾವೊ ವಿರುದ್ದ ಕಂಚಿನ ಪದಕಕ್ಕಾಗಿ ಸರ್ಧಿಸಲಿದ್ದಾರೆ. ಹಾಗೆಯೇ 2ನೇ ಪಂದ್ಯದಲ್ಲಿ ಭಾರತೀಯ ಹಾಕಿ ತಂಡ ಗ್ರೇಟ್ ಬ್ರಿಟನ್ ವಿರುದ್ದ ಕ್ವಾರ್ಟರ್ ಫೈನಲ್ ಆಡಲಿದೆ.

ವಿಶ್ವದ 7 ನೇ ಕ್ರಮಾಂಕದ ಪಿವಿ ಸಿಂಧು, 9ನೇ ಸ್ಥಾನದಲ್ಲಿರುವ ಚೀನಾದ ಬಿಂಗ್ಜಿಯಾವೊ ವಿರುದ್ದ ಆಡಲಿದ್ದು, ಇಬ್ಬರು ಇದೇ ಮೊದಲ ಬಾರಿ ಒಲಿಂಪಿಕ್ಸ್​ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ಈ ಪಂದ್ಯವು ಟೋಕಿಯೊ ಒಲಿಂಪಿಕ್ ವಿಲೇಜ್ ನ ಕೋರ್ಟ್ ನಂ .1 ರಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 5 ರಿಂದ ಶುರುವಾಗಲಿರುವ ಕಂಚಿನ ಪದಕಕ್ಕಾಗಿ ಹೋರಾಟವನ್ನು ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್​ ಮೂಲಕ ಆನ್‌ಲೈನ್‌ನಲ್ಲೂ ಕೂಡ ನೋಡಬಹುದಾಗಿದೆ.

ಇನ್ನು ಪುರಷರ ಹಾಕಿ ಕ್ವಾರ್ಟರ್ ಫೈನಲ್​​ನಲ್ಲಿ ಭಾರತವು ಗ್ರೇಟ್ ಬ್ರಿಟನ್ ಸವಾಲನ್ನು ಎದುರಿಸುತ್ತಿದ್ದು, ಈ ಪಂದ್ಯದಲ್ಲಿ ಭಾರತ ಗೆದ್ದರೆ 41 ವರ್ಷಗಳ ಬಳಿಕ ಭಾರತ ಸೆಮಿಫೈನಲ್ ಪ್ರವೇಶಿಸಲಿದೆ. ಇದಕ್ಕೂ ಮುನ್ನ ಭಾರತ 1980ರ ಮಾಸ್ಕೋ ಒಲಿಂಪಿಕ್ಸ್‌ನಲ್ಲಿ ಕೊನೆಯ ಬಾರಿ ಸೆಮಿಫೈನಲ್ ಆಡಿತ್ತು.

ಗ್ರೂಪ್ ಹಂತದಲ್ಲಿ ಭಾರತದ ಪ್ರದರ್ಶನವು ಗ್ರೇಟ್ ಬ್ರಿಟನ್ ಗಿಂತ ಉತ್ತಮವಾಗಿದೆ. ಈ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಆಸ್ಟ್ರೇಲಿಯಾ ಇದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಇನ್ನು ಗ್ರೇಟ್ ಬ್ರಿಟನ್ ತಂಡವು ತನ್ನ ಗುಂಪಿನಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಕ್ವಾರ್ಟರ್ ಫೈನಲ್ ಪಂದ್ಯವು ಓಯಿ ಹಾಕಿ ಕ್ರೀಡಾಂಗಣದ ನಾರ್ತ್​ ಪಿಚ್ ನಲ್ಲಿ ನಡೆಯಲಿದೆ.

ಭಾರತೀಯ ಕಾಲಮಾನ ಸಂಜೆ 5.30 ಕ್ಕೆ ಪಂದ್ಯ ಆರಂಭವಾಗಲಿದ್ದು, ಚಾನೆಲ್ ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್​ ಮೂಲಕ ಕೂಡ ಭಾರತ-ಗ್ರೇಟ್ ಬ್ರಿಟನ್ (ಇಂಗ್ಲೆಂಡ್) ನಡುವಣ ಕ್ವಾರ್ಟರ್ ಫೈನಲ್ ನೋಡಬಹುದಾಗಿದೆ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

ಇದನ್ನೂ ಓದಿ: LICಯ ವಿಶೇಷ ಯೋಜನೆ: 200 ರೂ. ಹೂಡಿಕೆ ಮಾಡಿ, 28 ಲಕ್ಷ ರೂ. ಪಡೆಯಿರಿ

(PV Sindhu faces Bing Jiao for bronze; Indian men play againist Great Britain in hockey)

Published On - 3:41 pm, Sun, 1 August 21

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್