PV Sindhu: ಒಲಿಂಪಿಕ್ಸ್​ನಲ್ಲಿ ಈ ಸಾಧನೆ ಮಾಡಿದ್ದು ಇವರಿಬ್ಬರೇ..!

Tokyo Olympics 2020: ಕ್ರಾಸ್ ಕೋರ್ಟ್ ಆಟದ ಮೂಲಕ ಗಮನ ಸೆಳೆದ ಸಿಂಧು ಒಂದು ಹಂತದಲ್ಲಿ ಹೀ ಬಿಂಗ್ಜಿಯಾವೊ ವಿರುದ್ದ ಮೇಲುಗೈ ಸಾಧಿಸಿದ್ದರು.

PV Sindhu: ಒಲಿಂಪಿಕ್ಸ್​ನಲ್ಲಿ ಈ ಸಾಧನೆ ಮಾಡಿದ್ದು ಇವರಿಬ್ಬರೇ..!
Tokyo Olympics 2020
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 01, 2021 | 10:28 PM

ಟೋಕಿಯೋ ಒಲಿಂಪಿಕ್ಸ್​ನಲ್ಲಿ (Tokyo Olympics 2020) ಭಾರತದ ಬಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಹೊಸ ಇತಿಹಾಸ ನಿರ್ಮಿಸಿದ್ದಾರೆ. 3ನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಚೀನಾದ ಹೀ ಬಿಂಗ್ಜಿಯಾವೊ ಅವರನ್ನು 21-13, 21-15 ಅಂತರದಿಂದ ಸೋಲಿಸುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಬಿಂಗ್ಜಿಯಾವೊ ವಿರುದ್ದ ಮೊದಲ ಸುತ್ತಿನ ಆರಂಭದಲ್ಲೇ ಸಿಂಧು ಮೇಲುಗೈ ಸಾಧಿಸಿದ್ದರು . ಸಿಂಧು ಅವರ ಭರ್ಜರಿ ಟೈಮಿಂಗ್ ಹಾಗೂ ನಿಖರತೆ ಮುಂದೆ ಮೊದಲ ಸುತ್ತಿನಲ್ಲಿ ಚೀನಾ ಆಟಗಾರ್ತಿ 21-13 ರಿಂದ ಸೋಲೊಪ್ಪಿಕೊಂಡರು. ಇನ್ನು ಮೊದಲ ಸುತ್ತನ್ನು ಗೆದ್ದ ಆತ್ಮ ವಿಶ್ವಾಸದಲ್ಲಿ ಇಡೀ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಸಿಂಧು 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ನೀಡಿದರು.

ಕ್ರಾಸ್ ಕೋರ್ಟ್ ಆಟದ ಮೂಲಕ ಗಮನ ಸೆಳೆದ ಸಿಂಧು ಒಂದು ಹಂತದಲ್ಲಿ ಹೀ ಬಿಂಗ್ಜಿಯಾವೊ ವಿರುದ್ದ ಮೇಲುಗೈ ಸಾಧಿಸಿದ್ದರು. ಆದರೆ ಕಂಬ್ಯಾಕ್ ಮಾಡುವಲ್ಲಿ ಯಶಸ್ವಿಯಾದ ಹೀ ಬಿಂಗ್ಜಿಯಾವೊ ಭರ್ಜರಿ ಪೈಪೋಟಿ ನೀಡಿದರು. ಇದಾಗ್ಯೂ ಅಂತಿಮವಾಗಿ 21-15 ಅಂತರದಿಂದ ಸೋಲುಣಿಸಿದ ಸಿಂಧು ಭಾರತಕ್ಕೆ ಕಂಚಿನ ಪದಕಕ್ಕೆ ಕೊರೊಳೊಡ್ಡಿದ್ದರು. ಈ ಗೆಲುವಿನೊಂದಿಗೆ ಒಲಿಂಪಿಕ್ಸ್​ನಲ್ಲಿ ಭಾರತಕ್ಕಾಗಿ 2 ಪದಕ ಗೆದ್ದುಕೊಟ್ಟ 2ನೇ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾದರು.

ಇದಕ್ಕೂ ಮುನ್ನ ಕುಸ್ತಿಪಟು ಸುಶೀಲ್ ಕುಮಾರ್ 2008 ರ ಬೀಜಿಂಗ್​ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು. ಅಲ್ಲದೆ ಕಂಚು ಗೆದ್ದರೆ ಮತ್ತು ನಂತರ ಅದನ್ನು 2012 ರ ಲಂಡನ್​ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಸುಶೀಲ್ ಕುಮಾರ್ ಸತತ ಎರಡು ಪದಕ ಗೆದ್ದುಕೊಟ್ಟ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದರು.

ಈ ಹಿಂದೆ 2016ರಲ್ಲಿ ರಿಯೋ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದ ಸಿಂಧು ಈ ಬಾರಿ ಕಂಚಿನ ಪದಕ ಗೆದ್ದು ಸುಶೀಲ್ ಕುಮಾರ್ ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ. ಅಷ್ಟೇ ಅಲ್ಲದೆ ಭಾರತಕ್ಕಾಗಿ ಸತತ 2 ಪದಕ ಗೆದ್ದುಕೊಟ್ಟ ಮೊದಲ ಮಹಿಳೆ ಎಂಬ ದಾಖಲೆಯನ್ನು ಸಿಂಧು ತಮ್ಮದಾಗಿಸಿಕೊಂಡರು.

ಹೀಗೆ 1947ರ ಬಳಿಕ ಭಾರತಕ್ಕಾಗಿ ಸತತ ಎರಡು ಪದಕಗಳನ್ನು ಗೆದ್ದುಕೊಟ್ಟ ಹೆಗ್ಗಳಿಕೆ ಸುಶೀಲ್ ಕುಮಾರ್ ಹಾಗೂ ಪಿವಿ ಸಿಂಧುಗೆ ಸಲ್ಲುತ್ತದೆ. ಇವರಿಬ್ಬರಲ್ಲದೇ ಒಲಿಂಪಿಕ್ಸ್​ನಲ್ಲಿ ಅಂಗಳದಲ್ಲಿ ಸ್ವತಂತ್ರ ಭಾರತದ ಯಾವುದೇ ಕ್ರೀಡಾಪಟು ಇಂತಹ ಸಾಧನೆ ಮಾಡಿಲ್ಲ. ಇದಾಗ್ಯೂ 1900 ರಲ್ಲಿ ನಾರ್ಮನ್ ಪ್ರಿಚರ್ಡ್  ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಬೆಳ್ಳಿ ಪದಕಗಳನ್ನು ಭಾರತವನ್ನು ಪ್ರತಿನಿಧಿಸಿ ಗೆದ್ದಿದ್ದರು. ಆದರೆ ಅದು ಸ್ವತಂತ್ರ ಪೂರ್ವವಾಗಿರುವುದರಿಂದ ಅದನ್ನು ಭಾರತದ ಪದಕ ಪಟ್ಟಿಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಇನ್ನು ಹಾಕಿಯಲ್ಲಿ ಭಾರತ 8 ಬಾರಿ ಪದಕ ಗೆದ್ದಿದ್ದರೂ ಅದನ್ನು ಒಂದು ತಂಡವಾಗಿ ಪರಿಗಣಿಸಲಾಗುತ್ತದೆ. ಇದಾಗ್ಯೂ ಏಕಾಂಗಿ ಹೋರಾಟದ ಮೂಲಕ ಸತತ 2 ಪದಕ ಗೆದ್ದಿರೋದು ಸಿಂಧು ಹಾಗೂ ಸುಶೀಲ್ ಕುಮಾರ್ ಮಾತ್ರ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

ಇದನ್ನೂ ಓದಿ: LICಯ ವಿಶೇಷ ಯೋಜನೆ: 200 ರೂ. ಹೂಡಿಕೆ ಮಾಡಿ, 28 ಲಕ್ಷ ರೂ. ಪಡೆಯಿರಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ