Tokyo Olympics: ಮೂರನೇ ಸುತ್ತಿಗೆ ಪ್ರವೇಶಿಸಿದ ಶರತ್ ಕಮಲ್: ಭವಾನಿ ದೇವಿಗೆ ಸೋಲು

ಭವಾನಿ ದೇವಿ ಸೇಬರ್ ಫೆನ್ಸಿಂಗ್‍ನ 32ನೇ ಸುತ್ತಿನಲ್ಲಿ ವಿಶ್ವದ ನಂ. 3 ಆಟಗಾರ್ತಿ ಮ್ಯಾನೊನ್ ಬ್ರುನೆಟ್ ವಿರುದ್ಧ 7-15 ಅಂತರದಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.

Tokyo Olympics: ಮೂರನೇ ಸುತ್ತಿಗೆ ಪ್ರವೇಶಿಸಿದ ಶರತ್ ಕಮಲ್: ಭವಾನಿ ದೇವಿಗೆ ಸೋಲು
​Sharath Kamal
Follow us
TV9 Web
| Updated By: Vinay Bhat

Updated on: Jul 26, 2021 | 9:25 AM

ಟೋಕಿಯೋ ಒಲಿಂಪಿಕ್ಸ್​ನ (Tokyo Olympics) ನಾಲ್ಕನೇ ದಿನವೂ ಭಾರತದಿಂದ ಹೇಳಿಕೊಳ್ಳುವಂತಹ ಆಟ ಬರುತ್ತಿಲ್ಲ. ಚೊಚ್ಚಲ ಬಾರಿಯ ಒಲಿಂಪಿಕ್​ನಲ್ಲಿ ಭವಾನಿ ದೇವಿ (Bhavani Devi) ಸೇಬರ್ ಫೆನ್ಸಿಂಗ್‍ನಲ್ಲಿ ತುನಿಶಿಯಾ ದೇಶದ ನಡಿಯ ಅಝೀಝಿ ಅವರನ್ನು 15-3 ಅಂತರದಿಂದ ಸೋಲಿಸುವುದರ ಮೂಲಕ ಪದಕದ ಭರವಸೆ ಮೂಡಿಸಿದ್ದರು. ಆದರೆ ಆ ಆಸೆ ಕೂಡ ನಿರಾಸೆಯಾಗಿದೆ.

ಭವಾನಿ ದೇವಿ ಅವರು ಇದೇ ಮೊದಲ ಬಾರಿಗೆ ಭಾರತದ ಪರ ಸೈಬರ್ ಫೆನ್ಸಿಂಗ್ ಕ್ರೀಡೆಯಲ್ಲಿ ಭಾಗವಹಿಸಿದ ಕ್ರೀಡಾಪಟು ಆಗಿದ್ದಾರೆ. ಆಡಿದ ಮೊದಲನೇ ಪಂದ್ಯದಲ್ಲಿಯೇ ಭವಾನಿ ದೇವಿ ಜಯ ಸಾಧಿಸುವುದರ ಮೂಲಕ ಉತ್ತಮ ಆರಂಭ ಪಡೆದುಕೊಂಡರು. ಆದರೆ, ಎರಡನೇ ಸುತ್ತಿನಲ್ಲಿ ರಿಯೋ ಒಲಿಂಪಿಕ್ಸ್​ನ ಸೆಮಿ ಫೈನಲಿಸ್ಟ್ ಫ್ರೆಂಚ್​ನ ಮ್ಯಾನೊನ್ ಬ್ರುನೆಟ್ ವಿರುದ್ಧ ಗೆಲುವು ಸುಲಭವಾಗಿರಲಿಲ್ಲ.

ಭವಾನಿ ದೇವಿ ಸೇಬರ್ ಫೆನ್ಸಿಂಗ್‍ನ 32ನೇ ಸುತ್ತಿನಲ್ಲಿ ವಿಶ್ವದ ನಂ. 3 ಆಟಗಾರ್ತಿ ಮ್ಯಾನೊನ್ ಬ್ರುನೆಟ್ ವಿರುದ್ಧ 7-15 ಅಂತರದಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.

ಇತ್ತ ಟೇಬಲ್ ಟೆನಿಸ್ ಎರಡನೇ ರೌಂಡ್‌ನಲ್ಲಿ ಭಾಗವಹಿಸಿದ ಭಾರತದ ಶರತ್ ಕಮಲ್ ಪೋರ್ಚುಗಲ್ ದೇಶದ ಟಿಯಾಗೋ ಅಪೊಲೊನಿಯಾ ವಿರುದ್ಧ 4-2 ಅಂತರದಲ್ಲಿ ಜಯ ಸಾಧಿಸಿದರು. ಶರತ್ ಕಮಲ್ ಟಿಯಾಗೋ ಅಪೊಲೊನಿಯಾ ವಿರುದ್ಧ 2-11, 11-8, 11-5, 9-11, 11-6 ಹಾಗೂ 11-9 ಸೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿ ಪದಕದ ಆಸೆಯನ್ನು ಜೀವಂತವಾಗಿ ಉಳಿಸಿಕೊಂಡಿದ್ದಾರೆ.

ಇತ್ತ ಭಾರತದ ತ್ರಿಮೂರ್ತಿಗಳಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕಜಕಿಸ್ತಾನದ ವಿರುದ್ಧ 6-2 ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಬಿಲ್ಲುಗಾರರಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಇವರು ಇದು ಬೆಳಗ್ಗೆ 10:15ಕ್ಕೆ ಕೊರಿಯಾ ಸ್ಪರ್ಧಿಗಳ ವಿರುದ್ಧ ಸೆಣಸಾಡಲಿದ್ದಾರೆ.

Tokyo Olympic 2020: ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ

IND vs SL: ಪಂದ್ಯ ಆರಂಭಕ್ಕೂ ಮುನ್ನ ಶ್ರೀಲಂಕಾದ ರಾಷ್ಟ್ರಗೀತೆ ಹಾಡಿದ ಹಾರ್ದಿಕ್ ಪಾಂಡ್ಯ: ವಿಡಿಯೋ ವೈರಲ್

(Tokyo Olympics 2020 Bhavani Devi loses Sharath Kamal advances to 3rd round)

ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ಊಟ ಮಾಡುವಾಗ ಮಾತನಾಡಬಾರದು ಯಾಕೆ? ಇಲ್ಲಿದೆ ಆಧ್ಯಾತ್ಮಿಕ ಹಿನ್ನೆಲೆ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ದಿನ ಭವಿಷ್ಯ: ಗುರು ಅನುಗ್ರಹದ ಈ ದಿನ ಯಾವ ರಾಶಿವರಿಗೆಲ್ಲ ಶುಭ ಫಲ ನೋಡಿ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ