Lovlina Borgohain: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಯುವ ಬಾಕ್ಸರ್ ಲವ್ಲಿನಾ
Tokyo Olympics: ಸೆಮಿ ಫೈನಲ್ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲು ಕಾಣುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ
ಟೋಕಿಯೋ ಒಲಿಂಪಿಕ್ಸ್‌ನಲ್ಲಿ (Tokyo Olympics) ಭಾರತದ ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ (Lovlina Borgohain) ಅವರು ಫೈನಲ್ಗೇರಲು ವಿಫಲರಾಗಿದ್ದಾರೆ. ಇಂದು ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲು ಕಾಣುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಮೇರಿ ಕೋಮ್ ನಂತರ ಒಲಿಂಪಿಕ್ ಪದಕ ಗಳಿಸಿದ ಎರಡನೇ ಭಾರತೀಯ ಮಹಿಳೆ ಅವರೆನಿಸಿದ್ದಾರೆ. ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಏಕೈಕ ಬಾಕ್ಸರ್ ಅವರೆನಿಸಿದ್ದಾರೆ. ಈ ಮೂಲಕ ಭಾರತದ ಪದಕದ ಸಂಖ್ಯೆ ಮೂರಕ್ಕೇರಿದೆ.
ಮಹಿಳಾ ಬಾಕ್ಸಿಂಗ್ನ 69 ಕೆಜಿ ವಿಭಾಗದ ಸೆಮಿಫೈನಲ್ನಲ್ಲಿ ಲವ್ಲಿನಾ, ಎದುರಾಳಿ ಅಗ್ರ ಶ್ರೇಯಾಂಕಿತೆ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ ತಿರುಗಿ ಬೀಳಲು ಸಾಧ್ಯವಾಗಲೇ ಇಲ್ಲ. ಬುಸೆನಾಜ್ ಅವರ ಆಕ್ರಮಣಕಾರಿ ಆಟಕ್ಕೆ ಸೋಲು ಅನುಭವಿಸಿದರು. ಆಗಲೇ ಸೆಮಿಫೈನಲ್ಗೆ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದ ಲವ್ಲಿನಾ, ಚಿನ್ನದ ಪದಕ ಗುರಿಯನ್ನಿರಿಸಿದ್ದರು. ಆದರೆ ಅಂತಿಮ ನಾಲ್ಕರ ಘಟ್ಟದಲ್ಲಿ ಎಡವಿದ್ದಾರೆ.
Bronze for #IND!
Lovlina Borgohain earns a bronze medal in the women’s #Boxing welterweight category!@WeAreTeamIndia pic.twitter.com/lmIj0mvxuj
— Olympics (@Olympics) August 4, 2021
ಇದಕ್ಕೂ ಮುನ್ನ ಟೋಕಿಯೋ ಒಲಂಪಿಕ್ಸ್ ಕ್ರೀಡಾ ಕೂಟದ ಮಹಿಳಾ ಬಾಕ್ಸಿಂಗ್‌ನಲ್ಲಿ ವಾಲ್ಟರ್ ಬೆಲ್ಟ್ 64 ರಿಂದ 69 ಕೆಜಿ ವಿಭಾಗದಲ್ಲಿ ನಡೆದ ಕ್ವಾರ್ಟರ್ಫೈನಲ್ ಕಾದಾಟದಲ್ಲಿ ಚೈನೀಸ್ ತೈಪೆಯ ಮಾಜಿ ಚಾಂಪಿಯನ್ ನಿಯೆನ್ ಚಿನ್ ಚೆನ್ ಅವರನ್ನು ಲವ್ಲಿನಾ ಬೊರ್ಗೊಹೈನ್ ಅವರು ಸೋಲಿಸಿ ನಾಲ್ಕರ ಘಟ್ಟಕ್ಕೆ ಕಾಲಿಟ್ಟಿದ್ದರು. ಮೊದಲಿಗೆ ಮುಯಿತೈ ಪಟುವಾಗಿದ್ದ 23 ವರ್ಷದ ಲವ್ಲಿನಾ ಇದೀಗ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೂರನೇ ಬಾಕ್ಸರ್ ಆಗಿದ್ದಾರೆ. ವಿಜೇಂದರ್ ಸಿಂಗ್ (2008) ಮತ್ತು ಮೇರಿ ಕೋಮ್ (2012) ಮೊದಲಿಬ್ಬರು.
ಲವ್ಲಿನಾ ಬೊರ್ಗೊಹೈನ್ ಸೋತರೂ ವಿಶೇಷ ಸಾಧನೆ ಮಾಡಿದ್ದಾರೆ. ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆಲುವಿನ ಸನಿಹಕ್ಕೇರಿದ ಮೊದಲ ಭಾರತೀಯರೆನಿಸಿದ್ದಾರೆ. ಸದ್ಯ ಈ ಭಾರಿಯ ಒಲಿಂಪಿಕ್ಸ್‌ನಲ್ಲಿ ಭಾರತದ ಕಡೆಯಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬಂದಿಲ್ಲ. ಈವರೆಗೆ ಮೂರು ಪದಕಗಳನ್ನಷ್ಟೆ ಭಾರತ ಬಾಜಿಕೊಂಡಿದೆ. ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು (49 ಕೆಜಿ ವಿಭಾಗ) ಭಾರತಕ್ಕೆ ಬೆಳ್ಳಿ ಮೆರಗು ತಂದಿದ್ದಾರೆ. ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು ಕಂಚು ಗೆದ್ದಿದ್ದಾರೆ. ಇಂದು ಮಹಿಳಾ ಬಾಕ್ಸಿಂಗ್ನ 69 ಕೆಜಿ ವಿಭಾಗದ ಸೆಮಿಫೈನಲ್ನಲ್ಲಿ ಲವ್ಲಿನಾ ಸೋಲು ಅನುಭವಿಸಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
Tokyo Olympic: ಜಾವೆಲಿನ್ ಥ್ರೋನಲ್ಲಿ ಫೈನಲ್ಗೆ ಲಗ್ಗೆಯಿಟ್ಟ ಭಾರತದ ನೀರಜ್ ಚೋಪ್ರಾ
Deepak Punia: ಸೆಮಿ ಫೈನಲ್ಗೆ ಲಗ್ಗೆಯಿಟ್ಟ ರವಿ ದಹಿಯಾ, ದೀಪಕ್ ಪುನಿಯಾ: ಭಾರತಕ್ಕೆ ಪದಕದ ನಿರೀಕ್ಷೆ
(Tokyo Olympics 2020 Boxer Lovlina Borgohain wins bronze medal at the Tokyo Olympics)
Published On - 11:28 am, Wed, 4 August 21