AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಆರ್ಚರಿಯಲ್ಲಿ ಮತ್ತೆ ನಿರಾಸೆ: ಭಾರತದ ಪದಕದ ಆಸೆಗೆ ತಣ್ಣೀರೆರಚಿದ ದ. ಕೊರಿಯಾ

ಕ್ವಾರ್ಟರ್ ಫೈನಲ್​ನಲ್ಲಿ ದಕ್ಷಿಣ ಕೊರಿಯಾದ ಕಿಮ್ ವೂಜಿನ್, ಕಿಮ್ ಜೆ ಡೊಕ್ ಮತ್ತು ಒ ಜಿನ್ಹೆಕ್ ವಿರುದ್ಧ 0-6 ಅಂತರದಲ್ಲಿ ಹೀನಾಯ ಸೋಲು ಕಂಡರು. ದ. ಕೊರಿಯಾ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ.

Tokyo Olympics: ಆರ್ಚರಿಯಲ್ಲಿ ಮತ್ತೆ ನಿರಾಸೆ: ಭಾರತದ ಪದಕದ ಆಸೆಗೆ ತಣ್ಣೀರೆರಚಿದ ದ. ಕೊರಿಯಾ
Indian archery mens team
TV9 Web
| Updated By: Vinay Bhat|

Updated on:Jul 26, 2021 | 11:17 AM

Share

ಆರ್ಚರಿಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಭಾರತದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ದಕ್ಷಿಣ ಕೊರಿಯಾ ವಿರುದ್ಧ ಸೋಲುಕಂಡು ಪದಕದ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಇಂದು ಮುಂಜಾನೆ ಭಾರತದ ತ್ರಿಮೂರ್ತಿಗಳಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕಜಕಿಸ್ತಾನದ ವಿರುದ್ಧ 6-2 ಅಂತರದಿಂದ ಜಯಭೇರಿ ಬಾರಿಸಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಇವರಿಂದ ಪದಕದ ನಿರೀಕ್ಷೆಯಿತ್ತು.

ಆದರೆ, ಕ್ವಾರ್ಟರ್ ಫೈನಲ್​ನಲ್ಲಿ ದಕ್ಷಿಣ ಕೊರಿಯಾದ ಕಿಮ್ ವೂಜಿನ್, ಕಿಮ್ ಜೆ ಡೊಕ್ ಮತ್ತು ಒ ಜಿನ್ಹೆಕ್ ವಿರುದ್ಧ 0-6 ಅಂತರದಲ್ಲಿ ಹೀನಾಯ ಸೋಲು ಕಂಡರು. ದ. ಕೊರಿಯಾ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ.

ಇನ್ನೂ ಭಾರತದ ಸುತೀರ್ಥಾ ಮುಖರ್ಜಿ ಟೇಬಲ್ ಟೆನಿಸ್ ಎರಡನೇ ಸುತ್ತಿನಲ್ಲಿಯೇ ಸೋತು ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಹೊರಬಿದ್ದಿದ್ದಾರೆ. ಸ್ವೀಡನ್‌ನ ಆಟಗಾರ್ತಿ ಲಿಂಡಾ ಬರ್ಗ್ ಸ್ಟಾರ್ಮ್ ವಿರುದ್ಧ ರೋಚಕ ಜಯ ಗಳಿಸಿದ್ದ ಸುತೀರ್ಥ ಮುಖರ್ಜಿ ಭರವಸೆಯನ್ನು ಹುಟ್ಟುಹಾಕಿದ್ದರು.

ಆದರೆ, ಸುತೀರ್ಥಾ ಮುಖರ್ಜಿ ಎರಡನೇ ಸುತ್ತಿನಲ್ಲಿ ಮುಗ್ಗರಿಸಿದ್ದಾರೆ. ಪೋರ್ಚುಗಲ್ ದೇಶದ ಆಟಗಾರ್ತಿ ಫು ಯು ವಿರುದ್ಧ ಟೊಕಿಯೊ ಒಲಿಂಪಿಕ್ಸ್ ಮಹಿಳಾ ಸಿಂಗಲ್ಸ್ ಟೇಬಲ್ ಟೆನಿಸ್ ಎರಡನೇ ಸುತ್ತಿನಲ್ಲಿ ಭಾರತದ ಸುತೀರ್ಥಾ ಮುಖರ್ಜಿ 0-4 ಅಂತರದಿಂದ ಸೋಲುವುದರ ಮೂಲಕ ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.

ಇತ್ತ ಚೊಚ್ಚಲ ಬಾರಿಯ ಒಲಿಂಪಿಕ್​ನಲ್ಲಿ ಭವಾನಿ ದೇವಿ ಸೇಬರ್ ಫೆನ್ಸಿಂಗ್‍ನಲ್ಲಿ ತುನಿಶಿಯಾ ದೇಶದ ನಡಿಯ ಅಝೀಝಿ ಅವರನ್ನು 15-3 ಅಂತರದಿಂದ ಸೋಲಿಸುವುದರ ಮೂಲಕ ಪದಕದ ಭರವಸೆ ಮೂಡಿಸಿದ್ದರು. ಆದರೆ ಎರಡನೇ ಸುತ್ತಿನಲ್ಲಿ ಸೇಬರ್ ಫೆನ್ಸಿಂಗ್‍ನ ವಿಶ್ವದ ನಂ. 3 ಆಟಗಾರ್ತಿ ಮ್ಯಾನೊನ್ ಬ್ರುನೆಟ್ ವಿರುದ್ಧ 7-15 ಅಂತರದಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.

Tokyo Olympics: ಮೂರನೇ ಸುತ್ತಿಗೆ ಪ್ರವೇಶಿಸಿದ ಶರತ್ ಕಮಲ್: ಭವಾನಿ ದೇವಿಗೆ ಸೋಲು

IND vs SL: ಸ್ಟಂಪ್ ಹಿಂದೆ ಒಂದುಕ್ಷಣ ಎಂಎಸ್ ಧೋನಿಯನ್ನು ನೆನೆಯುವಂತೆ ಮಾಡಿದ ಇಶಾನ್ ಕಿಶನ್-ವಿಡಿಯೋ

(Tokyo Olympics 2020 Indian archery mens team out after losing 0-6 to top seed South Korea in quarters)

Published On - 11:15 am, Mon, 26 July 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ