Tokyo Olympics 2020: ಭಾರತ ಮಹಿಳಾ ಹಾಕಿ ತಂಡಕ್ಕೆ ಭಾರೀ ಮುಖಭಂಗ: ಸತತ ಮೂರನೇ ಸೋಲು

ಆರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಗ್ರೇಟ್ ಬ್ರಿಟನ್ ಮಹಿಳಾ ಹಾಕಿ ತಂಡ ಭಾರತವನ್ನು ಕಮ್​ಬ್ಯಾಕ್ ಮಾಡಲು ಅವಕಾಶ ಕೊಡಲೇಯಿಲ್ಲ.

Tokyo Olympics 2020: ಭಾರತ ಮಹಿಳಾ ಹಾಕಿ ತಂಡಕ್ಕೆ ಭಾರೀ ಮುಖಭಂಗ: ಸತತ ಮೂರನೇ ಸೋಲು
indian women's hockey team
Follow us
TV9 Web
| Updated By: Vinay Bhat

Updated on: Jul 28, 2021 | 9:41 AM

ಟೋಕಿಯೋ ಒಲಿಂಪಿಕ್ಸ್ (Tokyo Olympics) 2020 ರಲ್ಲಿ ಭಾರತ ಪುರುಷರ ಹಾಕಿ (Hockey Team) ತಂಡ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದರೆ, ಇತ್ತ ಮಹಿಳೆಯರ ತಂಡ ಹ್ಯಾಟ್ರಿಕ್ ಸೋಲು ಕಂಡಿದೆ. ಯುವ ಹಾಗೂ ಅನುಭವಿ ಆಟಗಾರ್ತಿಯರನ್ನು ಹೊಂದಿರುವ ಹೊರತಾಗಿಯೂ ಭಾರತದ ಮಹಿಳಾ ಹಾಕಿ ತಂಡ ಗ್ರೇಟ್ ಬ್ರಿಟನ್ ವಿರುದ್ಧ 1-4 ಗೋಲುಗಳ ಅಂತರದಲ್ಲಿ ಹೀನಾಯ ಸೋಲಿಗೆ ಶರಣಾಗಿದೆ.

ಆರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಗ್ರೇಟ್ ಬ್ರಿಟನ್ ಮಹಿಳಾ ಹಾಕಿ ತಂಡ ಭಾರತವನ್ನು ಕಮ್​ಬ್ಯಾಕ್ ಮಾಡಲು ಅವಕಾಶ ಕೊಡಲೇಯಿಲ್ಲ. ಭಾರತದ ಪರ 23ನೇ ನಿಮಿಷದಲ್ಲಿ ಶರ್ಮಿಳಾ ದೇವಿ ಒಂದು ಗೋಲು ಬಾರಿಸಿದ್ದು ಬಿಟ್ಟರೆ ಬೇರಾವ ಆಟಗಾರ್ತಿಯೂ ಗೋಲ್ ಬಾರಿಸುವಲ್ಲಿ ಯಶಸ್ವಿಯಾಗಲಿಲ್ಲ.

ಅತ್ತ ಬ್ರಿಟನ್ ಪರ ಹನ್ನ ಮಾರ್ಟಿನ್ (2ನೇ ಹಾಗೂ 19ನೇ ನಿಮಿಷ), ಲಿಲ್ಲಿ ಓಸ್ಲೆ (41ನೇ ನಿಮಿಷ), ಗ್ರೇಸ್ ಬಾಲ್ಸ್ಡನ್ (57ನೇ ನಿಮಿಷ) ಗೆಲುವಿನ ಗೋಲುಗಳನ್ನು ಬಾರಿಸಿದರು. ಭಾರತಕ್ಕೆ ಇನ್ನುಳಿದ ಎರಡು ಪಂದ್ಯ ಮಾಡು ಇಲ್ಲವೇ ಮಡಿ ಆಗಿದೆ. ಕ್ವಾರ್ಟರ್ಫೈನಲ್ ಹಂತವನ್ನು ತಲುಪಲು ಮುಂದಿನ ಎರಡು ಪಂದ್ಯಗಳಲ್ಲಿ ಗೆಲ್ಲಲೇಬೇಕಾದಲ್ಲಿ ಭಾರತ ಇದೆ.

ಇನ್ನೂ ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧೂ ಮಹಿಳಾ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಹಾಂಕಾಂಗ್‌ನ ಆಟಗಾರ್ತಿ ಹಾಗೂ 34ನೇ ಶ್ರೇಯಾಂಕ ಹೊಂದಿರುವ ಚೆಯುಂಗ್‌ ಗಾನ್‌ ಯಿ ವಿರುದ್ಧ 21-9, 21-16 ಅಂಕಗಳ ಅಂತರದಲ್ಲಿ ಚೆಯುಂಗ್‌ ಗಾನ್‌ ಯಿಯನ್ನು ಸೋಲಿಸಿ ರೌಂಡ್ 16ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.

2016ರ ರಿಯೋ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತೆ ಸಿಂಧೂ ತನ್ನ ಮೊದಲ ಸುತ್ತಿನ ಪಂದ್ಯದಲ್ಲಿ ಇಸ್ರೇಲಿನ ಕೆಸ್ನಿಯಾ ಪೊಲಿಕರ್ಪೊವಾ ಎದುರು 21-7, 21-10 ನೇರ ಗೇಮ್‌ಗಳಲ್ಲಿ ಗೆಲುವು ದಾಖಲಿಸುವ ಮೂಲಕ ಸುಲಭವಾಗಿ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿದ್ದರು. ಗ್ರೂಪ್ ‘ಜೆ’ನಲ್ಲಿ ಸ್ಥಾನ ಪಡೆದಿರುವ ಸಿಂಧೂ ಮೊದಲ ಗೇಮ್‌ನಲ್ಲಿ 13 ಅಂಕಗಳ ಭಾರೀ ಅಂತರದ ಗೆಲುವು ದಾಖಲಿಸಿದ್ದರು.

Tokyo Olympics: ರೋಚಕ ಪಂದ್ಯದಲ್ಲಿ ಪಿವಿ ಸಿಂಧೂಗೆ ಜಯ: ರೌಂಡ್ 16ಗೆ ಲಗ್ಗೆ

ಹಾರ್ದಿಕ್ ಪಾಂಡ್ಯ ಜಾಗಕ್ಕೆ ಇಬ್ಬರು ಆಟಗಾರರನ್ನು ಆಯ್ಕೆ ಮಾಡಿದ ಸುನಿಲ್ ಗವಾಸ್ಕರ್

(Tokyo Olympics 2020 Indian womens hockey team beaten 1-4 by Great Britain)

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ