AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: 8ನೇ ವಯಸ್ಸಿನಲ್ಲಿ ಅಭ್ಯಾಸ ಆರಂಭ.. ಚೊಚ್ಚಲ ಒಲಂಪಿಕ್ಸ್​ನಲ್ಲೇ ಚಿನ್ನ ಗೆದ್ದ 13 ವರ್ಷದ ಪೋರಿ!

Tokyo Olympics: ನಿಶಿಯಾ ಮೊಮೊಜಿ ಒಲಿಂಪಿಕ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಜಪಾನಿನ ಮಹಿಳಾ ಸ್ಕೇಟ್ಬೋರ್ಡರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Tokyo Olympics: 8ನೇ ವಯಸ್ಸಿನಲ್ಲಿ ಅಭ್ಯಾಸ ಆರಂಭ.. ಚೊಚ್ಚಲ ಒಲಂಪಿಕ್ಸ್​ನಲ್ಲೇ ಚಿನ್ನ ಗೆದ್ದ 13 ವರ್ಷದ ಪೋರಿ!
ಜಪಾನ್‌ನ ನಿಶಿಯಾ ಮೊಮಿಜಿ
TV9 Web
| Updated By: ಪೃಥ್ವಿಶಂಕರ|

Updated on: Jul 26, 2021 | 3:33 PM

Share

ಟೋಕಿಯೊ ಒಲಿಂಪಿಕ್ಸ್‌ನ (Tokyo Olympics) ನಾಲ್ಕನೇ ದಿನದಂದು ಹದಿಹರೆಯದ ಆಟಗಾರರು ಸದ್ದು ಮಾಡುತ್ತಿದ್ದಾರೆ. 13 ವರ್ಷದ ಇಬ್ಬರು ಬಾಲಕಿಯರು ಒಂದೇ ಆಟದಲ್ಲಿ ಸ್ಪರ್ಧಿಸಿದರು. ಇದರೊಂದಿಗೆ ಸ್ಪರ್ಧೆಯು ತುಂಬಾ ರಸಭರಿತವಾಗಿತ್ತು. ಈ ವರ್ಷದ ಒಲಿಂಪಿಕ್ಸ್‌ನಲ್ಲಿ ಸ್ಕೇಟ್‌ಬೋರ್ಡಿಂಗ್ (skateboarding) ಪಾದಾರ್ಪಣೆ ಮಾಡುತ್ತಿದೆ. ಸ್ಕೇಟ್‌ಬೋರ್ಡಿಂಗ್‌ನಲ್ಲಿ ನಡೆದ ಫೈನಲ್‌ನಲ್ಲಿ ಇಬ್ಬರು ಹುಡುಗಿಯರು ಮುಖಾಮುಖಿಯಾಗಿದ್ದರು. ಜಪಾನ್‌ನ ನಿಶಿಯಾ ಮೊಮಿಜಿ ಚಿನ್ನದ ಪದಕ ಗೆದ್ದರೆ, ಬ್ರೆಜಿಲ್‌ನ ರೈಸಾ ಲೀಲ್ ಬೆಳ್ಳಿ ಪದಕ ಗೆದ್ದಿದ್ದಾರೆ. ನಿಶಿಯಾ ಮೊಮೊಜಿ ಒಲಿಂಪಿಕ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಜಪಾನಿನ ಮಹಿಳಾ ಸ್ಕೇಟ್ಬೋರ್ಡರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮಹಿಳೆಯರ ಸ್ಕೇಟ್‌ಬೋರ್ಡಿಂಗ್ ಪಂದ್ಯಾವಳಿಯಲ್ಲಿ ಜಪಾನ್ ಕಂಚಿನ ಪದಕ ಗೆದ್ದಿದೆ. ಜಪಾನ್ ಮೂಲದ 18 ವರ್ಷದ ಫೂನಾ ನಕಯಾಮಾ ಪದಕ ಗೆದ್ದಿದ್ದಾರೆ. ಈ ಮೂವರು ಕ್ರೀಡಾಪಟುಗಳಿಗೆ ಇದು ಮೊದಲ ಒಲಿಂಪಿಕ್ಸ್ ಆಗಿದೆ. ಮೊದಲ ಒಲಿಂಪಿಕ್ಸ್‌ನಲ್ಲಿ ಈ ಮೂವರು ಕ್ರೀಡಾಪಟುಗಳು ಪ್ರಾಬಲ್ಯ ಮೆರೆದರು. ಅವರು ತಮ್ಮ ದೇಶಕ್ಕಾಗಿ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದರು.

ಎಂಟನೇ ವಯಸ್ಸಿನಲ್ಲಿ ತನ್ನ ಅಭ್ಯಾಸವನ್ನು ಪ್ರಾರಂಭಿಸಿದ್ದರಂತೆ ಜಪಾನ್‌ನ ನಿಶಿಯಾ ಮೊಮೊಜಿ ಸ್ಕೇಟ್‌ಬೋರ್ಡಿಂಗ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ನಂತರ ಭಾವುಕರಾದರು. ಮೊಮೊಜಿಗೆ ಈ ಯಶಸ್ಸು ಬಹಳ ಮುಖ್ಯವಾಗಿತ್ತು. ಮೊದಲ ಬಾರಿಗೆ ಕ್ರೀಡೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದಿದ್ದರಿಂದ ಮೊಮೊಜಿ ಭಾವಕರಾಗಿ ಕ್ರೀಡಾಂಗಣದಲ್ಲೇ ಕಣ್ಣೀರು ಹಾಕಿದರು. ಮತ್ತೊಂದೆಡೆ, ಮಹಿಳೆಯರ ಸ್ಕೇಟ್‌ಬೋರ್ಡಿಂಗ್‌ನಲ್ಲಿ ಬೆಳ್ಳಿ ಪದಕ ವಿಜೇತೆ ಬ್ರೆಜಿಲಿಯನ್ ರೈಸಾ ಲೀಲ್ ತನ್ನ ಎಂಟನೇ ವಯಸ್ಸಿನಲ್ಲಿ ತನ್ನ ಅಭ್ಯಾಸವನ್ನು ಪ್ರಾರಂಭಿಸಿದ್ದರಂತೆ. ಇಂದು, 5 ವರ್ಷಗಳ ಕಠಿಣ ಪರಿಶ್ರಮದ ನಂತರ, ಅವರು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಇತಿಹಾಸ ನಿರ್ಮಿಸಿದರು. ರೈಸಾ ಲಿಲ್ಲೆ ಅವರನ್ನು ಬ್ರೆಜಿಲ್‌ನಲ್ಲಿ ಸ್ಕೇಟ್‌ಬೋರ್ಡಿಂಗ್ ರಾಣಿ ಎಂದು ಕರೆಯುತ್ತಾರೆ. ಅವರು 2015 ರಲ್ಲಿ ಸ್ಕೇಟ್‌ಬೋರ್ಡಿಂಗ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನೂ ಗೆದಿದ್ದರು.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ