AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics 2020: ಚೀನಾದ ವೇಟ್​ಲಿಫ್ಟರ್​ ಮೇಲೆ ಅನುಮಾನ: ಬೆಳ್ಳಿ ಗೆದ್ದ ಮೀರಾಬಾಯಿ ಚಾನುಗೆ ಚಿನ್ನ ಸಿಗುವ ಸಾಧ್ಯತೆ

Mirabai Chanu: ವರ್ಲ್ಡ್ ಅ್ಯಂಟಿ ಡೋಪಿಂಗ್ ಏಜೆನ್ಸಿ (ವಿಶ್ವ ಉದ್ದೀಪನ ನಿಗ್ರಹ ಘಟಕ), ಒಲಿಂಪಿಕ್ಸ್‌ನಲ್ಲಿ ಸುಮಾರು 5,000 ಕ್ರೀಡಾಪಟುಗಳನ್ನ ಹಲವು ಬಾರಿ ಉದ್ದೀಪನ ಪರೀಕ್ಷೆಗೆ ಒಳಪಡಿಸಿದ್ದಾರೆ. ಸ್ಪರ್ಧೆಯ ಒಳಗೆ ಮತ್ತು ಹೊರಗೆ ಕ್ರೀಡಾಪಟುಗಳ ರಕ್ತದ ಮಾದರಿಗಳನ್ನ ಸಂಗ್ರಹಿಸಲಾಗುತ್ತಿದೆ.

Tokyo Olympics 2020: ಚೀನಾದ ವೇಟ್​ಲಿಫ್ಟರ್​ ಮೇಲೆ ಅನುಮಾನ: ಬೆಳ್ಳಿ ಗೆದ್ದ ಮೀರಾಬಾಯಿ ಚಾನುಗೆ ಚಿನ್ನ ಸಿಗುವ ಸಾಧ್ಯತೆ
Mirabai Chanu
TV9 Web
| Edited By: |

Updated on: Jul 26, 2021 | 5:23 PM

Share

ಟೊಕಿಯೋ ಒಲಂಪಿಕ್ಸ್​ನಲ್ಲಿ ಶನಿವಾರ ಭಾರತದ ವೇಟ್​ ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದರು. 49 ಕೆಜಿ ವೇಟ್-ಲಿಫ್ಟಿಂಗ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಒಟ್ಟು 202 ಕೆಜಿ ಭಾರ ಎತ್ತುವ (87 ಕೆಜಿ ಸ್ನ್ಯಾಚ್ ಮತ್ತು ಕ್ಲೀನ್ ಮತ್ತು ಜರ್ಕ್​ನಲ್ಲಿ 115 ಕೆಜಿ) ಮೂಲಕ ಇತಿಹಾಸ ನಿರ್ಮಿಸಿದ್ದರು. ಇದೇ ವೇಳೆ ಚೀನಾದ ಹೂ ಜಿಹುಯಿ ಒಟ್ಟು 210 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಪಡೆದುಕೊಂಡಿದ್ದರು. ಹಾಗೆಯೇ ಇಂಡೋನೇಷ್ಯಾದ ವಿಂಡಿ ಕೆಂಟಿಕಾ ಆಯೆಷಾ ಒಟ್ಟು 194 ಕೆಜಿ ತೂಕ ಎತ್ತಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದರು.

ಇತ್ತ 210 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಪಡೆದು ವಿಶ್ವದಾಖಲೆ ಬರೆದಿದ್ದ ಹೂ ಜಿಹುಯಿ ಮೇಲೆ ಇದೀಗ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನಲೆಯಲ್ಲಿ ಚೀನಾ ವೇಟ್ ಲಿಫ್ಟರ್​ನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಇದಕ್ಕಾಗಿ ಟೊಕಿಯೋದಲ್ಲೇ ಉಳಿಯುವಂತೆ ಹೂ ಜಿಹುಯಿಗೆ ಸೂಚಿಸಲಾಗಿದ್ದು, ಅದರಂತೆ ಜಿಹುಯಿ ಅವರಿಗೆ ಉದ್ದೀಪನ ಮದ್ದು ಸೇವಿಸಿದ್ದಾರೆಯೇ ಎಂಬ ಪರೀಕ್ಷೆ ನಡೆಸಲಾಗುತ್ತದೆ. ಒಂದು ವೇಳೆ ಈ ಟೆಸ್ಟ್​ನಲ್ಲಿ ಚೀನಾ ವೇಟ್​ಲಿಫ್ಟರ್ ಉದ್ದೀಪನ ಮದ್ದು ತೆಗೆದುಕೊಂಡಿರುವುದು ದೃಢಪಟ್ಟರೆ, ಮೀರಾಬಾಯಿ ಚಾನುಗೆ ಚಿನ್ನದ ಪದಕ ಲಭಿಸಿದೆ. ಹಾಗೆಯೇ ಬೆಳ್ಳಿ ಪದಕ ಇಂಡೋನೇಷ್ಯಾದ ವಿಂಡಿ ಕೆಂಟಿಕಾ ಆಯೆಷಾ ಪಾಲಾಗಲಿದೆ.

ವರ್ಲ್ಡ್ ಅ್ಯಂಟಿ ಡೋಪಿಂಗ್ ಏಜೆನ್ಸಿ (ವಿಶ್ವ ಉದ್ದೀಪನ ನಿಗ್ರಹ ಘಟಕ), ಒಲಿಂಪಿಕ್ಸ್‌ನಲ್ಲಿ ಸುಮಾರು 5,000 ಕ್ರೀಡಾಪಟುಗಳನ್ನ ಹಲವು ಬಾರಿ ಉದ್ದೀಪನ ಪರೀಕ್ಷೆಗೆ ಒಳಪಡಿಸಿದ್ದಾರೆ. ಸ್ಪರ್ಧೆಯ ಒಳಗೆ ಮತ್ತು ಹೊರಗೆ ಕ್ರೀಡಾಪಟುಗಳ ರಕ್ತದ ಮಾದರಿಗಳನ್ನ ಸಂಗ್ರಹಿಸಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಕ್ರೀಡಾಪಟುಗಳು ಉದ್ದೀಪನ ಮದ್ದು ಸೇವನೆ ಅಥವಾ ನಿಷೇಧಿತ ವಸ್ತುಗಳ ಸೇವನೆ ಕಂಡು ಬಂದರೆ ಅವರನ್ನು ಒಲಿಂಪಿಕ್ ಕ್ರೀಡಾಕೂಟದಿಂದ ವಜಾಗೊಳಿಸಲಾಗುತ್ತದೆ.

ಇದೀಗ ಡೋಪಿಂಗ್ ಟೆಸ್ಟ್​ಗಾಗಿ ಚಿನ್ನದ ಪದಕ ವಿಜೇತೆ ಹೂ ಜಿಹುಯಿ ಅವರನ್ನು ವಿಶ್ವ ಉದ್ದೀಪನ ನಿಗ್ರಹ ಘಟಕವು ಟೊಕಿಯೋದಲ್ಲೇ ಉಳಿಯುವಂತೆ ತಿಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಂದು ವೇಳೆ ಈ ಪರೀಕ್ಷೆಯಲ್ಲಿ ಚೀನಾ ವೇಟ್ ಲಿಫ್ಟರ್ ಉದ್ದೀಪನ ಔಷಧಿ ತೆಗೆದುಕೊಂಡಿರುವುದು ದೃಢಪಟ್ಟರೇ ಭಾರತದ ಮೀರಾಬಾಯಿ ಚಾನು ಅವರಿಗೆ ಚಿನ್ನದ ಪದಕ ನೀಡಲಾಗುತ್ತದೆ.

ಚಿನ್ನದ ಪದಕ ಸಿಕ್ಕರೆ ಹೊಸ ಇತಿಹಾಸ: ಮೀರಾಬಾಯಿ ಚಾನು ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಪಡೆದ ಎಡನೇ ವೇಟ್​ಲಿಫ್ಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಕರ್ಣಂ ಮಲ್ಲೇಶ್ವರಿ 2000 ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅಂದರೆ, 21 ವರ್ಷಗಳ ನಂತರ ಭಾರತ ಒಲಿಂಪಿಕ್ಸ್‌ನಲ್ಲಿ ಮಹಿಳಾ ವೇಟ್‌ಲಿಫ್ಟಿಂಗ್​ನಲ್ಲಿ ಈ ಬಾರಿ ಪದಕ ಗೆದ್ದಿದೆ. ಒಂದು ವೇಳೆ ಡೋಪಿಂಗ್ ಟೆಸ್ಟ್​ನಲ್ಲಿ ಕಳ್ಳಾಟ ಸಾಬೀತಾಗಿ ಚಿನ್ನದ ಪದಕ ಗೆದ್ದ ಹೂ ಜಿಹುಯಿ ಅನರ್ಹಗೊಂಡರೆ ಮೀರಾಬಾಯಿ ಚಾನುಗೆ ಚಿನ್ನದ ಪದಕ ಲಭಿಸಲಿದೆ. ಇದು ನಡೆದರೆ ಭಾರತಕ್ಕಾಗಿ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ಮೊದಲ ಮಹಿಳೆ ಹಾಗೂ ವೇಟ್​ಲಿಫ್ಟಿಂಗ್​ನಲ್ಲಿ ಗೋಲ್ಡ್ ಮೆಡಲ್ ಪಡೆದ ಪ್ರಥಮ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಮೀರಾಬಾಯಿ ಚಾನು ಪಾತ್ರರಾಗಲಿದ್ದಾರೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾಗೆ ಮತ್ತಿಬ್ಬರು ಆಟಗಾರರ ಆಯ್ಕೆ

ಇದನ್ನೂ ಓದಿ: ಸೂರ್ಯಕುಮಾರ್ ಔಟ್ ಆಗುತ್ತಿದ್ದಂತೆ ಅಸಮಾಧಾನ ಹೊರಹಾಕಿದ ರಾಹುಲ್ ದ್ರಾವಿಡ್

(Tokyo Olympics 2020: Mirabai Chanu stands chance to get gold if Chinese weightlifter fails dope test)

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ