Tokyo Olympics: ಇದು ಐತಿಹಾಸಿಕ ಕ್ಷಣ ಪ್ರತಿಯೊಬ್ಬ ಭಾರತೀಯನ ನೆನಪಲ್ಲಿ ಉಳಿಯುವಂತಹ ದಿನ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಭಾರತದ ಅಮೋಘ ಜಯಕಂಡು ಹಾಡಿಹೊಗಳಿದ್ದಾರೆ. ಇದೊಂದು ಐತಿಹಾಸಿಕ ಕ್ಷಣ. ಪ್ರತಿಯೊಬ್ಬ ಭಾರತೀಯನ ನೆನಪಿನಲ್ಲಿ ಈ ದಿನ ಮರೆಯಲು ಸಾಧ್ಯವಿಲ್ಲಎಂದು ಟ್ವೀಟ್ ಮಾಡಿದ್ದಾರೆ.

Tokyo Olympics: ಇದು ಐತಿಹಾಸಿಕ ಕ್ಷಣ ಪ್ರತಿಯೊಬ್ಬ ಭಾರತೀಯನ ನೆನಪಲ್ಲಿ ಉಳಿಯುವಂತಹ ದಿನ: ಪ್ರಧಾನಿ ಮೋದಿ
Narendra Modi and Indian Hockey Team
Follow us
TV9 Web
| Updated By: Vinay Bhat

Updated on: Aug 05, 2021 | 9:52 AM

ಟೋಕಿಯೋ ಒಲಿಂಪಿಕ್ಸ್‌ನ (Tokyo Olympics) ಹಾಕಿಯಲ್ಲಿ ಭಾರತ ತಂಡ ಬರೋಬ್ಬರಿ 41 ವರ್ಷಗಳ ಪದಕದ ಬರವನ್ನು ನೀಗಿಸಿದೆ. ಇಂದು ನಡೆದ ಪಂದ್ಯದಲ್ಲಿ ಜರ್ಮನಿ ತಂಡವನ್ನು ಭಾರತ ಪುರುಷರ ಹಾಕಿ ತಂಡ 5-4 ಗೋಲುಗಳ ಅಂತರದಿಂದ ಜಯಿಸಿದ್ದು, ಇದರೊಂದಿಗೆ 1980ರ ಬಳಿಕ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯಲ್ಲಿ ಪದಕ ಗೆದ್ದು ಸಂಭ್ರಮಿಸಿತು. ಕೊನೆಯ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ಗೆದ್ದು ಬೀಗಿದ್ದಕ್ಕೆ ಇಡೀ ದೇಶವೇ ತಲೆಬಾಗಿದೆ. ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ.

ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ಭಾರತದ ಅಮೋಘ ಜಯಕಂಡು ಹಾಡಿಹೊಗಳಿದ್ದಾರೆ. “ಇದೊಂದು ಐತಿಹಾಸಿಕ ಕ್ಷಣ. ಪ್ರತಿಯೊಬ್ಬ ಭಾರತೀಯನ ನೆನಪಿನಲ್ಲಿ ಈ ದಿನ ಮರೆಯಲು ಸಾಧ್ಯವಿಲ್ಲ. ಕಂಚು ಗೆದ್ದ ನಮ್ಮ ಭಾರತದ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು. ಈ ಸಾಧನೆಯೊಂದಿಗೆ ಅವರು ಇಡೀ ರಾಷ್ಟ್ರದ ಜೊತೆ ನಮ್ಮ ಯುವಕರ ಕಲ್ಪನೆಯನ್ನು ಸೆರೆಹಿಡಿದಿದ್ದಾರೆ. ಭಾರತ ನಮ್ಮ ಹಾಕಿ ತಂಡದ ಬಗ್ಗೆ ಹೆಮ್ಮೆ ಪಡುವಂತಾಗಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇವರ ಜೊತೆಗೆ ಅನಿಲ್ ಕುಂಬ್ಳೆ, ಗೌತಮ್ ಗಂಭೀರ್, ವಿರೇಂದ್ರ ಸೆಹ್ವಾಗ್ ಸೇರಿದಂತೆ ಅನೇಕ ಕ್ರಿಕೆಟಿಗರು ಕೂಡ ಅಭಿನಂದನೆ ಸಲ್ಲಿಸಿದ್ದಾರೆ.

ಒಲಿಂಪಿಕ್ಸ್ ಹಾಕಿಯಲ್ಲಿ ನಾಲ್ಕು ದಶಕಗಳಲ್ಲೇ ಮೊದಲ ಬಾರಿಗೆ ಕಂಚಿನ ಪದಕ ಜಯಿಸುವ ಮೂಲಕ ಭಾರತ ಹಾಕಿಯಲ್ಲಿ ಹೊಸ ಯುಗ ಆರಂಭಸಿದೆ. ಕಂಚಿನ ಪದಕಕ್ಕಾಗಿ ನಡೆದ ಸೆಣೆಸಾಟದಲ್ಲಿ ಜರ್ಮನಿ ತಂಡದ ಸವಾಲನ್ನು ಭಾರತ 5-4 ಅಂತರದಿಂದ ಹಿಮ್ಮೆಟ್ಟಿಸಿತು. ಈ ಮೂಲಕ 1980ರ ಒಲಿಂಪಿಕ್ಸ್ ಬಳಿಕ ಇದೇ ಮೊದಲ ಬಾರಿಗೆ ಪದಕ ಸಾಧನೆ ಮಾಡಿತು. ಈ ಮೂಲಕ ಭಾರತ ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ನಾಲ್ಕನೇ ಪದಕವನ್ನು ಬುಟ್ಟಿಗೆ ಹಾಕಿಕೊಂಡಿತು.

Tokyo Olympics: ಕಂಚಿನ ಪದಕ ಗೆದ್ದು ಭಾರತ ಹಾಕಿ ತಂಡದ ಐತಿಹಾಸಿಕ ಸಾಧನೆ: 41 ವರ್ಷದ ಬಳಿಕ ಚೊಚ್ಚಲ ಪದಕ

Tokyo Olympics: ಭಾರತಕ್ಕಿಂದು ಎರಡು ಪದಕದ ನಿರೀಕ್ಷೆ: ಹಾಕಿ ತಂಡದ ಮೇಲೆ ಎಲ್ಲರ ಕಣ್ಣು

(Tokyo Olympics 2020 PM Nrendra Modi congratulates India mens hockey team for winning bronze medal in Olympics)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್