ಟೋಕಿಯೋ ಒಲಿಂಪಿಕ್ಸ್ 2020ಕ್ಕೆ (Tokyo Olympics) ಭಾನುವಾರ ಅಧಿಕೃತವಾಗಿ ತೆರೆಬಿದ್ದಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದ ಈ ಬಾರಿ ಒಲಿಂಪಿಕ್ಸ್‌ನಲ್ಲಿ ಭಾರತ ಒಟ್ಟು 7 ಪದಕಗಳನ್ನು ಬಾಚಿಕೊಳ್ಳುವ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಿತು. ಪ್ರಮುಖವಾಗಿ ಅನೇಕ ವರ್ಷಗಳ ಬಳಿಕ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಬಂಗಾರದ ಪದಕ ಸಿಕ್ಕಿತು.
ಅಥ್ಲೀಟ್ ನೀರಜ್ ಚೋಪ್ರಾ ಅವರು ಜಾವೆಲಿನ್ ಎಸೆತದಲ್ಲಿ ದೇಶಕ್ಕೆ ಚಿನ್ನವನ್ನು ತಂದುಕೊಟ್ಟರು. ಯಾರೂ ನಿರೀಕ್ಷಿಸಿರದ ಗಾಲ್ಫ್ ಕ್ರೀಡೆಯಲ್ಲಿ ಕರ್ನಾಟಕದ ಅದಿತಿ ಅಮೋಘ ಪ್ರದರ್ಶನ ನೀಡಿದರು. ಒಟ್ಟಾರೆಯಾಗಿ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ 4 ಕಂಚು ಸಹಿತ 7 ಮೆಡಲ್ ಪಡೆದ ಭಾರತಕ್ಕೆ ಇಡೀ ದೇಶವೇ ಅಭಿನಂದನೆ ಸಲ್ಲಿಸುತ್ತಿದೆ.
ಇದರ ನಡುವೆ ಟೋಕಿಯೋ ಓಲಿಂಪಿಕ್ಸ್‌ನಲ್ಲಿ ಪದಕ ಗಳಿಸಿದವರಿಗೆ ಇಂದು ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ 6.30ಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಅವರು ದೆಹಲಿಯ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ಪದಕಕ್ಕೆ ಮುತ್ತಿಟ್ಟ ಕ್ರೀಡಾಪಟುಗಳಿಗೆ ಸನ್ಮಾನ ಮಾಡಲಿದ್ದಾರೆ.
ಜಗತ್ತಿನ 210 ದೇಶಗಳಿಂದ 11 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಬಾರಿಯ ಒಲಿಂಪಿಕ್ನಲ್ಲಿ ಭಾಗವಹಿಸಿದ್ದರು. ಅದರಲ್ಲೂ ಭಾರತದಿಂದ 228 ಸದಸ್ಯರ ತಂಡ ಪಾಲ್ಗೊಂಡಿತ್ತು. ಇದರಲ್ಲಿ 22 ರಾಜ್ಯಗಳ 127 ಕ್ರೀಡಾಪಟುಗಳು ವಿವಿಧ ಕ್ರೀಡೆಯಲ್ಲಿದ್ದರು. ಭಾರತಕ್ಕೆ ಈ ಒಲಿಂಪಿಕ್ಸ್ ತುಂಬಾನೆ ವಿಶೇಷವಾಗಿತ್ತು. ಒಟ್ಟು 7 ಪದಕಗಳನ್ನು ಜಯಿಸಿ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತವು ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿತು.
ಭಾರತವು 2012ರ ಲಂಡನ್ ಒಲಿಂಪಿಕ್ಸ್ ಪದಕದ ಸಾಧನೆ (6 ಪದಕ)ಯನ್ನು ಈ ಬಾರಿ ಮೀರಿ ನಿಂತಿತು. ವೇಟ್ ಲಿಫ್ಟರ್ ಮೀರಾಬಾಯಿ ಚಾನು ಭಾರತದ ಪದಕದ ಖಾತೆ ತೆರೆದಿದ್ದರು. ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧೂ ಕಂಚಿನ ಪದಕ ತನ್ನದಾಗಿಸಿಕೊಂಡರು. ಕುಸ್ತಿಪಟು ರವಿ ಕುಮಾರ ದಹಿಯಾ ನಿರೀಕ್ಷೆಗೂ ಮೀರಿ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದುಕೊಂಡರು. ನಿರೀಕ್ಷೆ ಮೂಡಿಸಿದ್ದ ಬಜರಂಗ್ ಪುನಿಯಾ ಹಾಗೂ ವಿನೇಶ್ ಫೋಗಟ್ ಪೈಕಿ ಪುನಿಯಾ ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಪುರುಷರ ತಂಡ ಕಂಚಿನ ಪದಕ ಪಂದ್ಯದಲ್ಲಿ ಜರ್ಮನಿಯನ್ನು ಸೋಲಿಸಿ 41 ವರ್ಷಗಳ ಬಳಿಕ ದೇಶಕ್ಕೆ ಮೊದಲ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟಿತ್ತು.
ಭಾರತೀಯರು ಅತೀ ಹೆಚ್ಚು ಪ್ರೀತಿಸುವ ಟೀಮ್ ಇಂಡಿಯಾ ಪ್ಲೇಯರ್ಸ್ ಇವರಂತೆ: ಈ ಪಟ್ಟಿಯಲ್ಲಿಲ್ಲ ಧೋನಿ, ಕೊಹ್ಲಿ
India vs England: ಇದು ನಾಚಿಕೆಗೇಡು – ಭಾರತ ಇಂಗ್ಲೆಂಡ್ ಮೊದಲ ಟೆಸ್ಟ್ ಡ್ರಾಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ
Published On - 10:27 am, Mon, 9 August 21