ಕಂಚಿನ ಪದಕ ಗೆದ್ದು ಭಾರತ ಹಾಕಿ ತಂಡದ ಐತಿಹಾಸಿಕ ಸಾಧನೆ: 41 ವರ್ಷದ ಬಳಿಕ ಚೊಚ್ಚಲ ಪದಕ

India vs Germany | Tokyo Olympics: ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು. ಮುಂದಿನ ನಿಮಿಷದಲ್ಲಿ ಭಾರತಕ್ಕೆ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ದಾಖಲಿಸುವ ಅವಕಾಶ ಇತ್ತಾದರು ಸ್ವಲ್ಪದರಲ್ಲೇ ಕೈಚೆಲ್ಲಿತು.

ಕಂಚಿನ ಪದಕ ಗೆದ್ದು ಭಾರತ ಹಾಕಿ ತಂಡದ ಐತಿಹಾಸಿಕ ಸಾಧನೆ: 41 ವರ್ಷದ ಬಳಿಕ ಚೊಚ್ಚಲ ಪದಕ
Indian Hockey team
Follow us
| Updated By: Digi Tech Desk

Updated on:Aug 05, 2021 | 11:22 AM

ಟೋಕಿಯೋ ಒಲಿಂಪಿಕ್ಸ್ (Tokyo Olympics) 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್​ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು. ಮುಂದಿನ ನಿಮಿಷದಲ್ಲಿ ಭಾರತಕ್ಕೆ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ದಾಖಲಿಸುವ ಅವಕಾಶ ಇತ್ತಾದರು ಸ್ವಲ್ಪದರಲ್ಲೇ ಕೈಚೆಲ್ಲಿತು. ಈ ಮೂಲಕ ಮೊದಲ ಕ್ವಾರ್ಟರ್​ನಲ್ಲಿ ಜರ್ಮನಿ 1-0 ಮುನ್ನಡೆ ಸಾಧಿಸಿತು.

ಎರಡನೇ ಕ್ವಾರ್ಟರ್​ನ ಆರಂಭದಲ್ಲೇ ಭಾರತ ಕಮ್​ಬ್ಯಾಕ್ ಮಾಡಿತು. ಸಿಮ್ರಂಜಿತ್ ಸಿಂಗ್ ಚೆಂಡನ್ನು ನೆಟ್​ನೊಳಗೆ ಅಟ್ಟಿ ಮೊದಲ ಗೋಲು ದಾಖಲಿಸಿದರು. ಇದಾದ ಸ್ವಲ್ಪದರಲ್ಲೇ ಜರ್ಮನಿ ಒಂದರ ಹಿಂದೆ ಒಂದರಂತೆ ಸತತ ಎರಡು ಗೋಲು ಬಾರಿಸಿತು. ಈ ಸಂದರ್ಭ ಆಕ್ರಮಣಕಾರಿ ಆಟಕ್ಕೆ ಮುಂದಾದ ಭಾರತ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಹಾರ್ದಿಕ್ ಸಿಂಗ್ ಅದ್ಭುತವಾಗಿ ಉಪಯೋಗಿಸಿಕೊಂಡು 2ನೇ ಗೋಲು ದಾಖಲಿಸಿದರು. ಇದರ ಬೆನ್ನಲ್ಲೆ ಮತ್ತೊಂದು ಪೆನಾಲ್ಟಿ ಕಾರ್ನರ್​ನಲ್ಲಿ ಗೋಲು ಸಿಡಿಸುವ ಮೂಲಕ ಭಾರತ  3-3ರ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು.

ಮೂರನೇ ಕ್ವಾರ್ಟರ್​ನ ಆರಂಭದಲ್ಲೇ ಭಾರತಕ್ಕೆ ಪೆನಾಲ್ಟಿ ಕಾರ್ನರ್ ಅವಕಾಶ ದಕ್ಕಿತು. ಇದನ್ನು ಅತ್ಯುತ್ತಮವಾಗಿ ಉಪಯೋಗಿಸಿಕೊಂಡ ರುಪಿಂದರ್ ಪಾಲ್ ಸಿಂಗ್ ಗೋಲು ಸಿಡಿಸಿ 4-3ರ ಮುನ್ನಡೆ ಸಾಧಿಸಿದರು. ಇದಾದ ಮೂರು ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಚೆಂಡನ್ನು ನೆಟ್ ಒಳಗೆ ಹಾಕಿ ಮುನ್ನಡೆ ಸಾಧಿಸಿದರು. ನಾಲ್ಕನೆ ಕ್ವಾರ್ಟರ್​ನಲ್ಲಿ ಜರ್ಮನಿ ಪೆನಾಲ್ಟಿ ಮೂಲಕ ತನ್ನ ಗೋಲಿನ ಸಂಖ್ಯೆಯನ್ನು 4ಕ್ಕೆ ಏರಿಸಿತು. ಈ ಮೂಲಕ ಪಂದ್ಯ ಮತ್ತಷ್ಟು ರೋಚಕತೆ ಸೃಷ್ಟಿಸಿತು. ನಂತರದಲ್ಲಿ ಜರ್ಮನಿಗೆ ಗೋಲು ದಾಖಲಿಸಲು ಅವಕಾಶ ಕೊಡದ ಭಾರತ ಒಂದು ಅಂಕದಿಂದ ಮುನ್ನಡೆ ಸಾಧಿಸಿ ಗೆಲುವು ಕಂಡಿತು.

1972ರ ಬಳಿಕ ಮೊದಲ ಸಲ ಒಲಿಂಪಿಕ್ಸ್‌ ಸೆಮಿಫೈನಲ್‌ ಕಂಡ ಭಾರತಕ್ಕೆ ವಿಶ್ವ ಚಾಂಪಿಯನ್‌ ಬೆಲ್ಜಿಯಂ ಬಲವಾದ ಹೊಡೆತ ನೀಡಿತ್ತು. ಹೀಗಾಗಿ ಕೊನೆಯಲ್ಲಿ ಕಂಚಾದರೂ ಒಲಿಯಲಿ ಎಂಬುದು ದೇಶದ ಕ್ರೀಡಾಭಿಮಾನಿಗಳ ಹಾರೈಕೆಯಾಗಿತ್ತು. ಅದರಂತೆ ಕೋಟ್ಯಾಂತರ ಭಾರತೀಯರ ಆಸೆಯನ್ನು ನಿರಾಸೆಗೊಳಿಸದ ಭಾರತ ಕೊನೆಗೂ ಪದಕಕ್ಕೆ ಕೊರಳೊಡ್ಡಿದೆ. ಜರ್ಮನಿಯ ಆಕ್ರಮಣಕಾರಿ ಆಟಕ್ಕೆ ತಕ್ಕ ಉತ್ತರ ನೀಡಿದ ಮನ್​ಪ್ರೀತ್ ಪಡೆ 5-4 ಗೋಲುಗಳ ಅಂತರದಿಂದ ಗೆದ್ದು 4 ದಶಕಗಳ ಬಳಿಕ ಕಂಚಿನ ಪದಕ ತನ್ನದಾಗಿಸಿದೆ.

ಟೋಕಿಯೋ ಒಲಿಂಪಿಕ್ಸ್​ನ ಸೆಮಿ ಫೈನಲ್ ಸುತ್ತಿನಲ್ಲಿ ವಿಶ್ವ ಚಾಂಪಿಯನ್ ಬೆಲ್ಜಿಯಂ ವಿರುದ್ಧ 2-5 ಗೋಲುಗಳ ಅಂತರದಿಂದ  ಭಾರತ ಸೋತಿತ್ತು.

Published On - 8:47 am, Thu, 5 August 21

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ