Tokyo Olympics: ಗೆಲುವಿನ ಓಟ ಮುಂದುವರೆಸಿದ ಪಿವಿ ಸಿಂಧೂ: ಕ್ವಾರ್ಟರ್ ಫೈನಲ್​ಗೆ ಲಗ್ಗೆ

PV Sindhu: ಸಾಕಷ್ಟು ರೋಚಕತೆ ಸೃಷ್ಟಿಸಿದ್ದ ಈ ಪಂದ್ಯದಲ್ಲಿ ಮಿಯಾ ವಿರುದ್ಧ 21-15, 21-13 ಅಂಕಗಳ ಅಂತರದಲ್ಲಿ ಸಿಂಧೂ ಅವರಿ ಮೇಲುಗೈ ಸಾಧಿಸಿದರು.

Tokyo Olympics: ಗೆಲುವಿನ ಓಟ ಮುಂದುವರೆಸಿದ ಪಿವಿ ಸಿಂಧೂ: ಕ್ವಾರ್ಟರ್ ಫೈನಲ್​ಗೆ ಲಗ್ಗೆ
ಪಿವಿ ಸಿಂಧು
Follow us
Vinay Bhat
|

Updated on:Jul 29, 2021 | 7:32 AM

ಟೋಕಿಯೋ ಒಲಿಂಪಿಕ್ಸ್​ನಲ್ಲಿ (Tokyo Olympics) ಭಾರತ ಗುರುವಾರ ಉತ್ತಮ ಆಟ ಪ್ರದರ್ಶಿಸುತ್ತಿದೆ. ಮಹಿಳೆಯರ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧೂ (PV Sindhu) ಅವರು ಡೆನ್ಮಾರ್ಕ್​ನ ಮಿಯಾ ಬ್ಲಿಚ್​ಫೆಲ್ಡ್ಟ್​​​​ ವಿರುದ್ಧ ರೌಂಡ್ 16 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ.

ಸಾಕಷ್ಟು ರೋಚಕತೆ ಸೃಷ್ಟಿಸಿದ್ದ ಈ ಪಂದ್ಯದಲ್ಲಿ ಮಿಯಾ ವಿರುದ್ಧ 21-15, 21-13 ಅಂಕಗಳ ಅಂತರದಲ್ಲಿ ಸಿಂಧೂ ಅವರು ಮೇಲುಗೈ ಸಾಧಿಸಿದರು. ಸುಮಾರು 40 ನಿಮಿಷಗಳ ಕಾಲ ಈ ಪಂದ್ಯ ನಡೆಯಿತು.

ಪಂದ್ಯದ ಆರಂಭದಿಂದಲೂ ಆಕ್ರಮಣಕಾರಿ ಆಟಕ್ಕೆ ಮುಂದಾಗಿದ್ದ ಸಿಂಧೂ ಮೊದಲ ಸೆಟ್ ನಲ್ಲಿ 21-15ರಲ್ಲಿ ಮುನ್ನಡೆ ಸಾಧಿಸಿದರು. ಬಳಿಕ 2ನೇ ಸೆಟ್ ನಲ್ಲಿ ಮಿಯಾ ಕೊಂಚ ವಿರೋಧ ತೋರಿದರಾದೂ 2ನೇ ಸೆಟ್ ಅನ್ನೂ ಕೂಡ ಸಿಂಧು 21-13 ಅಂತರದಲ್ಲಿ ತಮ್ಮದಾಗಿಸಿಕೊಂಡು ಜಯ ಸಾಧಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಇನ್ನೂ ರೋಯಿಂಗ್ ವಿಭಾಗದಲ್ಲಿ ಭಾರತ ಹೊಸ ದಾಖಲೆ ಬರೆದಿದೆ. ಅರ್ಜುನ್ ಮತ್ತು ಅರವಿಂದ್ ಜೋಡಿಯ ಭಾರತದ ರೋಯಿಂಗ್ ತಂಡ 25 ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಭಾರತದ ಯಾವುದೇ ರೋವರ್ಸ್ ಮಾಡಿರದ ದಾಖಲೆಯನ್ನು ನಿರ್ಮಿಸಿದ್ದಾರೆ.

ಇಂದು ಮುಂಜಾನೆ ರೋಯಿಂಗ್ ವಿಭಾಗದ ಡಬಲ್ಸ್ ಸ್ಕಲ್ಸ್ ಫೈನಲ್ ಬಿಯಲ್ಲಿ ಭಾಗವಹಿಸಿದ ಅರ್ಜುನ್ ಮತ್ತು ಅರವಿಂದ್ ಜೋಡಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಒಟ್ಟಾರೆ 11ನೇ ಸ್ಥಾನವನ್ನು ಪಡೆದುಕೊಂಡಿರುವ ಅರ್ಜುನ್ ಮತ್ತು ಅರವಿಂದ್ 6:29.66 ಟೈಮ್ ಮಾರ್ಕ್‌ನಲ್ಲಿ ಗುರಿಯನ್ನು ತಲುಪಿದರು.

ಭಾರತಕ್ಕೆ ಇಲ್ಲಿ ಪದಕ ಗೆಲ್ಲುವ ಅವಕಾಶ ಕೈತಪ್ಪಿತಾದರೂ ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಭಾರತದ ಯಾವುದೇ ರೋವರ್ಸ್ ಮುಟ್ಟದಂತಹ ಸ್ಥಾನವನ್ನು ಅರ್ಜುನ್ ಮತ್ತು ಅರವಿಂದ್ ಜೋಡಿ ಮುಟ್ಟಿ ನೂತನ ದಾಖಲೆ ಬರೆದರು.

Tokyo Olympics: ರೋಚಕ ಘಟ್ಟದಲ್ಲಿ ಹಾಕಿ ಪಂದ್ಯ: ರೋಯಿಂಗ್ ಇತಿಹಾಸದಲ್ಲಿ ಭಾರತದ ವಿಶೇಷ ಸಾಧನೆ

Tokyo Olympics 2020: ಪುರುಷರ ಬ್ಯಾಡ್ಮಿಂಟನ್​ನಲ್ಲಿ ಚಿನ್ನ ಗೆಲ್ಲುವರೆಂದು ನಿರೀಕ್ಷಿಸಲಾಗಿದ್ದ ವಿಶ್ವ ಚಾಂಪಿಯನ್ ಮೊಮೊಟಾ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದರು!

(Badminton: PV Sindhu defeats Mia Blichfeldt in straight sets, books place in quarter-final)

Published On - 7:20 am, Thu, 29 July 21

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್