AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Punia: ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ರವಿ ದಹಿಯಾ, ದೀಪಕ್ ಪುನಿಯಾ: ಭಾರತಕ್ಕೆ ಪದಕದ ನಿರೀಕ್ಷೆ

Tokyo Olympics 2020: ಪುರುಷರ 86 ಕೆ.ಜಿ. ಸ್ಪರ್ಧೆಯಲ್ಲಿ ಭಾರತದ ಮತ್ತೋರ್ವ ಕುಸ್ತಿಪಟು ದೀಪಕ್‌ ಪುನಿಯಾ ಕೂಡಾ ನೈಜೀರಿಯಾದ ಅಗಿಮೋರ್ ಎದುರು 12-1 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೊನೇಯ ಕ್ಷಣದಲ್ಲಿ ಗೆಲುವು ಸಾಧಿಸಿ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದ್ದಾರೆ.

Deepak Punia: ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ರವಿ ದಹಿಯಾ, ದೀಪಕ್ ಪುನಿಯಾ: ಭಾರತಕ್ಕೆ ಪದಕದ ನಿರೀಕ್ಷೆ
Deepak Punia
TV9 Web
| Edited By: |

Updated on:Aug 04, 2021 | 10:26 AM

Share

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪುರುಷ ಕುಸ್ತಿಪಟುಗಳಾದ ರವಿ ದಹಿಯಾ, ದೀಪಕ್ ಪುನಿಯಾ ಕ್ವಾರ್ಟರ್‌ ಫೈನಲ್‌ನಲ್ಲಿ ಗೆದ್ದು ಬೀಗಿದ್ದು ಸೆಮಿ ಫೈನಲ್​ಗೆ ಪ್ರವೇಶ ಪಡೆದಿದ್ದಾರೆ. ಪುರುಷರ 57 ಕೆ.ಜಿ ವಿಭಾಗದಲ್ಲಿ ರವಿ ದಹಿಯಾ ಮತ್ತು ಪುರುಷರ 86 ಕೆ.ಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿದರು. ಈ ಮೂಲಕ ಪದಕದ ಆಸೆ ಮೂಡಿಸಿದ್ದಾರೆ.

ರವಿ ಅವರು ಪುರುಷರ 57 ಕೆ.ಜಿ. ವಿಭಾಗದ ಫ್ರೀ ಸ್ಟ್ರೈಲ್‌ ಕುಸ್ತಿ ಸ್ಪರ್ಧೆಯಲ್ಲಿ ಕೊಲಂಬಿಯಾದ ಅರ್ಬಾನೊ ಟೈಗರೋಸ್ ಎದುರು 13-2 ಅಂಕಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ ಫೈನಲ್​ನಲ್ಲಿ ಬಲ್ಜೆರಿಯಾದ ಜಾರ್ಗೀ ವಂಗೆಲೊವ್ ಎದುರು 14-4 ಅಂಕಗಳ ಅಂತರದಲ್ಲಿ ಅಮೋಘ ಗೆಲುವು ಸಾಧಿಸಿ ಸೆಮೀಸ್​ಗೆ ಅರ್ಹತೆಗಿಟ್ಟಿಸಿಕೊಂಡಿದ್ದಾರೆ.

ಇತ್ತ ಪುರುಷರ 86 ಕೆ.ಜಿ. ಸ್ಪರ್ಧೆಯಲ್ಲಿ ಭಾರತದ ಮತ್ತೋರ್ವ ಕುಸ್ತಿಪಟು ದೀಪಕ್‌ ಪುನಿಯಾ ಕೂಡಾ ನೈಜೀರಿಯಾದ ಅಗಿಮೋರ್ ಎದುರು 12-1 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇವರು ಚೀನಾದ ಶೂಶೆನ್ ಲಿನ್ ವಿರುದ್ಧ 6-3ರಲ್ಲಿ ರೋಚಕ ಗೆಲುವು ದಾಖಲಿಸಿದರು. ಜಿದ್ದಾಜಿದ್ದಿನಿಂದ ಸಾಗಿದ ಸಮಬಲದ ಹೋರಾಟದ ಕೊನೆಯ ಕ್ಷಣದಲ್ಲಿ ದೀಪಕ್ ಮೇಲುಗೈ ಸಾಧಿಸಿದರು.

ಭಾರತೀಯ ಕಾಲಮಾನ ಅಪರಾಹ್ನ 2.45ಕ್ಕೆ ಸರಿಯಾಗಿ ಸೆಮಿಫೈನಲ್ ಸ್ಪರ್ಧೆಗಳು ನಡೆಯಲಿವೆ. ದೀಪಕ್ ಪುನಿಯಾ ಅಮೆರಿಕದ ಡೇವಿಡ್ ಮೊರಿಸ್ ಸವಾಲನ್ನು ಎದುರಿಸಲಿದ್ದಾರೆ. ಅತ್ತ ರವಿ ದಹಿಯಾಗೆ ಅಂತಿಮ ನಾಲ್ಕರ ಘಟ್ಟದಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಸವಾಲು ಎದುರಾಗಲಿದೆ.

ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತದ ನೀರಜ್ ಚೋಪ್ರಾ (Neeraj Chopra) ಅವರು ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಗ್ರೂಪ್ ಎ ಯಲ್ಲಿ ಸ್ಫರ್ದಿಸಿದ ನೀರಜ್ ಮೊದಲ ಪ್ರಯತ್ನದಲ್ಲೇ 86.65 ಮೀಟರ್ ದೂರದ ಸಾಧನೆ ಮಾಡಿದರು. ಈ ವಿಭಾಗದಲ್ಲಿ ವಿಶ್ವದ ನಂಬರ್ ಒನ್ ಜರ್ಮನಿಯ ಜೊಹಾನ್ಸ್ ವೆಟರ್ 82.04 ಮೀಟರ್ ಸಾಧನೆ ಮಾಡಿದರು. ಆದರೆ, ನೀರಜ್ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಪ್ರದರ್ಶನ ತೋರಿ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ. ಫೈನಲ್ ಪಂದ್ಯ ಆಗಸ್ಟ್ 7 ರಂದು ನಡೆಯಲಿದ್ದು ಭಾರತ ಮತ್ತೊಂದು ಪದಕದ ನಿರೀಕ್ಷೆಯಲ್ಲಿದೆ.

Tokyo Olympic: ಜಾವೆಲಿನ್ ಥ್ರೋನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ನೀರಜ್ ಚೋಪ್ರಾ

India vs England: ಇಂದಿನಿಂದ ಮೊದಲ ಟೆಸ್ಟ್: ಹೊಸ ದಾಖಲೆ ಬರೆಯಲು ಸಜ್ಜಾದ ಟೀಮ್ ಇಂಡಿಯಾದ 7 ಆಟಗಾರರು

(Tokyo Olympics 2021 Ravi Dahiya Deepak Punia into wrestling semis)

Published On - 10:02 am, Wed, 4 August 21