Tokyo Olympics: ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಬಿಸಿಸಿಐಯಿಂದ ಬಂಪರ್ ಆಫರ್

Neeraj Chopra: ಐಪಿಎಲ್​ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನೀರಜ್ ಚೋಪ್ರಾಗೆ 1 ಕೋಟಿ ಬಹುಮಾನ ಘೋಷಿಸಿದೆ.

Tokyo Olympics: ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಬಿಸಿಸಿಐಯಿಂದ ಬಂಪರ್ ಆಫರ್
tokyo olympics BCCI
Follow us
TV9 Web
| Updated By: Vinay Bhat

Updated on: Aug 08, 2021 | 7:29 AM

ಟೋಕಿಯೋ ಒಲಿಂಪಿಕ್ಸ್​ನ (Tokyo Olympics) ಜಾವೆಲಿನ್‌ ತ್ರೋನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಶತಮಾನದ ಬಳಿಕ ಭಾರತಕ್ಕೆ ಒಲಿಂಪಿಕ್ಸ್‌ ಅಥ್ಲೆಟಿಕ್ಸ್​​ನಲ್ಲಿ ಚಿನ್ನ ಗೆದ್ದು ಕೊಟ್ಟಿರುವ ನೀರಜ್‌ ಚೋಪ್ರಾ (Neeraj Chopra) ಅವರ ಸಾಧನೆಗೆ ಇಡೀ ದೇಶವೇ ತಲೆಬಾಗಿದೆ. ಭಾರತವು ಒಲಿಂಪಿಕ್ಸ್ ವೊಂದರಲ್ಲಿ ಒಟ್ಟು 7 ಪದಕಗಳನ್ನು ಜಯಿಸಲು ಚೋಪ್ರಾ ನೆರವಾದರು. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತವು ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿದೆ.

ಭಾರತವು 2012ರ ಲಂಡನ್ ಒಲಿಂಪಿಕ್ಸ್ ಪದಕದ ಸಾಧನೆ (6 ಪದಕ)ಯನ್ನು ಈ ಬಾರಿ ಮೀರಿ ನಿಂತಿದ್ದು ಹೆಮ್ಮೆಯ ವಿಷಯ. ಭಾರತ ಟೋಕಿಯೋ ಒಲಿಂಪಿಕ್ಸ್‌ನಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 4 ಕಂಚಿನ ಪದಕವನ್ನು ಜಯಿಸಿದೆ. ಮೊದಲ ದಿನವೇ ಮಹಿಳಾ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಭಾರತದ ಪದಕದ ಖಾತೆ ತೆರೆದಿದ್ದರು. ಮಹಿಳೆಯರ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಜಯಿಸುವುದರೊಂದಿಗೆ 26ರ ಹರೆಯದ ಮಣಿಪುರದ ಚಾನು ಇತಿಹಾಸ ನಿರ್ಮಿಸಿದ್ದರು.

ಬಾಕ್ಸಿಂಗ್‌ನಲ್ಲಿ ಹಲವು ಖ್ಯಾತನಾಮರು ನಿರಾಸೆಗೊಳಿಸಿದರೂ ಅಸ್ಸಾಂನ 23ರ ವಯಸ್ಸಿನ ಲವ್ಲೀನಾ ಬೊರ್ಗೊಹೈನ್ ಮಹಿಳೆಯರ ವೆಲ್ಟರ್‌ವೇಟ್ ಸ್ಪರ್ಧೆಯಲ್ಲಿ ಸೆಮಿ ಫೈನಲ್ ಪ್ರವೇಶಿಸಿ ಭಾರತಕ್ಕೆ ಪದಕ ಖಚಿತಪಡಿಸಿದರು. ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧೂ ಕಂಚಿನ ಪದಕ ತನ್ನದಾಗಿಸಿಕೊಂಡರು. ಕುಸ್ತಿಪಟು ರವಿ ಕುಮಾರ ದಹಿಯಾ ನಿರೀಕ್ಷೆಗೂ ಮೀರಿ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದುಕೊಂಡರು. ನಿರೀಕ್ಷೆ ಮೂಡಿಸಿದ್ದ ಬಜರಂಗ್ ಪುನಿಯಾ ಹಾಗೂ ವಿನೇಶ್ ಫೋಗಟ್ ಪೈಕಿ ಪುನಿಯಾ ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಪುರುಷರ ತಂಡ ಕಂಚಿನ ಪದಕ ಪಂದ್ಯದಲ್ಲಿ ಜರ್ಮನಿಯನ್ನು ಸೋಲಿಸಿ 41 ವರ್ಷಗಳ ಬಳಿಕ ದೇಶಕ್ಕೆ ಮೊದಲ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟಿತ್ತು.

ಈ ಬಾರಿಯ ಟೋಕಿಯೋ ಒಲೊಂಪಿಕ್ಸ್ 2020 ರಲ್ಲಿ ಅದ್ಭುತ ಪ್ರದರ್ಶನ ತೋರಿ ಪದಕ ಗೆದ್ದ ದೇಶದ ಕ್ರೀಡಾಭಿಮಾನಿಗಳು, ನಟರು, ರಾಜಕಾರಣಿಗಳು ಮತ್ತು ಕ್ರೀಡಾ ಕ್ಷೇತ್ರದ ಹಲವು ಗಣ್ಯರು ಶುಭ ಕೋರಿದ್ದಾರೆ.

ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೂಡ ಇದುವರೆಗೂ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದಿರುವ ಎಲ್ಲಾ ಸ್ಪರ್ಧಿಗಳಿಗೂ ವಿವಿಧ ನಗದು ಪುರಸ್ಕಾರಗಳನ್ನು ಘೋಷಿಸಿದೆ. ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ ಬಿಸಿಸಿಐ 1 ಕೋಟಿ ನಗದು ಪುರಸ್ಕಾರವನ್ನು ಘೋಷಿಸಿದೆ. ಬೆಳ್ಳಿ ಪದಕವನ್ನು ಗೆದ್ದಿದ್ದ ಮೀರಾಬಾಯಿ ಚಾನು ಮತ್ತು ರವಿ ಕುಮಾರ್ ದಾಹಿಯಾಗೆ ತಲಾ 50 ಲಕ್ಷ ರೂಪಾಯಿ ನಗದು ಪುರಸ್ಕಾರ, ಕಂಚಿನ ಪದಕವನ್ನು ಗೆದ್ದಿರುವ ಪಿ ವಿ ಸಿಂಧು, ಲವ್ಲಿನಾ ಬೊರ್ಗಹೈನ್ ಮತ್ತು ಬಜರಂಗ್ ಪುನಿಯಾಗೆ ತಲಾ ತಲಾ 25 ಲಕ್ಷ ಮತ್ತು ಕಂಚಿನ ಪದಕ ಗೆದ್ದಿರುವ ಪುರುಷರ ಹಾಕಿ ತಂಡಕ್ಕೆ 1.25 ಕೋಟಿ ನಗದು ಪುರಸ್ಕಾರವನ್ನು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಅಲ್ಲದೆ ಐಪಿಎಲ್​ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನೀರಜ್ ಚೋಪ್ರಾಗೆ 1 ಕೋಟಿ ಬಹುಮಾನ ಘೋಷಿಸಿದೆ.

Neeraj Chopra: ಚಿನ್ನದ ಹುಡುಗ ‘ಸುಬೇದಾರ್ ನೀರಜ್ ಚೋಪ್ರಾ’ ಬಗ್ಗೆ ನಿಮಗೆಷ್ಟು ಗೊತ್ತು?

Neeraj Chopra Gold: ಬಂಗಾರದ ಮನುಷ್ಯ ನೀರಜ್​ ಚೋಪ್ರಾಗೆ ಮಹೀಂದ್ರಾ XUV 700 ಕಾರ್ ಗಿಫ್ಟ್!

(Tokyo Olympics BCCI announces cash rewards for Tokyo Olympics medal winners CSK to Award Rs 1 Crore for Neeraj Chopra)

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ